ಗುಜರಾತ್ | ಭಾರೀ ಮಳೆಗೆ ಪಾರ್ಕಿಂಗ್ ಸ್ಥಳ ಜಲಾವೃತ; ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು
ಗಾಂಧೀನಗರ: ಗುಜರಾತ್ನ (Gujarat) ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದ ದಕ್ಷಿಣ ಭಾಗದಲ್ಲಿರುವ ವಲ್ಸಾದ್ ಜಿಲ್ಲೆ ಅತಿ ಹೆಚ್ಚು ಹಾನಿಗೊಳಗಾಗಿದೆ. ವಲ್ಸಾದ್ನ ಉಂಬರ್ಗಾಂವ್ ಪ್ರದೇಶದಲ್ಲಿ ಗುರುವಾರ ಬೆಳಗ್ಗೆಯವರೆಗೆ ಕೇವಲ 16 ಗಂಟೆಗಳಲ್ಲಿ ಅಭೂತಪೂರ್ವ 1,100 ಮಿಮೀ ಮಳೆಯಾಗಿದೆ. ಪೀಡಿತ ಪ್ರದೇಶಗಳಿಂದ ಸಾವಿರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ

ಗಾಂಧೀನಗರ: ಗುಜರಾತ್ನ (Gujarat) ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದ ದಕ್ಷಿಣ ಭಾಗದಲ್ಲಿರುವ ವಲ್ಸಾದ್ ಜಿಲ್ಲೆ ಅತಿ ಹೆಚ್ಚು ಹಾನಿಗೊಳಗಾಗಿದೆ. ವಲ್ಸಾದ್ನ ಉಂಬರ್ಗಾಂವ್ ಪ್ರದೇಶದಲ್ಲಿ ಗುರುವಾರ ಬೆಳಗ್ಗೆಯವರೆಗೆ ಕೇವಲ 16 ಗಂಟೆಗಳಲ್ಲಿ ಅಭೂತಪೂರ್ವ 1,100 ಮಿಮೀ ಮಳೆಯಾಗಿದೆ. ಪೀಡಿತ ಪ್ರದೇಶಗಳಿಂದ ಸಾವಿರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಇದನ್ನೂ ಓದಿ: ಅನಂತನಾಗ್ನಲ್ಲಿ ಬಾಲ ಬಿಚ್ಚಿದ ಉಗ್ರರು – ಇಬ್ಬರ ಮನೆ ಧ್ವಂಸಗೊಳಿಸಿದ ಸೇನೆ ನಿರಂತರ ಮಳೆಯಿಂದಾಗಿ ಹಲವಾರು ತಗ್ಗು ಪ್ರದೇಶಗಳಲ್ಲಿ ಪ್ರವಾಹ ಮತ್ತು ಜಲಾವೃತ ಉಂಟಾಗಿದ್ದು, ವಲ್ಸಾದ್ನ ವಾಪಿಯಿಂದ ಹಲವಾರು ಕಾರುಗಳು ನೀರಿನಲ್ಲಿ ಮುಳುಗಿರುವುದನ್ನು ತೋರಿಸುವ ವೀಡಿಯೊ ವೈರಲ್ ಆಗಿದೆ. ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ (SEOC) ಅಂಕಿಅಂಶಗಳ ಪ್ರಕಾರ, ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ವಲ್ಸಾದ್ ಜಿಲ್ಲೆ ಹೆಚ್ಚು ಹಾನಿಗೊಳಗಾಗಿದೆ. ಉಂಬರ್ಗಾಂವ್ ಹೊರತುಪಡಿಸಿ, ವಲ್ಸಾದ್ನ ಹಲವಾರು ಇತರ ತಾಲೂಕುಗಳು ಈ ಅವಧಿಯಲ್ಲಿ 600 ಮಿ.ಮೀ.ಗಿಂತ ಹೆಚ್ಚು ಮಳೆಯನ್ನು ದಾಖಲಿಸಿವೆ. ಔರಂಗ, ಪರ್ ಮತ್ತು ದಮನ್ ಗಂಗಾ ಮುಂತಾದ ನದಿಗಳು ಉಕ್ಕಿ ಹರಿಯುತ್ತಿದ್ದು, ವಲ್ಸಾದ್ನಲ್ಲಿ ಭಾರಿ ಪ್ರವಾಹ ಉಂಟಾಗಿದೆ. ಪ್ರವಾಹದ ನಂತರ ಸೂರತ್ ನಗರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿದ್ದ 2,200 ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದಿಂದ 9 ಭಾರತೀಯ ಮೀನುಗಾರರ ಬಂಧನ ಗುರುವಾರ ಮತ್ತು ಶುಕ್ರವಾರ ದಕ್ಷಿಣ ಗುಜರಾತ್ನ ವಲ್ಸಾದ್, ನವಸಾರಿ, ಡಾಂಗ್ಸ್, ಸೂರತ್, ತಾಪಿಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿದ್ದು, ಸ್ಥಳೀಯ ಅಧಿಕಾರಿಗಳು ಎಚ್ಚರಿಕೆ ವಹಿಸುವಂತೆ ಸೂಚಿಸಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ಸ್ಥಳೀಯ ಆಡಳಿತಕ್ಕೆ ಮಾರ್ಗದರ್ಶನ ನೀಡಲು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹಲವಾರು ಸಚಿವರನ್ನು ಪೀಡಿತ ಜಿಲ್ಲೆಗಳಿಗೆ ಕಳುಹಿಸಿದ್ದಾರೆ ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.