ವಿದ್ಯಾರ್ಥಿಗಳ ಬಗ್ಗೆ ರಾಹುಲ್ಗೆ ನೈಜ ಕಾಳಜಿಯಿಲ್ಲ: ಜೆ.ಪಿ. ನಡ್ಡಾ ಟೀಕೆ
ನವದೆಹಲಿ: ವಿದ್ಯಾರ್ಥಿಗಳ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನಿಜವಾದ ಕಾಳಜಿ ಇಲ್ಲ ಎಂದು ಕೇಂದ್ರ ಸಚಿವ ಜೆ.ಪಿ. ನಡ್ಡಾ ತಿರುಗೇಟು ನೀಡಿದ್ದಾರೆ.ಕಳೆದ ಒಂದು ದಶಕದಲ್ಲಿ 150ಕ್ಕೂ ಹೆಚ್ಚು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿವೆ ಎಂದು ಬುಧವಾರ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ನಡ್ಡಾ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.ಸುದ್ದಿಗೋಷ್ಠಿಯಲ್

ನವದೆಹಲಿ: ವಿದ್ಯಾರ್ಥಿಗಳ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನಿಜವಾದ ಕಾಳಜಿ ಇಲ್ಲ ಎಂದು ಕೇಂದ್ರ ಸಚಿವ ಜೆ.ಪಿ. ನಡ್ಡಾ ತಿರುಗೇಟು ನೀಡಿದ್ದಾರೆ.ಕಳೆದ ಒಂದು ದಶಕದಲ್ಲಿ 150ಕ್ಕೂ ಹೆಚ್ಚು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿವೆ ಎಂದು ಬುಧವಾರ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ನಡ್ಡಾ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೀಟ್ ಪ್ರಶ್ನೆ ಪತ್ರಿಕೆ ಪ್ರಕರಣವನ್ನು ರಾಜಕೀಯಗೊಳಿಸಬಾರದು. ಅವುಗಳಿಂದ ರಾಜಕೀಯ ಲಾಭ ಪಡೆಯಲು ಯತ್ನಿಸುವುದು ಸಮರ್ಥನೀಯವಲ್ಲ’ ಎಂದು ಹೇಳಿದ್ದಾರೆ.ಈ ಹಿಂದೆ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಆಡಳಿತ ನಡೆಸುತ್ತಿದ್ದ ರಾಜ್ಯಗಳಲ್ಲಿ ನಡೆದ ಹಲವು ಪ್ರಶ್ನೆ ಪತ್ರಿಕೆ ಸೋರಿಕೆ ಘಟನೆಗಳನ್ನು ಉಲ್ಲೇಖಿಸಿದ ನಡ್ಡಾ, ‘ರಾಹುಲ್ ಅವರು ದ್ವಂದ್ವ ನೀತಿ ಅನುಸರಿಸುತ್ತಿದ್ದು, ಇವುಗಳ ಬಗ್ಗೆ ಅವರು ಏಕೆ ಮೌನವಾಗಿದ್ದರು’ ಎಂದು ಪ್ರಶ್ನಿಸಿದ್ದಾರೆ.ಮುಂದುವರಿದು, ‘ನೀಟ್ನಂತಹ ವಿಷಯಗಳ ಮೇಲಿನ ಚರ್ಚೆಯ ಅವಧಿಯನ್ನು ವಿರೋಧ ಪಕ್ಷಗಳೇ ನಿರ್ಧರಿಸಬಹುದು. ಸರ್ಕಾರವು ತನ್ನ ನಿಲುವನ್ನು ಮಂಡಿಸಲಿದೆ’ ಎಂದು ತಿಳಿಸಿದ್ದಾರೆ.‘ವಿರೋಧ ಪಕ್ಷಗಳೂ ತಮ್ಮ ಜವಾಬ್ದಾರಿಯನ್ನು ನಿಭಾಯಿಸಬೇಕು ಮತ್ತು ಶಾಶ್ವತ ಪರಿಹಾರದ ಕಡೆಗೆ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬೇಕು. ಸರ್ಕಾರದೊಂದಿಗೆ ಸೇರಿ ನೀತಿಯೊಂದನ್ನು ರೂಪಿಸಬೇಕು’ ಎಂದು ಪ್ರತಿಪಾದಿಸಿದ್ದಾರೆ.‘ಮಕ್ಕಳು ದೇಶದ ಭವಿಷ್ಯ. ಅವರ ಭವಿಷ್ಯವನ್ನು ಕಾಪಾಡುವುದು ನಮ್ಮೆಲ್ಲರ ಸಾಮೂಹಿಕ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ’ ಎಂದಿದ್ದಾರೆ.