ಶಿರಾ-ಬಡವನಹಳ್ಳಿ ಚತುಷ್ಪಥ ರಸ್ತೆ ಕಾಮಗಾರಿ ಶೀಘ್ರ ಆರಂಭ: ಸಚಿವ ವಿ.ಸೋಮಣ್ಣ
ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ-69ರ ಶಿರಾ - ಬಡವನಹಳ್ಳಿ ಭಾಗದ ರಸ್ತೆಯನ್ನು (347+500 ಕಿ.ಮೀ ನಿಂದ 367+700 ಕಿ.ಮೀ ವರೆಗೆ) 4 ಪಥದ (ಚತುಷ್ಪಥ) ರಸ್ತೆಯಾಗಿ ಅಗಲೀಕರಣಗೊಳಿಸುವ ಡಿಪಿಆರ್ಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಬಗ್ಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಮಾಹಿತಿ ನೀಡಿದ್ದಾರೆ.ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹ
ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ-69ರ ಶಿರಾ - ಬಡವನಹಳ್ಳಿ ಭಾಗದ ರಸ್ತೆಯನ್ನು (347+500 ಕಿ.ಮೀ ನಿಂದ 367+700 ಕಿ.ಮೀ ವರೆಗೆ) 4 ಪಥದ (ಚತುಷ್ಪಥ) ರಸ್ತೆಯಾಗಿ ಅಗಲೀಕರಣಗೊಳಿಸುವ ಡಿಪಿಆರ್ಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಬಗ್ಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಮಾಹಿತಿ ನೀಡಿದ್ದಾರೆ.ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. 'ರಾಷ್ಟ್ರೀಯ ಹೆದ್ದಾರಿ 69ರ ಶಿರಾ-ಬಡವನಹಳ್ಳಿ ಭಾಗದ 20.2 ಕಿ.ಮೀ. ಉದ್ದದ ₹ 584.98 ಕೋಟಿ ವೆಚ್ಚದ ಚತುಷ್ಪಥ ರಸ್ತೆ ಕಾಮಗಾರಿ ಶೀಘ್ರ ಆರಂಭ' ಎಂದು ಬರೆದುಕೊಂಡಿದ್ದಾರೆ.ಮುಂದುವರಿದು, ತುಮಕೂರು ಜಿಲ್ಲೆಯ ಸರ್ವತೋಮುಖ ಪ್ರಗತಿಯ ಭಾಗವಾಗಿ ನನ್ನ ಮನವಿಯ ಮೇರೆಗೆ ರಾಷ್ಟ್ರೀಯ ಹೆದ್ದಾರಿ 69ರ ಶಿರಾ-ಬಡವನಹಳ್ಳಿ ಭಾಗದ 20.2 ಕಿ.ಮಿ. ಉದ್ದದ ಚತುಷ್ಪಥ ರಸ್ತೆ ನಿರ್ಮಾಣಕ್ಕೆ 2025ರ ಮಾರ್ಚ್ 07ರಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿತ್ ಗಡ್ಕರಿಯವರು ಅನುಮೋದನೆ ನೀಡಿದ್ದರು. ಇದೀಗ, ಈ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾಮಗಾರಿ ಪ್ರಾರಂಭಿಸಲು ಈಗಾಗಲೇ ಗುತ್ತಿಗೆ ಆದೇಶ ನೀಡಲಾಗಿದೆ ಎಂದಿದ್ದಾರೆ.ತಿರುಪತಿ ಮತ್ತು ಚೆನ್ನೈ ನಡುವಿನ ಪ್ರಯಾಣಕ್ಕೆ ಅನುಕೂಲರಾಷ್ಟ್ರೀಯ ಹೆದ್ದಾರಿ 69ರ ಶಿರಾ - ಬಡವನಹಳ್ಳಿ - ಬೈರೆನಹಳ್ಳಿ ಒಟ್ಟು 52 ಕಿ.ಮೀ ಅಂದಾಜು ₹1,585 ಕೋಟಿ ವೆಚ್ಚದ ಚತುಷ್ಪಥ ಹೆದ್ದಾರಿ ನಿರ್ಮಾಣವಾಗುವುದರಿಂದ ಮಧ್ಯ ಕರ್ನಾಟಕ, ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದಿಂದ ತಿರುಪತಿ ಮತ್ತು ಚೆನ್ನೈ ನಡುವಿನ ಪ್ರಯಾಣಕ್ಕೆ ಇನ್ನಷ್ಟು ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ.ಈ ಹೆದ್ದಾರಿ ನಿರ್ಮಾಣದಿಂದ ಶಿರಾದಿಂದ ಮಧುಗಿರಿ, ಚಿಕ್ಕಬಳ್ಳಾಪುರ, ಚಿಂತಾಮಣಿ ಮಾರ್ಗವಾಗಿ ತಿರುಪತಿಗೆ ಕೇವಲ 4 ಗಂಟೆಯ ಅವಧಿಯಲ್ಲಿ ತಲುಪಬಹುದಾಗಿದ್ದು, ಸುಮಾರು 60 ಕಿ.ಮೀ.ರಸ್ತೆ ಪ್ರಯಾಣ ಕಡಿಮೆಯಾಗಲಿದೆ. ವಸಂತನರಸಾಪುರ ಹಾಗೂ ಶಿರಾ ಕೈಗಾರಿಕಾ ಪ್ರದೇಶಗಳಿಂದ ಚೆನೈ ಬಂದರಿಗೆ ಉತ್ತಮ ರಸ್ತೆ ಸಂಪರ್ಕ ಕಲ್ಪಿಸಲಿದೆ. ಅಲ್ಲದೇ, ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪೂರಕವಾಗಿ ಶಿರಾ-ಬೆಂಗಳೂರಿನ ನಡುವೆ ಪರ್ಯಾಯ ರಸ್ತೆ ಸಂಪರ್ಕ ಕಲ್ಪಿಸಲಿದೆ. ಬಡವನಹಳ್ಳಿಯಿಂದ ಬೈರೆನಹಳ್ಳಿ ಭಾಗದ 32 ಕಿ.ಮೀ. ಚತುಷ್ಪಥ ರಸ್ತೆಗೆ ₹1,000 ಕೋಟಿ ಅನುಮೋದನೆ ಪಡೆಯುವ ಬಗ್ಗೆ ಈಗಾಗಲೇ ಪ್ರಸ್ತಾವನೆ ಅಂತಿಮ ಹಂತದಲ್ಲಿದ್ದು ಮುಂದಿನ ಕೆಲವೇ ದಿನಗಳಲ್ಲಿ ಕೇಂದ್ರ ಸರ್ಕಾರದ ಅನುಮೋದನೆ ಪಡೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.ತುಮಕೂರು ಜಿಲ್ಲೆಯ ಅಭಿವೃದ್ದಿಗೆ ನಿರಂತರ ಸಹಕಾರ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನೀತಿನ್ ಗಡ್ಕರಿಯವರಿಗೆ ತುಮಕೂರು ಜನತೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು ಎಂದೂ ಅವರು ಪೋಸ್ಟ್ನಲ್ಲಿ ಉಲ್ಲೇಖಿಸಿದ್ದಾರೆ.ರಾಷ್ಟ್ರೀಯ ಹೆದ್ದಾರಿ 69ರ ಶಿರಾ-ಬಡವನಹಳ್ಳಿ ಭಾಗದ 20.2 ಕಿ.ಮಿ. ಉದ್ದದ ರೂ. 584.98 ಕೋಟಿ ವೆಚ್ಚದ ಚತುಷ್ಪಥ ರಸ್ತೆ ಕಾಮಗಾರಿ ಶೀಘ್ರ ಆರಂಭ!ತುಮಕೂರು ಜಿಲ್ಲೆಯ ಸರ್ವತೋಮುಖ ಪ್ರಗತಿಯ ಭಾಗವಾಗಿ ನನ್ನ ಮನವಿಯ ಮೇರೆಗೆ ರಾಷ್ಟ್ರೀಯ ಹೆದ್ದಾರಿ 69ರ ಶಿರಾ-ಬಡವನಹಳ್ಳಿ ಭಾಗದ 20.2 ಕಿ.ಮಿ. ಉದ್ದದ ಚತುಷ್ಪಥ ರಸ್ತೆ ನಿರ್ಮಾಣಕ್ಕೆ 2025ರ ಮಾರ್ಚ್… pic.twitter.com/28VfZLDGlF— V. Somanna (@VSOMANNA_BJP) July 23, 2026