ವಾಂಗ್ಚೂಕ್ ಉಪವಾಸ ಸತ್ಯಾಗ್ರಹ ಅಂತ್ಯ: ಕೇಂದ್ರ ನೀಡಿದ ಭರವಸೆಯಲ್ಲಿ ಏನಿದೆ?
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಕಳೆದ 26 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೊನಮ್ ವಾಂಗ್ಚೂಕ್ ಅವರು ಗುರುವಾರ ತಡರಾತ್ರಿ ಉಪವಾಸ ಅಂತ್ಯಗೊಳಿಸಿದ್ದಾರೆ. ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರು

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಕಳೆದ 26 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೊನಮ್ ವಾಂಗ್ಚೂಕ್ ಅವರು ಗುರುವಾರ ತಡರಾತ್ರಿ ಉಪವಾಸ ಅಂತ್ಯಗೊಳಿಸಿದ್ದಾರೆ. ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರು ಪಾನೀಯ ಕುಡಿಸಿ ಸೊನಮ್ ಉಪವಾಸವವನ್ನು ಅಂತ್ಯಗೊಳಿಸಿದರು.ಪರೀಕ್ಷಾ ಅಕ್ರಮಗಳನ್ನು ಖಂಡಿಸಿ, ಕಾಕ್ರೋಚ್ ಜನತಾ ಪಾರ್ಟಿಯು (ಸಿಜೆಪಿ) ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ಆರಂಭಿಸಿತ್ತು. ಈ ಪ್ರತಿಭಟನೆಯನ್ನು ಬೆಂಬಲಿಸಿ ವಾಂಗ್ಚೂಕ್ ಅವರು ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದರು. ಕೇಂದ್ರ ಸರ್ಕಾರವು ನಡೆಸಿದ ನಿರಂತರ ಚರ್ಚೆಗಳ ನಂತರ ಅಧಿಕೃತ ಭರವಸೆಯನ್ನು ಲಿಖಿತ ರೂಪದಲ್ಲಿ ನೀಡಿದ ಬಳಿಕ ಸೊನಮ್, ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟಿದ್ದಾರೆ. VIDEO | Activist Sonam Wangchuk releases video message after ending his 26-day fast.Wangchuk announced the end of his fast after Union Ministers JP Nadda and Jitendra Singh met him at the Medanta Hospital in Gurugram around Thursday midnight and conveyed the government's… pic.twitter.com/vDbpwlXOj7— Press Trust of India (@PTI_News) July 24, 2026 ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಸೊನಮ್ ಅವರು ವೈದ್ಯರ ಸಲಹೆಯಂತೆ ತಮ್ಮ ದೈನಂದಿನ ದಿನಚರಿಯನ್ನು ಅನುಸರಿಸಿ ಆದಷ್ಟು ಬೇಗ ಚೇತರಿಸಿಕೊಳ್ಳಬೇಕಾಗಿ ವಿನಂತಿಸುತ್ತೇನೆ ಎಂದು ತಿಳಿಸಿದ್ದಾರೆ. ಸೊನಮ್ ಅವರು ಆರೋಗ್ಯವಾಗಿರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಹೇಳಿದ್ದಾರೆ. ಗುರುವಾರ ತಡರಾತ್ರಿ ವಿಡಿಯೊ ಸಂದೇಶವನ್ನು ಬಿಡುಗಡೆ ಮಾಡಿದ್ದ ಪ್ರಧಾನಿ ತ್ವರಿತ ನ್ಯಾಯಾಲಯ ಸ್ಥಾಪನೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತಪ್ಪಿತ್ತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ಪ್ರಸ್ತಾವವನ್ನು ಒಳಗೊಂಡ ಮಸೂದೆಯ ಕರಡು ಗುರುವಾರ ರಾತ್ರಿ ನನ್ನ ಕೈಸೇರಿದೆ. ಶುಕ್ರವಾರ ನಡೆಯುವ ಸಂಪುಟ ಸಭೆಯಲ್ಲಿ ಚರ್ಚಿಸಿ ಒಪ್ಪಿಗೆ ಪಡೆಯಲಾಗುವುದು. ಮಸೂದೆಯನ್ನು ಸೋಮವಾರ ಸಂಸತ್ತಿನ ಅಧಿವೇಶನದಲ್ಲಿ ಮಂಡಿಸಿ ಅಂಗೀಕಾರ ಪಡೆಯಲಾಗುವುದು ಎಂದು ತಿಳಿಸಿದ್ದಾರೆ. More strict actions against paper leaks to come in tomorrow’s Cabinet! pic.twitter.com/NRysBukk5U— Narendra Modi (@narendramodi) July 23, 2026 ಸರ್ಕಾರ ನೀಡಿದ ಪ್ರಮುಖ ಭರವಸೆಗಳೇನು?ಮೇದಾಂತ ಆಸ್ಪತ್ರೆಯಲ್ಲಿ ಸೊನಮ್ ವಾಂಗ್ಚೂಕ್, ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೊ ಹಾಗೂ ಇತರರ ಸಮ್ಮುಖದಲ್ಲಿ ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ಸರ್ಕಾರದ ಭರವಸೆಗಳನ್ನು ಓದಿ ಹೇಳಿದರು. ದೆಹಲಿಯ ಜಂತರ್ ಮಂತರ್ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದವರ ಮೇಲೆ ಹಾಗೂ ಜುಲೈ 20ರಂದು ಸಂಸತ್ ಮುತ್ತಿಗೆಯ ಮೆರವಣಿಗೆಯಲ್ಲಿ ಭಾಗವಹಿಸಿದವರ ಮೇಲೆ ಪ್ರಕರಣಗಳನ್ನು ದಾಖಲಿಸದಿರಲು ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಭರವಸೆ ನೀಡಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ಮತ್ತು ಪರೀಕ್ಷಾ ಸುಧಾರಣೆಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸುವುದಾಗಿ ಸರ್ಕಾರ ಈಗಾಗಲೇ ಭರವಸೆ ನೀಡಿದೆ ಎಂದೂ ಅವರು ಉಲ್ಲೇಖಿಸಿದ್ದಾರೆ. ಇದಲ್ಲದೆ, ಇತ್ತೀಚಿನ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದ ನೊಂದ, ಆತ್ಮಹತ್ಯೆ ಮಾಡಿಕೊಂಡ ಸಂತ್ರಸ್ತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವ ಕುರಿತು ಸರ್ಕಾರ ಗಂಭೀರವಾಗಿ ಪರಿಶೀಲಿಸುತ್ತಿದೆ ಎಂದು ಹೇಳಿದ್ದಾರೆ. (ಪಿಟಿಐ ಚಿತ್ರ)ಹಿಂಸಾಚಾರಕ್ಕೆ ಅವಕಾಶ ನೀಡಬಾರದು: ಸೊನಮ್ ಮನವಿವಿವಿಧ ರಾಜಕೀಯ ಪಕ್ಷಗಳ ಒಟ್ಟು 65 ಮಂದಿ ಸಂಸದರು ತಮ್ಮನ್ನು ಭೇಟಿಯಾಗಿ ಅಥವಾ ಪತ್ರ ಬರೆದು ಉಪವಾಸ ನಿಲ್ಲಿಸುವಂತೆ ಕೋರಿದ್ದರು ಎಂದು ವಾಂಗ್ಚೂಕ್ ತಿಳಿಸಿದ್ದಾರೆ. ದೇಶದಲ್ಲಿ ಸಂಭವಿಸಬಹುದಾದ ಹಿಂಸಾಚಾರವನ್ನು ಗಮನದಲ್ಲಿಟ್ಟುಕೊಂಡು ಹಾಗೂ ವಿವಿಧ ಷರುತ್ತಗಳ ಕುರಿತು ಸುದೀರ್ಘ ಮಾತುಕತೆಗಳ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ' ಎಂದು ಅವರು ತಿಳಿಸಿದ್ದಾರೆ. 'ಈ ಷರತ್ತುಗಳ ಬಗ್ಗೆ ನಾನು ಶೀಘ್ರದಲ್ಲೇ ಪ್ರತ್ಯೇಕ ವಿಡಿಯೊದಲ್ಲಿ ವಿವರವಾಗಿ ತಿಳಿಸುತ್ತೇನೆ. ಎಲ್ಲಿಯೂ ಯಾವುದೇ ಹಿಂಸಾಚಾರಕ್ಕೆ ಅವಕಾಶ ನೀಡದಂತೆ ಅತ್ಯಂತ ಜಾಗರೂಕರಾಗಿರುವಂತೆ ನಿಮ್ಮೆಲ್ಲರನ್ನು ಕೋರುತ್ತೇನೆ' ಎಂದು ಮನವಿ ಮಾಡಿದ್ದಾರೆ. We are relieved and grateful that Sonam sir has ended his hunger strike after 26 days.Protest will continue at Jantar Mantar till the resignation of Education minister Dharmendra Pradhan.— Cockroach Janta Party (@CJP_for_India) July 24, 2026 ಮುಂದುವರಿಯಲಿದೆ ಸಿಜೆಪಿ ಪ್ರತಿಭಟನೆ...ಸೊನಮ್ ವಾಂಗ್ಚೂಕ್ ಉಪವಾಸ ಹಿಂಪಡೆದಿರುವುದು 'ನೆಮ್ಮದಿ ತಂದಿದೆ' ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಕ್ರಿಯಿಸಿದೆ. ಆದರೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಜಂತರ್ ಮಂತರ್ನಲ್ಲಿ ಶಾಂತಿಯುತ ಪ್ರತಿಭಟನೆ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದೆ. 'ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕು. ಅಕ್ರಮ ನಡೆದ ಕಾರಣ ಪರೀಕ್ಷೆ ರದ್ದಾಗಿದ್ದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡ ಅಭ್ಯರ್ಥಿಗಳ ಕುಟುಂಬಕ್ಕೆ ತಲಾ ₹1 ಕೋಟಿ ಪರಿಹಾರ ನೀಡಬೇಕು. ಪ್ರತಿಭಟನಕಾರರ ವಿರುದ್ಧದ ಎಫ್ಐಆರ್ಗಳನ್ನು ರದ್ದುಗೊಳಿಸುವವರೆಗೆ ಹೋರಾಟ ನಿಲ್ಲುವುದಿಲ್ಲ' ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಸ್ಪಷ್ಟಪಡಿಸಿದ್ದಾರೆ. ಜೂನ್ 28ರಂದು ಸಿಜೆಪಿ ನೇತೃತ್ವದ ಜಂತರ್ ಮಂತರ್ ಪ್ರತಿಭಟನೆಯಲ್ಲಿ ಪಾಲ್ಗೊಂಡ ವಾಂಗ್ಚೂಕ್ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ಕಳೆದ 26 ದಿನಗಳಲ್ಲಿ ಅವರ ತೂಕ ಸುಮಾರು 11 ಕೆ.ಜಿ ತೂಕ ಇಳಿಕೆಯಾಗಿತ್ತು. ಜುಲೈ 18ರಂದು ದೆಹಲಿ ಪೊಲೀಸರು ಅವರನ್ನು ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೈಕೋರ್ಟ್ ನಿರ್ದೇಶನದಂತೆ ಅವರನ್ನು ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.Sonam wangchuk sir message to everyone who is fighting for corrupt education system,Thank you for break your strike. pic.twitter.com/wgdUTpW8Vu— Cockroach Janta Party (@CJP_for_India) July 24, 2026 ಕೇಂದ್ರದ ಭರವಸೆ: ಸೊನಮ್ ವಾಂಗ್ಚೂಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಸೊನಮ್ ಉಪವಾಸ ಅಂತ್ಯಗೊಳಿಸಿದ್ದು ನೆಮ್ಮದಿ ತಂದಿದೆ, ಹೋರಾಟ ಮುಂದುವರಿಯಲಿದೆ: CJP