ಗದಗ | ಕಾಂಗ್ರೆಸ್ನಿಂದ ವಿದ್ಯಾರ್ಥಿ ಹೋರಾಟ ದುರ್ಬಳಕೆ: ಬಿಜೆಪಿ ಆರೋಪ
ಗದಗ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ, ನವದೆಹಲಿಯ ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳು ನಡೆಸಿದ ಹೋರಾಟವನ್ನು ಕಾಂಗ್ರೆಸ್ ದುರ್ಬಳಕೆ ಮಾಡಿಕೊಂಡಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು.ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ಶುಕ್ರವಾರ, ಕಾಂಗ್ರೆಸ್ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ

ಗದಗ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ, ನವದೆಹಲಿಯ ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳು ನಡೆಸಿದ ಹೋರಾಟವನ್ನು ಕಾಂಗ್ರೆಸ್ ದುರ್ಬಳಕೆ ಮಾಡಿಕೊಂಡಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು.ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ಶುಕ್ರವಾರ, ಕಾಂಗ್ರೆಸ್ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಯಾವಾಗಲೂ ವಿದ್ಯಾರ್ಥಿಗಳ ಪರ ಇದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಆದರೂ, ಕಾಂಗ್ರೆಸ್ ಕೊಳಕು ರಾಜಕಾರಣ ಮಾಡುತ್ತಿದೆ. ದೇಶದ್ರೋಹಿಗಳೊಂದಿಗೆ ಪ್ರತಿಭಟನೆ ನಡೆಸಿ, ಮೋದಿ ಸರ್ಕಾರಕ್ಕೆ ಮಸಿ ಬಳಿಯಲು ಯತ್ನಿಸುತ್ತಿದೆ ಎಂದು ಟೀಕಿಸಿದರು. ವಿದ್ಯಾರ್ಥಿಗಳ ಹೋರಾಟದ ವೇದಿಕೆಯಲ್ಲಿ ಆರ್ ಎಸ್ ಎಸ್ ಅನ್ನು ಟೀಕಿಸಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆಯಾಗಿ ತಿಂಗಳಾದ ಬಳಿಕ, ಅರಾಜಕತೆ ಸೃಷ್ಟಿಸಲು ಪ್ರತಿಭಟನೆ ನಡೆಸಲಾಗುತ್ತಿದೆ. ಇದು ಪೂರ್ವನಿಯೋಜಿತ ಕೃತ್ಯ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ವಿರುದ್ಧ ಹೋರಾಟ ತೀವ್ರಗೊಳಿಸಲಾಗುವುದು. ಕಾಂಗ್ರೆಸ್ ಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದರು.ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು, ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು.ಮಾಜಿ ಶಾಸಕ ಕಳಕಪ್ಪ ಬಂಡಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಕುರಡಗಿ, ಎಂ.ಎಸ್. ಕರಿಗಾರ, ಲಿಂಗರಾಜ ಪಾಟೀಲ ಮೊದಲಾದವರು ಇದ್ದರು.