ದೌರ್ಜನ್ಯ, ಬಲವಂತದ ಮತಾಂತರ: ಎಂಟು ಜನರ ವಿರುದ್ಧ ಪ್ರಕರಣ ದಾಖಲು
ಬಾರಾಬಂಕಿ (ಉತ್ತರ ಪ್ರದೇಶ): ಮಹಿಳೆಯನ್ನು ಅಪಹರಿಸಿ, ಲೈಂಗಿಕ ಶೋಷಣೆ ಎಸಗಿ, ಧಾರ್ಮಿಕ ಮತಾಂತರ ಮತ್ತು ಮದುವೆಗೆ ಒತ್ತಾಯಿಸಿದ ಆರೋಪದಡಿ ಎಂಟು ಜನರ ವಿರುದ್ಧ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ತಾಯಿ ದೂರು ನೀಡಿದ್ದು, ಅದರಲ್ಲಿ ಪೊಲೀಸ್ ಕಾನ್ಸ್ಟೆಬಲ್ ಆಸಿಫ್ ಎಂಬಾತ ತಮ್ಮ ಮಗಳಿಗೆ ಲೈಂಗಿಕ ಕಿರುಕುಳ ನೀಡಲು ಪ್

ಬಾರಾಬಂಕಿ (ಉತ್ತರ ಪ್ರದೇಶ): ಮಹಿಳೆಯನ್ನು ಅಪಹರಿಸಿ, ಲೈಂಗಿಕ ಶೋಷಣೆ ಎಸಗಿ, ಧಾರ್ಮಿಕ ಮತಾಂತರ ಮತ್ತು ಮದುವೆಗೆ ಒತ್ತಾಯಿಸಿದ ಆರೋಪದಡಿ ಎಂಟು ಜನರ ವಿರುದ್ಧ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ತಾಯಿ ದೂರು ನೀಡಿದ್ದು, ಅದರಲ್ಲಿ ಪೊಲೀಸ್ ಕಾನ್ಸ್ಟೆಬಲ್ ಆಸಿಫ್ ಎಂಬಾತ ತಮ್ಮ ಮಗಳಿಗೆ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿ, ಇಸ್ಲಾಂ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಡ ಹೇರಿದ್ದ. ಆಕೆ ನಿರಾಕರಿಸಿದಾಗ ಅವಳಿಗೆ ಹಣದ ಆಮಿಷವೊಡ್ಡಿದ್ದ. ಜೊತೆಗೆ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿ ಜಾವೇದ್ ಎಂಬಾತನಿಗೆ ಪರಿಚಯಿಸಿದ್ದಾನೆ ಎಂದು ತಿಳಿಸಿದ್ದಾರೆ.ಸಾಮಾಜಿಕ ಜಾಲತಾಣಗಳ ಮೂಲಕ ಜಾವೇದ್ ಮಹಿಳೆಯನ್ನು ಮರುಳು ಮಾಡಿದ್ದಾನೆ ಎಂದು ಪೊಲೀಸರು ಆರೋಪಿಸಿದ್ದಾರೆ. ಜಾವೇದ್ ಸೌದಿ ಆರೇಬಿಯಾದಿಂದ ಹಿಂದಿರುಗಿದ ಬಳಿಕ ಮಹಿಳೆಯನ್ನು ತನ್ನೊಂದಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ, ಇಸ್ಲಾಂ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ಗರ್ಭಿಣಿಯಾಗಿದ್ದ ಆಕೆಗೆ ಎರಡು ಬಾರಿ ಗರ್ಭಪಾತ ಮಾಡಿಸಿಕೊಳ್ಳುವಂತೆಯೂ ಒತ್ತಾಯಿಸಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಸಂಬಂಧಿಕರಾದ ರೆಹಾನ್, ಹಮ್ಜಾ ಅವರೊಂದಿಗೆ ಕೆಲವು ದಿನಗಳ ಹಿಂದೆ ಜಾವೇದ್ ಬಂದು, ಮಹಿಳೆಯನ್ನು ಇಸ್ಲಾಂ ಧರ್ಮಗುರುವಿನ ಬಳಿ ಕರೆದೊಯ್ದು, ಮದುವೆ ಮಾಡಿಕೊಂಡಿದ್ದಾನೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಜಾವೇದ್, ರೆಹಾನ್, ಹಮ್ಜಾ ಮತ್ತು ಆಶಿಫ್ ಮತ್ತು ಇತರ ಎಂಟು ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಮೂವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.