ಮರಿಗಳ ಜೊತೆ ಕಾಡಾನೆಗಳ ದಾಂಧಲೆ – ಸುಮಾರು 8 ಎಕರೆ ಪ್ರದೇಶದ ಕಾಫಿ ತೋಟ ನಾಶ
ಹಾಸನ: ಮರಿಗಳ ಜೊತೆ ಕಾಡಾನೆಗಳು (Wild Elephants) ಸುಮಾರು 8 ಎಕರೆ ಪ್ರದೇಶದ ಕಾಫಿ ತೋಟವನ್ನು (Coffee Plantation) ನಾಶಪಡಿಸಿರುವ ಘಟನೆ ಹಾಸನ (Hassan) ಜಿಲ್ಲೆ, ಬೇಲೂರು (Belur) ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಗನ್ನಾಥ್ ಶೆಟ್ಟಿ, ಪ್ರಭಾಕರ್ ಶೆಟ್ಟಿ, ಸ್ವಾಮಿ ಎಂಬುವವರಿಗೆ ಸೇರಿದ ಜಮೀನು ಇದಾಗಿದ್ದು, ಕಾಡಾನೆಗಳ ಹಿಂಡು ಅಡಿಕೆ, ಕಾಫಿ, ಬಾಳೆ

ಹಾಸನ: ಮರಿಗಳ ಜೊತೆ ಕಾಡಾನೆಗಳು (Wild Elephants) ಸುಮಾರು 8 ಎಕರೆ ಪ್ರದೇಶದ ಕಾಫಿ ತೋಟವನ್ನು (Coffee Plantation) ನಾಶಪಡಿಸಿರುವ ಘಟನೆ ಹಾಸನ (Hassan) ಜಿಲ್ಲೆ, ಬೇಲೂರು (Belur) ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಗನ್ನಾಥ್ ಶೆಟ್ಟಿ, ಪ್ರಭಾಕರ್ ಶೆಟ್ಟಿ, ಸ್ವಾಮಿ ಎಂಬುವವರಿಗೆ ಸೇರಿದ ಜಮೀನು ಇದಾಗಿದ್ದು, ಕಾಡಾನೆಗಳ ಹಿಂಡು ಅಡಿಕೆ, ಕಾಫಿ, ಬಾಳೆ ಗಿಡಗಳನ್ನು ನಾಶ ಮಾಡಿದೆ. ಈ ಪರಿಣಾಮ ಮಾಲೀಕರಿಗೆ ಸುಮಾರು 6 ಲಕ್ಷ ರೂ.ಗೂ ಅಧಿಕ ನಷ್ಟವುಂಟಾಗಿದೆ. ಇದನ್ನೂ ಓದಿ: ಕಬ್ಬು ಬೆಳೆಗಾರರಿಗೆ ಗೊಣ್ಣೆ ಹುಳು ಕಂಟಕ – ಇಳುವರಿ ಕುಸಿತದ ಭೀತಿಯಲ್ಲಿ ರೈತರು ಮರಿಗಳು ಸೇರಿ ಸುಮಾರು ಇಪ್ಪತ್ತಕ್ಕೂ ಹೆಚ್ಚಿರುವ ಕಾಡಾನೆಗಳ ಹಿಂಡು ಕಾಫಿ ತೋಟದಲ್ಲೇ ಬೀಡುಬಿಟ್ಟಿದೆ. ಮರಿಗಳು ಇರುವುದರಿಂದ ಅರಣ್ಯ ಇಲಾಖೆಯ ಇಟಿಎಫ್ ಸಿಬ್ಬಂದಿ ಪಟಾಕಿ ಸಿಡಿಸಲು ಹಿಂದೇಟು ಹಾಕಿದ್ದಾರೆ. ಅಲ್ಲದೇ ಪಟಾಕಿ ಸಿಡಿಸಿದರೆ ಮನುಷ್ಯರ ಮೇಲೆ ದಾಳಿ ಮಾಡುವ ಸಾಧ್ಯತೆ ಇದೆ. ಇದನ್ನೂ ಓದಿ: ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗೆ ನಟ ಸಲ್ಮಾನ್ ಖಾನ್ ಬೆಂಬಲ
Read the complete story at Public TV Kannada