ಪ್ರಜ್ವಲ್ಗೆ ಪೆರೋಲ್ ನೀಡಲು ಆಗಲ್ಲ – ಕಾರಾಗೃಹ ಇಲಾಖೆ
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರೋ ಪ್ರಜ್ವಲ್ ರೇವಣ್ಣಗೆ (Prajwal Revanna) ಪೆರೋಲ್ ನೀಡಲು ಸಾಧ್ಯವಿಲ್ಲ ಅಂತ ಕಾರಾಗೃಹ ಇಲಾಖೆ ಸ್ಪಷ್ಟಪಡಿಸಿದೆ. ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವವರಿಗೆ ಕಾರಾಗೃಹ ಇಲಾಖೆ ಪೆರೋಲ್ (Parole) ನೀಡಲು ಸಾಧ್ಯವಿಲ್ಲ ಮತ್ತು ಅಧಿಕಾರ ವ್ಯಾಪ್ತಿಯೂ ಇಲ್ಲ ಎಂದು ಕಾರಾಗೃಹ ಇಲಾಖೆ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಆ್ಯ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರೋ ಪ್ರಜ್ವಲ್ ರೇವಣ್ಣಗೆ (Prajwal Revanna) ಪೆರೋಲ್ ನೀಡಲು ಸಾಧ್ಯವಿಲ್ಲ ಅಂತ ಕಾರಾಗೃಹ ಇಲಾಖೆ ಸ್ಪಷ್ಟಪಡಿಸಿದೆ. ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವವರಿಗೆ ಕಾರಾಗೃಹ ಇಲಾಖೆ ಪೆರೋಲ್ (Parole) ನೀಡಲು ಸಾಧ್ಯವಿಲ್ಲ ಮತ್ತು ಅಧಿಕಾರ ವ್ಯಾಪ್ತಿಯೂ ಇಲ್ಲ ಎಂದು ಕಾರಾಗೃಹ ಇಲಾಖೆ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಆ್ಯಸಿಡ್ ದಾಳಿ ಆಗದೆ ಹೋಗಿದ್ರೆ ಅಮ್ಮನಿಗೆ ಇಷ್ಟು ಬೇಗ ಸಾವು ಬರ್ತಿರಲಿಲ್ಲ – ತಾಯಿ ನೆನೆದು ಬಿಕ್ಕಳಿಸಿ ಅತ್ತ ರೇವಣ್ಣ ಈಗಾಗಲೇ ಕುಟುಂಬಸ್ಥರು ತಿಥಿಯ ದಿನ ಪೂಜೆ ಸಲ್ಲಿಸೋದಕ್ಕೆ ಕರೆತರುವ ಪ್ರಯತ್ನ ಮಾಡಿದ್ರು. ಕಾರಾಗೃಹ ಇಲಾಖೆ ಅಧಿಕಾರ ವ್ಯಾಪ್ತಿ ಇಲ್ಲ ಎಂದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸೋ ಪ್ಲ್ಯಾನ್ ಅಲ್ಲಿ ಇದ್ದಾರೆ. 15 ದಿನಗಳ ಕಾಲ ಪೆರೋಲ್ ಸಿಕ್ಕಿದ್ರೆ 30ನೇ ತಾರೀಖು ಪುಣ್ಯ ತಿಥಿ ಇದೆ. ಅವತ್ತಿನ ಬದಲಾಗಿ ಬೇರೊಂದು ದಿನ ಸಮಾಧಿಯ ಬಳಿ ಕರೆದುಕೊಂಡು ಹೋಗಿ ಪೂಜೆ ನೆರವೇರಿಸೋ ತಯಾರಿಯಲ್ಲಿದೆ ಕುಟುಂಬ. ಒಳ ಸಂದರ್ಶನಕ್ಕೆ ಕೋರ್ಟ್ ಅಸ್ತು ಸಜಾ ಬಂಧಿಯಾಗಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಕುಟುಂಬಸ್ಥರು, ಸಂಬಂಧಿಕರು ಹಾಗೂ ಸ್ನೇಹಿತರೊಂದಿಗೆ ಒಳ ಸಂದರ್ಶನ (Internal Interview) ನಡೆಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ. ಇದನ್ನೂ ಓದಿ: ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ನ್ಯಾಯಾಲಯದ ಆದೇಶದಂತೆ, ಜೈಲು ಮುಖ್ಯ ಅಧೀಕ್ಷಕರು ಕಾರಾಗೃಹ ನಿಯಮಾವಳಿಗೆ (Jail Rules) ಅನುಗುಣವಾಗಿ ಕುಟುಂಬಸ್ಥರು, ಸಂಬಂಧಿಕರು ಮತ್ತು ಸ್ನೇಹಿತರಿಗೆ ಭೇಟಿಯ ಅವಕಾಶ ಕಲ್ಪಿಸಬೇಕು ಎಂದು ಸೂಚಿಸಲಾಗಿದೆ. ಭೇಟಿಯ ವೇಳೆ ಕಾರಾಗೃಹದ ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ. ಯಾವುದೇ ಕಾರಣದಿಂದ ಭೇಟಿಗೆ ಅವಕಾಶ ನಿರಾಕರಿಸಿದರೆ, ಅದರ ಬಗ್ಗೆ ಅಪರಾಧಿಗೆ ಸೂಕ್ತ ಕಾರಣವನ್ನು ಲಿಖಿತವಾಗಿ ತಿಳಿಸಬೇಕು ಎಂದೂ ಆದೇಶಿಸಿದೆ.