ಬೆಂಗಳೂರಲ್ಲಿ ʻನೀಟ್ʼ ಪ್ರತಿಭಟನೆ ವೇಳೆ ವಿವಾದ – 2020ರ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ ಪರ ಪೋಸ್ಟರ್
– ಪೋಸ್ಟರ್ ಪ್ರದರ್ಶಿಸಿದ ಯುವತಿಗೆ ಇತರ ವಿದ್ಯಾರ್ಥಿಗಳಿಂದ ಕ್ಲಾಸ್ ಬೆಂಗಳೂರು: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಬೆಂಗಳೂರಿನಲ್ಲಿ ಕಳೆದ 5 ದಿನಗಳಿಂದ ವಿದ್ಯಾರ್ಥಿಗಳು ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ಮುಂದುವರಿದಿದೆ. ಪ್ರತಿಭಟನೆ ಶಾಂತಿಯುತವಾಗಿ ನಡೆಯುತ್ತಿದ್ದ ವೇಳೆ ಶುಕ್ರವಾರ (ಜು.24) ಕೆಲವರು ಹಿಡಿದಿದ್ದ ವ

– ಪೋಸ್ಟರ್ ಪ್ರದರ್ಶಿಸಿದ ಯುವತಿಗೆ ಇತರ ವಿದ್ಯಾರ್ಥಿಗಳಿಂದ ಕ್ಲಾಸ್ ಬೆಂಗಳೂರು: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಬೆಂಗಳೂರಿನಲ್ಲಿ ಕಳೆದ 5 ದಿನಗಳಿಂದ ವಿದ್ಯಾರ್ಥಿಗಳು ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ಮುಂದುವರಿದಿದೆ. ಪ್ರತಿಭಟನೆ ಶಾಂತಿಯುತವಾಗಿ ನಡೆಯುತ್ತಿದ್ದ ವೇಳೆ ಶುಕ್ರವಾರ (ಜು.24) ಕೆಲವರು ಹಿಡಿದಿದ್ದ ವಿವಾದಾತ್ಮಕ ಹಾಗೂ ಪ್ರಚೋದನಕಾರಿ ಪೋಸ್ಟರ್ಗಳು ವಿವಾದ ಸೃಷ್ಟಿಸಿವೆ. ಪ್ರತಿಭಟನೆಗೆ ಬಂದಿದ್ದ ಕೆಲವರು ʻUkhad Le BLR Policeʼ ಎಂಬ ಬರಹವಿದ್ದ ಪೋಸ್ಟರ್ಗಳನ್ನು ಪ್ರದರ್ಶಿಸಿದ್ರೆ, ಮತ್ತೊಂದು ಕಡೆ ಉಮರ್ ಖಾಲಿದ್ ಹಾಗೂ ಶಾರ್ಜೀಲ್ ಇಮಾಮ್ ಪರವಾಗಿ ಘೋಷಣೆಗಳಿರುವ ಪೋಸ್ಟರ್ಗಳನ್ನ ಪ್ರದರ್ಶಿಸಿರುವುದು ಕಂಡುಬಂದಿದೆ. ಈ ಪೋಸ್ಟರ್ಗಳು ಅಲ್ಲಿದ್ದ ಪೊಲೀಸರ ಗಮನ ಸೆಳೆದಿದ್ದು, ಪರಿಸ್ಥಿತಿ ಉದ್ವಿಗ್ನವಾಗದಂತೆ ಪೊಲೀಸರು ತಕ್ಷಣವೇ ಪೋಸ್ಟರ್ಗಳನ್ನ ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಮೋದಿ ಸರ್ಕಾರದಿಂದ ಕಠಿಣಾತಿಕಠಿಣ ಕಾನೂನು – ಪ್ರಶ್ನೆಪತ್ರಿಕೆ ಲೀಕಾಸುರರಿಗೆ 10 ವರ್ಷ ಜೈಲು, 10 ಕೋಟಿವರೆಗೆ ದಂಡ ಪೊಲೀಸರ ಕ್ರಮದ ವೇಳೆ ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾದರೂ, ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಪ್ರತಿಭಟನೆ ಶಾಂತಿಯುತವಾಗಿ ಮುಂದುವರಿಯುವಂತೆ ಪೊಲೀಸರು ಮತ್ತು ಆಯೋಜಕರು ಪರಿಸ್ಥಿತಿಯನ್ನ ನಿಯಂತ್ರಿಸಿದರು. ಪೋಸ್ಟರ್ ಹಿಡಿದ ವಿದ್ಯಾರ್ಥಿನಿಗೆ ಸ್ಥಳದಲ್ಲೇ ಕ್ಲಾಸ್ ಇನ್ನೂ ಪ್ರತಿಭಟನಾ ಸ್ಥಳದಲ್ಲಿ ಉಮರ್ ಖಾಲಿದ್ ಪರವಾಗಿ ಪೋಸ್ಟರ್ ಹಿಡಿದು ಬಂದಿದ್ದ ಯುವತಿಗೆ ಇತರ ವಿದ್ಯಾರ್ಥಿಗಳು ಸ್ಥಳದಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಇಂತಹ ಪೋಸ್ಟರ್ಗಳು ಪ್ರತಿಭಟನೆಯ ಮೂಲ ಉದ್ದೇಶಕ್ಕೆ ಧಕ್ಕೆ ಉಂಟುಮಾಡುತ್ತವೆ ಎಂದು ಹೇಳಿ ಸ್ಥಳದಿಂದ ತೆರಳುವಂತೆ ಒತ್ತಾಯಿಸಿದ್ದಾರೆ. ಬಳಿಕ ಆಕೆ ಪ್ರತಿಭಟನಾ ಸ್ಥಳದಿಂದ ಹೊರನಡೆದಿದ್ದಾರೆ. ಉಮರ್ ಖಾಲಿದ್ ಯಾರು? ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ 2020ರ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿಗಳು. ಇದನ್ನೂ ಓದಿ: ದೆಹಲಿ ಪೊಲೀಸರಿಂದ ಪೆಲೆಟ್ ಗನ್ ಬಳಕೆ – ಮಾಧ್ಯಮಗಳ ಮುಂದೆ ಗಾಯಾಳುವಿನ ಟಿ ಶರ್ಟ್ ಎತ್ತಿ ತೋರಿಸಿದ ರಾಹುಲ್ ಗಾಂಧಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಸಮ್ಮತ ತನಿಖೆ ನಡೆಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟು ಪ್ರತಿಭಟನೆ ಮುಂದುವರಿದಿದೆ. ಆದರೆ ಪ್ರತಿಭಟನೆಯ ವೇಳೆ ಪ್ರದರ್ಶಿಸಲಾದ ವಿವಾದಾತ್ಮಕ ಪೋಸ್ಟರ್ಗಳು ಪ್ರತಿಭಟನೆಯ ಮೂಲ ವಿಷಯಕ್ಕಿಂತ ಹೆಚ್ಚು ಗಮನ ಸೆಳೆದಿದ್ದು, ಈ ಬೆಳವಣಿಗೆ ಸಾರ್ವಜನಿಕ ವಲಯದಲ್ಲಿಯೂ ಚರ್ಚೆಗೆ ಕಾರಣವಾಗಿದೆ.