ಕಲಬುರಗಿ, ಶಿವಮೊಗ್ಗ, ಬೆಳಗಾವಿ ಸಹಿತ 10 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ
ಬೆಂಗಳೂರು: ಕಲಬುರಗಿ, ರಾಯಚೂರು, ಶಿವಮೊಗ್ಗ, ಉಡುಪಿ ಸೇರಿದಂತೆ ಕರ್ನಾಟಕದ 10 ಜಿಲ್ಲೆಗಳಲ್ಲಿ ಜುಲೈ 22ರ ಬುಧವಾರ ಸಂಜೆ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.ಭಾರತೀಯ ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಮುನ್ಸೂಚನೆ ಪ್ರಕಾರ, ಈ ಹತ್ತು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಬೆಳಗಾವಿ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗ

ಬೆಂಗಳೂರು: ಕಲಬುರಗಿ, ರಾಯಚೂರು, ಶಿವಮೊಗ್ಗ, ಉಡುಪಿ ಸೇರಿದಂತೆ ಕರ್ನಾಟಕದ 10 ಜಿಲ್ಲೆಗಳಲ್ಲಿ ಜುಲೈ 22ರ ಬುಧವಾರ ಸಂಜೆ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.ಭಾರತೀಯ ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಮುನ್ಸೂಚನೆ ಪ್ರಕಾರ, ಈ ಹತ್ತು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಬೆಳಗಾವಿ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಜುಲೈ 22 ಮತ್ತು 23ರಂದು ಭಾರಿ ಮಳೆಯಾಗಲಿದೆ.ಜುಲೈ 22ರಂದು ಬೀದರ್, ಕಲಬುರಗಿ, ರಾಯಚೂರು ಜಿಲ್ಲೆಯಲ್ಲಿ ಮಳೆ ಪ್ರಮಾಣ 64.5 ಮಿ.ಮೀ ನಿಂದ 115.4 ಮಿ,ಮೀ ವರೆಗೂ ಇರಬಹುದು ಎಂದು ಅಂದಾಜು ಮಾಡಲಾಗಿದೆ. ಹಲವು ಕಡೆಗಳಲ್ಲಿ ಗಾಳಿಯ ಪ್ರಮಾಣವು 30ರಿಂದ 40 ಕಿ.ಮಿ ವೇಗದಲ್ಲಿ ಇರಲಿದೆ. ಬಳ್ಳಾರಿ, ವಿಜಯನಗರ, ಮೈಸೂರು, ದಾವಣಗೆರೆ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಬೆಂಗಳೂರು ದಕ್ಷಿಣ, ತುಮಕೂರು ಜಿಲ್ಲೆಗಳಲ್ಲಿ ಹಗುರ ಮಳೆ ಕೆಲವು ಕಡೆ ಆಗಬಹುದು ಎಂದು ತಿಳಿಸಲಾಗಿದೆ. #ಮಳೆ #ಮುನ್ನೆಚ್ಚರಿಕೆ : #Heavy to #very Heavy #Rainfall (64.5mm to 204.4mm) #warning for Uttara Kannada Dist.#Orange #Alert@KarnatakaVarthe #KSNDMC #KarnatakaRains #Monsoon2026@dcuttarakannada pic.twitter.com/CuU24RHLt6— Karnataka State Natural Disaster Monitoring Centre (@KarnatakaSNDMC) July 22, 2026