ಶಾಸಕರಿಗೆ ಮೊಟ್ಟೆ ಎಸೆತ: 9 ಮಂದಿ ಬಂಧನ
ಬೆಂಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದ ಪ್ರತಿಭಟನೆ ವೇಳೆ ಬಿಜೆಪಿ ಶಾಸಕರೊಬ್ಬರ ಮೇಲೆ ಮೊಟ್ಟೆ ಎಸೆತ ಹಾಗೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಶಿವಾಜಿನಗರ ಠಾಣೆ ಪೊಲೀಸರು ಈವರೆಗೆ 9 ಮಂದಿಯನ್ನು ಬಂಧಿಸಿದ್ದಾರೆ.ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿರುವುದು ಮಾತ್ರವಲ್ಲದೆ, ಕಬ್ಬಿಣದ ರಾಡ್, ದೊಣ್ಣೆ ಹಾಗೂ ಪೈಪ್ಗಳಿಂದ ಹಲ್ಲೆ ನ
ಬೆಂಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದ ಪ್ರತಿಭಟನೆ ವೇಳೆ ಬಿಜೆಪಿ ಶಾಸಕರೊಬ್ಬರ ಮೇಲೆ ಮೊಟ್ಟೆ ಎಸೆತ ಹಾಗೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಶಿವಾಜಿನಗರ ಠಾಣೆ ಪೊಲೀಸರು ಈವರೆಗೆ 9 ಮಂದಿಯನ್ನು ಬಂಧಿಸಿದ್ದಾರೆ.ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿರುವುದು ಮಾತ್ರವಲ್ಲದೆ, ಕಬ್ಬಿಣದ ರಾಡ್, ದೊಣ್ಣೆ ಹಾಗೂ ಪೈಪ್ಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದರು. ಅಲ್ಲದೇ ಶಾಸಕ ಬಿ.ಪಿ.ಹರೀಶ್ ಮೇಲೆ ಮೊಟ್ಟೆ ಎಸೆದಿರುವ ಪ್ರಮುಖ ಆರೋಪಿ ಪುಣ್ಯೇಶ್ ಸೇರಿ 9 ಮಂದಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.‘ಪ್ರಕರಣದ ತನಿಖೆ ನಡೆಯುತ್ತಿರುವುದರಿಂದ ಆರೋಪಿಗಳ ಹೆಸರು ಬಹಿರಂಗಪಡಿಸಲು ಆಗುವುದಿಲ್ಲ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಪ್ರತಿಭಟನೆ ವೇಳೆ ನಡೆದ ಗಲಾಟೆಯಲ್ಲಿ ಪಾಲ್ಗೊಂಡಿದ್ದ ಕೆಲ ಆರೋಪಿಗಳು ನಾಪತ್ತೆಯಾಗಿದ್ದರು. ದೂರಿನ ಆಧಾರದ ಮೇರೆಗೆ ಬುಧವಾರ ಐದು ಮಂದಿ ಹಾಗೂ ಗುರುವಾರ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.ಶೇಷಾದ್ರಿಪುರ ಉಪ ವಿಭಾಗದ ಎಸಿಪಿ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದ್ದು, ಮೊಟ್ಟೆಯನ್ನು ಎಲ್ಲಿಂದ ತಂದಿದ್ದರು. ಮೊಟ್ಟೆ ಎಸೆಯುವ ಸಂಚು ರೂಪಿಸಿದವರು ಯಾರು? ಎಂಬ ಬಗ್ಗೆ ಆರೋಪಿಗಳ ವಿಚಾರಣೆ ನಡೆಸಿದ್ದಾರೆ. ಇದರ ಜತೆಗೆ ಕ್ವೀನ್ಸ್ ರಸ್ತೆಯಲ್ಲಿನ ಸಿ.ಸಿ.ಟಿ.ವಿ ಕ್ಯಾಮೆರಾ ಹಾಗೂ ಮೊಬೈಲ್ ದೃಶ್ಯಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.