ದಕ್ಷಿಣ ಕನ್ನಡದಲ್ಲಿ ನಿಲ್ಲದ ಮಳೆ – ಜು.25ರಂದು ಶಾಲಾ-ಕಾಲೇಜುಗಳಿಗೆ ರಜೆ
ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ನಾಳೆ (ಜು.25) ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ (ಜುಲೈ 25) ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಿರುವ ಹಿನ್ನೆಲೆ, ವಿದ್ಯಾರ

ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ನಾಳೆ (ಜು.25) ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ (ಜುಲೈ 25) ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಿರುವ ಹಿನ್ನೆಲೆ, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ಈ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಉಡುಪಿಯಲ್ಲಿ ನಿರಂತರ ಮಳೆ – ಜು.25ರಂದು ಶಾಲಾ, ಕಾಲೇಜುಗಳಿಗೆ ರಜೆ ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ ಘೋಷಿಸಿ ಡಿಸಿ ಹೆಚ್.ವಿ ದರ್ಶನ್ ಆದೇಶ ಹೊರಡಿಸಿದ್ದಾರೆ.
Read the complete story at Public TV Kannada