ಆರ್ಎಸ್ಎಸ್ ನಾಯಕನ ಹತ್ಯೆ: ಪ್ರಮುಖ ಆರೋಪಿ ಬಂಧನ
ನವದೆಹಲಿ/ಕೊಚ್ಚಿ: ಆರ್ಆರ್ಎಸ್ ನಾಯಕ ಶ್ರೀನಿವಾಸನ್ ಅವರ ಹತ್ಯೆ ಪ್ರಕರಣದಲ್ಲಿ, ತಲೆ ಮರೆಸಿಕೊಂಡಿದ್ದ ಮತ್ತೊಬ್ಬ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಬಂಧಿಸಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾದವರ ಸಂಖ್ಯೆ 67ಕ್ಕೆ ಏರಿಕೆಯಾಗಿದೆ ಎಂದು ಎನ್ಐಎ ತಿಳಿಸಿದೆ. ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್ಐ)
ನವದೆಹಲಿ/ಕೊಚ್ಚಿ: ಆರ್ಆರ್ಎಸ್ ನಾಯಕ ಶ್ರೀನಿವಾಸನ್ ಅವರ ಹತ್ಯೆ ಪ್ರಕರಣದಲ್ಲಿ, ತಲೆ ಮರೆಸಿಕೊಂಡಿದ್ದ ಮತ್ತೊಬ್ಬ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಬಂಧಿಸಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾದವರ ಸಂಖ್ಯೆ 67ಕ್ಕೆ ಏರಿಕೆಯಾಗಿದೆ ಎಂದು ಎನ್ಐಎ ತಿಳಿಸಿದೆ. ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್ಐ) ಪಾಲಕ್ಕಾಡ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಮುಹಮ್ಮದ್ ಅಲಿ ಕೆ.ಪಿ ಎಂಬಾತ ಬಂಧಿತ ಆರೋಪಿ. ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮುಹಮ್ಮದ್, ಸೌದಿ ಅರೇಬಿಯಾದಿಂದ ದೆಹಲಿಗೆ ಬಂದಿಳಿದ ಕೂಡಲೇ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. ಮುಹಮ್ಮದ್ ಕುರಿತು ಸುಳಿವು ನೀಡಿದವರಿಗೆ ₹3 ಲಕ್ಷ ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿತ್ತು. ಕೊಲೆ ಪಿತೂರಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮುಹಮ್ಮದ್, ಆರೋಪಿಗಳಿಗೆ ಆಶ್ರಯ ನೀಡಿದ್ದ ಎಂದು ಎನ್ಐಎ ಹೇಳಿದೆ.
Read the complete story at Prajavani