ಜಂತರ್ ಮಂತರ್ ಹೊರತುಪಡಿಸಿ ಬೇರೆ ಎಲ್ಲೂ ಪ್ರತಿಭಟನೆಗೆ ಕರೆ ನೀಡಿಲ್ಲ: ಅಭಿಜೀತ್
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧಿಸಿ ದೆಹಲಿಯ ಜಂತರ್ ಮಂತರ್ ಹೊರತುಪಡಿಸಿ ಬೇರೆ ಎಲ್ಲೂ ಪ್ರತಿಭಟನೆಗೆ ಕರೆ ನೀಡಿಲ್ಲ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಅಭಿಜೀತ್ ದೀಪ್ಕೆ ಅವರು ವಿಡಿಯೊ ಸಂದೇಶಯೊಂದನ್ನು ಹಂಚಿಕೊಂಡಿದ್ದಾರೆ. ‘ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧಿಸಿ ದೆಹಲಿಯ ಜಂತರ್ ಮಂತರ್ ಹೊರತುಪಡಿಸಿ ಬೇರೆ ಎಲ್ಲೂ ಪ್ರತಿಭಟನೆಗೆ ಕರೆ ನೀಡಿಲ್ಲ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಅಭಿಜೀತ್ ದೀಪ್ಕೆ ಅವರು ವಿಡಿಯೊ ಸಂದೇಶಯೊಂದನ್ನು ಹಂಚಿಕೊಂಡಿದ್ದಾರೆ. ‘ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಜಂತರ್ ಮಂತರ್ನಲ್ಲಿ ಮಾತ್ರ ಪ್ರತಿಭಟನೆಗೆ ಕರೆ ನೀಡಲಾಗಿದೆ. ಅದಾಗಿಯೂ, ಕೆಲವು ಕಿಡಿಗೇಡಿಗಳು ದೆಹಲಿಯ ಹಲವೆಡೆ ಸಿಜೆಪಿ ಹೆಸರಿನಲ್ಲಿ ತೊಂದರೆ ನೀಡುತ್ತಿರುವುದು ತಿಳಿದು ಬಂದಿದೆ. ಅವರು ಯಾರು ಕಾಕ್ರೋಚ್ ಜನತಾ ಪಾರ್ಟಿಗೆ ಸೇರಿದವರಲ್ಲ‘ ಎಂದಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಸಿಜೆಪಿ ಒಂದು ತಿಂಗಳಿಂದ ಜಂತರ್ ಮಂತರ್ನಲ್ಲಿ ಪ್ರತಿಭಟನೆ ಕೈಗೊಂಡಿದೆ. ಜುಲೈ 20ರಂದು ‘ಸಂಸತ್ ಚಲೊ’ ಮೆರವಣಿಗೆ ಹಮ್ಮಿಕೊಂಡಿತ್ತು. ಸಿಜೆಪಿ ಕರೆ ನೀಡಿದ್ದ ‘ಸಂಸತ್ ಚಲೋ’ ಪ್ರತಿಭಟನೆಯಲ್ಲಿ ಸೋಮವಾರ ಭಾಗವಹಿಸಿದ್ದ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ಲಾಠಿ ಬೀಸಿದ್ದರು. ವಿದ್ಯಾರ್ಥಿಗಳ ಹಲ್ಲೆ ಹಾಗೂ ಪೊಲೀಸ್ ದೌರ್ಜನ್ಯ ಖಂಡಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ನಿವಾಸದ ಬಳಿ ಮಂಗಳವಾರ ಧರಣಿ ನಡೆಸಿದ್ದರು.IMPORTANT ANNOUNCEMENT Cockroach Janta Party has not given a call to assemble anywhere but at Jantar Mantar, where our peaceful protest is on. We received reports that some goons may have been sent to other parts of Delhi to create nuisance. They are NOT with CJP.-… pic.twitter.com/2jY0luT4CE— Cockroach is Back (@Cockroachisback) July 21, 2026