ಆಷಾಢ ಮಾಸದ ಸಂಭ್ರಮ – ತಾಯಿ ಚಾಮುಂಡಿಗೆ ಸಪ್ತಮಿ, ಅಶ್ವಿನಿ ಗೌಡ, ಧನ್ವೀರ್ ವಿಶೇಷ ಪೂಜೆ
ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ (Mysuru Chamundi Hills) ಅಪಾರ ಸಂಖ್ಯೆಯ ಭಕ್ತರು ಆಗಮಿಸಿ ತಾಯಿ ದರ್ಶನ ಪಡೆದಿದ್ದಾರೆ. ಆಷಾಢ ಮಾಸದ ಹಿನ್ನೆಲೆ ಕಾಂತಾರ ಬೆಡಗಿ ಸಪ್ತಮಿ ಗೌಡ (Saptami Gowda), ಬಿಗ್ಬಾಸ್ ಸ್ಪರ್ಧಿ ಅಶ್ವಿನಿ ಗೌಡ (Ashwini Gowda) ಹಾಗೂ ನಟ ಧನ್ವೀರ್ ಕೂಡ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ (Mysuru Chamundi Hills) ಅಪಾರ ಸಂಖ್ಯೆಯ ಭಕ್ತರು ಆಗಮಿಸಿ ತಾಯಿ ದರ್ಶನ ಪಡೆದಿದ್ದಾರೆ. ಆಷಾಢ ಮಾಸದ ಹಿನ್ನೆಲೆ ಕಾಂತಾರ ಬೆಡಗಿ ಸಪ್ತಮಿ ಗೌಡ (Saptami Gowda), ಬಿಗ್ಬಾಸ್ ಸ್ಪರ್ಧಿ ಅಶ್ವಿನಿ ಗೌಡ (Ashwini Gowda) ಹಾಗೂ ನಟ ಧನ್ವೀರ್ ಕೂಡ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕುಟುಂಬ ಸದಸ್ಯರು, ಸ್ನೇಹಿತರ ಜೊತೆಗೆ ಬಾಗೀನ ಸಮೀತವಾಗಿ ಬಂದು ತಾಯಿ ಚಾಮುಂಡಿಗೆ ಪೂಜೆ ಸಲ್ಲಿಸಿದ ನಟ ಧನ್ವೀರ್ (Dhanveer Gowda) ಗರ್ಭಗುಡಿಯಲ್ಲಿ ನಿಂತು ತಾಯಿ ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ನಟಿ ಅಶ್ವಿನಿ ಗೌಡ ಅವರೂ ತಾಯಿ ಚಾಮುಂಡಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸಿದ ತಾಯಿ ಚಾಮುಂಡಿ ಆಷಾಢ ಮಾಸದ 2ನೇ ಶುಕ್ರವಾರವಾದ ಇಂದು ತಾಯಿ ಚಾಮುಂಡಿಗೆ ಲಕ್ಷ್ಮಿ ಅಲಂಕಾರ ಮಾಡಲಾಗಿದ್ದು, ಇಡೀ ದೇವಸ್ಥಾನವನ್ನ ವಿವಿಧ ಹೂಗಳ ಮಾಲೆಗಳಿಂದ ಅಲಂಕರಿಸಲಾಗಿದೆ. ಬೆಳ್ಳಗೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ತಾಯಿಯ ದರ್ಶನ ಪಡೆದಿದ್ದಾರೆ. ಇತ್ತ ಕೋಲಾರದ ಶಕ್ತಿ ದೇವತೆ ಕೋಲಾರಮ್ಮ ದೇವಾಲಯಕ್ಕೂ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು. ಕೋಲಾರಮ್ಮ ದೇವಿಗೆ ವಿಶೇಷ ಪೂಜೆ, ಅಲಂಕಾರ ಮಾಡಲಾಗಿತ್ತು. ಕೋಲಾರಮ್ಮ ತಾಯಿ ದರ್ಶನ ಪಡೆದು ಭಕ್ತರು ಪುನೀತರಾದ್ರು. ದೇವಾಲಯದಲ್ಲಿ ತಂಬಿಟ್ಟಿನ ದೀಪ, ನಿಂಬೆ ಹಣ್ಣಿನ ದೀಪ ಹಚ್ಚಿ ದೇವರಿಗೆ ಪೂಜೆ ಸಲ್ಲಿಸಿದ್ರು.