ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿ
ನವದೆಹಲಿ: ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ಶೀಘ್ರ ವಿಚಾರಣೆಗಾಗಿ ತ್ವರಿತ ನ್ಯಾಯಾಲಯ ಸ್ಥಾಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್ ಮಾಡಿದ್ದಾರೆ. 'ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದವರಿಗೆ ತ್ವರಿತ ಹಾಗೂ ಕಠಿಣ ಶಿಕ್ಷೆ ವಿಧಿಸುವುದನ್ನು ಖಚಿತಪಡ

ನವದೆಹಲಿ: ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ಶೀಘ್ರ ವಿಚಾರಣೆಗಾಗಿ ತ್ವರಿತ ನ್ಯಾಯಾಲಯ ಸ್ಥಾಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್ ಮಾಡಿದ್ದಾರೆ. 'ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದವರಿಗೆ ತ್ವರಿತ ಹಾಗೂ ಕಠಿಣ ಶಿಕ್ಷೆ ವಿಧಿಸುವುದನ್ನು ಖಚಿತಪಡಿಸಲು ತ್ವರಿತ ನ್ಯಾಯಾಲಯ ಸ್ಥಾಪಿಸಲು ನಿರ್ಧರಿಸಿದ್ದೇವೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ' ಎಂದು ತಿಳಿಸಿದ್ದಾರೆ. 'ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ನಾವು ಕೈಗೊಳ್ಳುತ್ತಿರುವ ಸರಣಿ ಕ್ರಮಗಳಲ್ಲಿ ಇದೂ ಒಂದಾಗಿದೆ' ಎಂದು ಉಲ್ಲೇಖಿಸಿದ್ದಾರೆ. 'ನಮ್ಮ ಯುವಜನರ ಕ್ಷೇಮ ಮತ್ತು ಭವಿಷ್ಯಕ್ಕಿಂತ ಮುಖ್ಯವಾದದ್ದು ಏನೂ ಇಲ್ಲ. ನಮ್ಮ ಯುವಜನರ ಭವಿಷ್ಯ ಹಾನಿ ಮಾಡಲು ಪ್ರಯತ್ನಿಸುವವರನ್ನು ಸುಮ್ಮನೆ ಬಿಡುವುದಿಲ್ಲ' ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. Nothing is more important than the welfare and future of our youth!We have decided to set up fast-track courts to ensure swift and stringent punishment for those involved in paper leaks. Have directed the concerned authorities and officials to take all necessary steps in this…— Narendra Modi (@narendramodi) July 23, 2026 ಜಂತರ್ ಮಂತರ್ನಲ್ಲಿ ಇಂಟರ್ನೆಟ್ ಸ್ಥಗಿತ, ಮತ್ತೆ ದಾಳಿಗೆ ಸಂಚು: ಸಿಜೆಪಿ ಆತಂಕFact Check: ‘ಕಾಕ್ರೋಚ್’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರೇ ಸುನಿತಾ ವಿಲಿಯಮ್ಸ್?