ಬಿಎಂಟಿಸಿ ಬಸ್ ಪ್ರಯಾಣಿಕರ ಬಳಿ ಪರ್ಸ್, ನಗದು ಕಳ್ಳತನ: ಇಬ್ಬರ ಬಂಧನ
ಬೆಂಗಳೂರು: ಬಿಎಂಟಿಸಿ ಬಸ್ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ಪರ್ಸ್, ನಗದು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.ಕೆಂಗೇರಿಯ ಮುಬಾರಕ್ ಪಾಷಾ, ಜೆ.ಜೆ.ನಗರದ ಅನ್ವರ್ ಪಾಷಾ ಬಂಧಿತರು. ಕೃತ್ಯದಲ್ಲಿ ಭಾಗಿಯಾಗಿರುವ ಇನ್ನೂ ಮೂವರು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ

ಬೆಂಗಳೂರು: ಬಿಎಂಟಿಸಿ ಬಸ್ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ಪರ್ಸ್, ನಗದು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.ಕೆಂಗೇರಿಯ ಮುಬಾರಕ್ ಪಾಷಾ, ಜೆ.ಜೆ.ನಗರದ ಅನ್ವರ್ ಪಾಷಾ ಬಂಧಿತರು. ಕೃತ್ಯದಲ್ಲಿ ಭಾಗಿಯಾಗಿರುವ ಇನ್ನೂ ಮೂವರು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಬಿಎಂಟಿಸಿ ಬಸ್ಗಳಲ್ಲಿ ಕಿಟಕಿಯ ಪಕ್ಕದ ಸೀಟಿನಲ್ಲಿ ಕುಳಿತು ಪ್ರಯಾಣಿಸುವವರನ್ನು ಗುರಿಯಾಗಿಸಿಕೊಂಡು ಆರೋಪಿಗಳು ಕಾರ್ಯಾಚರಣೆ ಮಾಡುತ್ತಿದ್ದರು. ವಾಂತಿ ಬರುತ್ತಿದ್ದು, ಸೀಟು ಬಿಟ್ಟುಕೊಡುವಂತೆ ಗ್ಯಾಂಗ್ ಸದಸ್ಯ ಮನವಿ ಮಾಡುತ್ತಿದ್ದ. ಪ್ರಯಾಣಿಕರು ಸೀಟು ಬಿಟ್ಟುಕೊಡುತ್ತಿದ್ದರು. ಆಗ ಪ್ರಯಾಣಿಕರ ಸೋಗಿನಲ್ಲಿದ್ದ ಐವರು ಆರೋಪಿಗಳು, ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಅವರ ಜೀಬಿನಲ್ಲಿದ್ದ ಪರ್ಸ್ ಹಾಗೂ ನಗದು ಕಳ್ಳತನ ಮಾಡಿ ಪರಾರಿಯಾಗುತ್ತಿದ್ದರು ಎಂದು ಪೊಲೀಸರು ಹೇಳಿದರು.ಕೇಂದ್ರ ವಿಭಾಗದ ವ್ಯಾಪ್ತಿಯಲ್ಲಿ ಎರಡು ಕಡೆಗಳಲ್ಲಿ ಆರೋಪಿಗಳು ಕೃತ್ಯವೆಸಗಿದ್ದರು. ಅಲ್ಲದೇ, ನಗರದ ವಿವಿಧ ಕಡೆಗಳಲ್ಲಿ ಕೃತ್ಯವೆಸಗಿರುವ ಬಗ್ಗೆ ದೂರು ದಾಖಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದರು.