ಕೇಂದ್ರದ ನಡೆ ದರ್ಪ, ಕ್ರೌರ್ಯದಿಂದ ಕೂಡಿದೆ: ದಿನೇಶ್ ಗುಂಡೂರಾವ್
ಚಿಕ್ಕಮಗಳೂರು: ನವದೆಹಲಿಯ ಜಂತರ್ ಮಂತರ್ನಲ್ಲಿ ಕೇಂದ್ರ ಸರ್ಕಾರ ನಡೆದುಕೊಂಡ ರೀತಿ ದರ್ಪ ಮತ್ತು ಕ್ರೌರ್ಯದಿಂದ ಕೂಡಿದೆ ಎಂದು ಶಾಸಕ ದಿನೇಶ್ ಗುಂಡೂರಾವ್ ಹೇಳಿದರು.‘ಯಾರು ನಮ್ಮನ್ನು ಪ್ರಶ್ನಿಸಬಾರದು ಎಂಬ ಸರ್ವಾಧಿಕಾರಿ ಧೋರಣೆಯನ್ನು ಕೇಂದ್ರ ಸರ್ಕಾರ ಅನುಸರಿಸುತ್ತಿದೆ. ಅವರ ವಿರುದ್ಧ ಮಾತನಾಡಿದವರಿಗೆ ತೊಂದರೆ ನೀಡುವುದು, ದೇಶದ್ರೋಹಿ ಎಂದು ಕರೆಯುವುದೇ ಅವರ ಕೆಲ
ಚಿಕ್ಕಮಗಳೂರು: ನವದೆಹಲಿಯ ಜಂತರ್ ಮಂತರ್ನಲ್ಲಿ ಕೇಂದ್ರ ಸರ್ಕಾರ ನಡೆದುಕೊಂಡ ರೀತಿ ದರ್ಪ ಮತ್ತು ಕ್ರೌರ್ಯದಿಂದ ಕೂಡಿದೆ ಎಂದು ಶಾಸಕ ದಿನೇಶ್ ಗುಂಡೂರಾವ್ ಹೇಳಿದರು.‘ಯಾರು ನಮ್ಮನ್ನು ಪ್ರಶ್ನಿಸಬಾರದು ಎಂಬ ಸರ್ವಾಧಿಕಾರಿ ಧೋರಣೆಯನ್ನು ಕೇಂದ್ರ ಸರ್ಕಾರ ಅನುಸರಿಸುತ್ತಿದೆ. ಅವರ ವಿರುದ್ಧ ಮಾತನಾಡಿದವರಿಗೆ ತೊಂದರೆ ನೀಡುವುದು, ದೇಶದ್ರೋಹಿ ಎಂದು ಕರೆಯುವುದೇ ಅವರ ಕೆಲಸ. ಜನರ ಮಾತನ್ನು ಕೇಳದಿರುವ ಪರಿಸ್ಥಿತಿಗೆ ಕೇಂದ್ರ ಸರ್ಕಾರ ಹೋಗಿದೆ. ಅಧಿಕಾರಕ್ಕೆ ಬಂದ ದಿನದಿಂದಲೂ ಪ್ರಜಾಪ್ರಭುತ್ವದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ’ ಎಂದು ಸುದ್ದಿಗಾರರಿಗೆ ಬುಧವಾರ ಪ್ರತಿಕ್ರಿಯಿಸಿದರು.‘ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದೆಹಲಿ ಪೊಲೀಸರು ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಕೇಂದ್ರ ಸರ್ಕಾರದ ದರ್ಪ ಹಾಗೂ ಅಹಂಕಾರಕ್ಕೆ ಇದು ಸಾಕ್ಷಿ’ ಎಂದರು.ವಿದ್ಯಾರ್ಥಿಗಳು ಪಕ್ಷಾತೀತವಾಗಿ ಸಿಜೆಪಿ ಹೆಸರಿನಲ್ಲಿ ಹೋರಾಟ ಮಾಡುತ್ತಿದ್ದಾರೆ. ಅವರ ಪ್ರಶ್ನೆಗಳಿಗೆ ಉತ್ತರಿಸದೆ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಇದನ್ನು ಮಾಧ್ಯಮಗಳು ಕೂಡ ಪ್ರಶ್ನೆ ಮಾಡುತ್ತಿಲ್ಲ ಎಂದು ಹೆಳಿದರು.ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರು ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ. ದೆಹಲಿಯಲ್ಲಿನ ರಾಜಕೀಯ ಬೆಳವಣಿಗೆ ಇರುವುದರಿಂದ ಸಂಪುಟ ವಿಸ್ತರಣೆ ವಿಷಯ ಮುಂದಕ್ಕೆ ಹೋಗಿದೆ ಎಂದರು.