ಶಬರಿಮಲೆ ಚಿನ್ನ ಕಳವು ಪ್ರಕರಣ: ಟಿಡಿಬಿ ಮಾಜಿ ಅಧ್ಯಕ್ಷ ಪ್ರಶಾಂತ್ ಎಸ್ಐಟಿ ವಶಕ್ಕೆ
ತಿರುವನಂತಪುರ: ಶಬರಿಮಲೆ ದೇವಸ್ಥಾನದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಮಾಜಿ ಅಧ್ಯಕ್ಷ ಪಿ.ಎಸ್.ಪ್ರಶಾಂತ್ ಅವರನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಗುರುವಾರ ವಶಕ್ಕೆ ಪಡೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಅಲ್ಲದೇ, ಟಿಡಿಬಿ ಮಾಜಿ ಸದಸ್ಯ ಅಜಿ ಕುಮಾರ್ ಮತ್ತು ದೇವಸ್ಥಾನದ ಆಭರಣಗಳ ಉಸ್ತುವಾರಿ (ತಿರುವಾಭ

ತಿರುವನಂತಪುರ: ಶಬರಿಮಲೆ ದೇವಸ್ಥಾನದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಮಾಜಿ ಅಧ್ಯಕ್ಷ ಪಿ.ಎಸ್.ಪ್ರಶಾಂತ್ ಅವರನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಗುರುವಾರ ವಶಕ್ಕೆ ಪಡೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಅಲ್ಲದೇ, ಟಿಡಿಬಿ ಮಾಜಿ ಸದಸ್ಯ ಅಜಿ ಕುಮಾರ್ ಮತ್ತು ದೇವಸ್ಥಾನದ ಆಭರಣಗಳ ಉಸ್ತುವಾರಿ (ತಿರುವಾಭರಣಂ ಕಮಿಷನರ್) ಆರ್. ರೇಜಿಲಾಲ್ ಅವರನ್ನು ಸಹ ತನಿಖಾ ತಂಡ ವಿಚಾರಣೆಗೆ ಒಳಪಡಿಸಿದೆ.ತಿರುವಾಂಕೂರು ದೇವಸ್ವಂ ಮಂಡಳಿಯ ( ಟಿಡಿಬಿ ) ಮಾಜಿ ಸದಸ್ಯ ಅಜಿ ಕುಮಾರ್ ಮತ್ತು ತಿರುವಾಭರಣಂ ಆಯುಕ್ತ ಆರ್.ರೆಜಿಲಾಲ್ ಅವರನ್ನೂ ಎಸ್ಐಟಿ ವಿಚಾರಣೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.ಪ್ರಕರಣದ ಹಿನ್ನೆಲೆ 2019ರಲ್ಲಿ ಶಬರಿಮಲೆ ದೇಗುಲದ ಶ್ರೀಕೋವಿಲ್(ಗರ್ಭಗುಡಿ) ಬಾಗಿಲಿನ ಚೌಕಟ್ಟುಗಳು ಮತ್ತು ದ್ವಾರಪಾಲಕ ವಿಗ್ರಹಗಳಿಗೆ ಚಿನ್ನದ ಲೇಪನ ಮಾಡಲು ತೆಗೆದುಕೊಂಡು ಹೋದಾಗ ಚಿನ್ನ ಕಳವಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳನ್ನು ಎಸ್ಐಟಿ ತನಿಖೆ ನಡೆಸುತ್ತಿದೆ.ಪ್ರಶಾಂತ್ ಅವರು ಟಿಡಿಬಿ ಅಧ್ಯಕ್ಷರಾಗಿದ್ದಾಗಲೂ (2025) ನಡೆಸಲಾದ ಚಿನ್ನದ ಲೇಪನ ಕಾರ್ಯದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಐಟಿ ಇತ್ತೀಚೆಗೆ ಕೇರಳ ಹೈಕೋರ್ಟ್ಗೆ ತಿಳಿಸಿತ್ತು. ಪ್ರಶಾಂತ್ ಅವರು 2023ರಿಂದ 2025ರವರೆಗೆ ಮಂಡಳಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಮೂಲಗಳ ಪ್ರಕಾರ, ತಿರುವನಂತಪುರದಲ್ಲಿರುವ ಪ್ರಶಾಂತ್ ಅವರ ನಿವಾಸದಿಂದಲೇ ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆಯುವ ಕೆಲವೇ ಕ್ಷಣಗಳ ಮೊದಲು ಫೇಸ್ಬುಕ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದ ಅವರು, ತಮ್ಮ ಬಂಧನದ ಸಾಧ್ಯತೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು. ಅಲ್ಲದೆ ಇದು ರಾಜಕೀಯ ಪ್ರೇರಿತ ಎಂದು ಆರೋಪಿಸಿದ್ದರು.ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣ: ಟಿಡಿಬಿ ಮಾಜಿ ಅಧ್ಯಕ್ಷನ ಬಂಧನ