ದಕ್ಷಿಣ ಕನ್ನಡದಲ್ಲಿ ಮಳೆಯಬ್ಬರ – ಜು.23ರಂದು ಶಾಲಾ-ಕಾಲೇಜುಗಳಿಗೆ ರಜೆ
ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ನಾಳೆ (ಜು.23) ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ (ಜುಲೈ 23) ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಿರುವ ಹಿನ್ನೆಲೆ, ವಿದ್ಯಾರ್ಥಿಗಳ ಸು

ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ನಾಳೆ (ಜು.23) ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ (ಜುಲೈ 23) ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಿರುವ ಹಿನ್ನೆಲೆ, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ಈ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಕಾರವಾರದಲ್ಲಿ ಭಾರತೀಯರೇ ನಿರ್ಮಿಸಿದ ಯುದ್ಧನೌಕೆ ಲೋಕಾರ್ಪಣೆ – ವಿಶೇಷತೆ ಏನು? ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ ಘೋಷಿಸಿ ಡಿಸಿ ಹೆಚ್.ವಿ ದರ್ಶನ್ ಆದೇಶ ಹೊರಡಿಸಿದ್ದಾರೆ.
Read the complete story at Public TV Kannada