ಕಸಾಪ ಚುನಾವಣೆ: ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ವೆಂಕಟರಾಮಯ್ಯ ಅಭ್ಯರ್ಥಿ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಕನ್ನಡ ಪರ ಹೋರಾಟಗಾರ ಹಾಗೂ ಲೇಖಕರಾಗಿರುವ ಜಾಣಗೆರೆ ವೆಂಕಟರಾಮಯ್ಯ ಸ್ಪರ್ಧಿಸಲಿದ್ದಾರೆ ಎಂದು ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಘೋಷಿಸಿದೆ.ಈ ಬಗ್ಗೆ ವಿವಿಧ ಸಾಹಿತಿಗಳು, ಚಿಂತಕರು ಹಾಗೂ ಹೋರಾಟಗಾರರು ಚರ್ಚಿಸಿ, ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಾರೆ.ಎಸ್.ಜಿ. ಸಿದ್ಧರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಕನ್ನಡ ಪರ ಹೋರಾಟಗಾರ ಹಾಗೂ ಲೇಖಕರಾಗಿರುವ ಜಾಣಗೆರೆ ವೆಂಕಟರಾಮಯ್ಯ ಸ್ಪರ್ಧಿಸಲಿದ್ದಾರೆ ಎಂದು ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಘೋಷಿಸಿದೆ.ಈ ಬಗ್ಗೆ ವಿವಿಧ ಸಾಹಿತಿಗಳು, ಚಿಂತಕರು ಹಾಗೂ ಹೋರಾಟಗಾರರು ಚರ್ಚಿಸಿ, ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಾರೆ.ಎಸ್.ಜಿ. ಸಿದ್ಧರಾಮಯ್ಯ, ಎಲ್. ಹನುಮಂತಯ್ಯ, ಕೆ.ಟಿ.ಶ್ರೀಕಂಠೇಗೌಡ, ಮಾವಳ್ಳಿ ಶಂಕರ್, ಡಾ.ವಸುಂಧರಾ ಭೂಪತಿ, ಆರ್.ಜಿ.ಹಳ್ಳಿ ನಾಗರಾಜ್, ಮೀರಾ ಶಿವಲಿಂಗಯ್ಯ, ಸಿ.ಕೆ. ರಾಮೇಗೌಡ, ಡಿ. ಈರಯ್ಯ ಮೊದಲಾದವರು ಜಾಣಗೆರೆ ವೆಂಕಟರಾಮಯ್ಯ ಅವರನ್ನು ಬೆಂಬಲಿಸಿದ್ದಾರೆ. ಮುಂಬರುವ ನವೆಂಬರ್ ಬಳಿಕ ಚುನಾವಣೆ ನಡೆಯಲಿದೆ. ‘ಸಮಸ್ತ ಕನ್ನಡಿಗರ ಹೆಮ್ಮೆಯ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತು ಇತ್ತೀಚಿನ ವರ್ಷಗಳಲ್ಲಿ ಅಧಃಪತನದತ್ತ ಸಾಗಲು, ಅದರ ಘನತೆಗೆ ಕುಂದುಂಟಾಗಲು ಹಾಗೂ ಸಾಮಾನ್ಯ ಕನ್ನಡಿಗರಿಂದ ದೂರವಾಗಲು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿ ಬಂದಿದ್ದ ಅಧಿಕಾರಶಾಹಿಗಳೇ ಕಾರಣ. ಪರಿಷತ್ತಿನ ಗೌರವ–ಘನತೆಯನ್ನು ಮರುಸ್ಥಾಪಿಸುವ ಆಶಯದೊಂದಿಗೆ ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದೇವೆ. ಜಾಣಗೆರೆ ವೆಂಕಟರಾಮಯ್ಯ ಅವರು ಯಾವುದೇ ಸ್ಥಾನಮಾನ, ಪ್ರಶಸ್ತಿಗಳಿಗೆ ಲಾಬಿ ಮಾಡಿದವರಲ್ಲ’ ಎಂದು ಸಮಿತಿ ಹೇಳಿದೆ.