ಸೊನಮ್ ಉಪವಾಸ ಅಂತ್ಯಗೊಳಿಸಿದ್ದು ನೆಮ್ಮದಿ ತಂದಿದೆ, ಹೋರಾಟ ಮುಂದುವರಿಯಲಿದೆ: CJP
ನವದೆಹಲಿ: ಶಿಕ್ಷಣ ತಜ್ಞ, ಪರಿಸರ ಕಾರ್ಯಕರ್ತ ಸೊನಮ್ ವಾಂಗ್ಚೂಕ್ ಅವರು ತಮ್ಮ 26 ದಿನಗಳ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿರುವುದು ನಮಗೆ ನೆಮ್ಮದಿ ತಂದಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಶುಕ್ರವಾರ ತಿಳಿಸಿದೆ.ಆದರೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡುವವರೆಗೂ ದೆಹಲಿಯ ಜಂತರ್ ಮಂತರ್ನಲ್ಲಿ ಶಾಂತಿಯುತ ಪ್ರತಿಭಟನೆ ಮುಂದ

ನವದೆಹಲಿ: ಶಿಕ್ಷಣ ತಜ್ಞ, ಪರಿಸರ ಕಾರ್ಯಕರ್ತ ಸೊನಮ್ ವಾಂಗ್ಚೂಕ್ ಅವರು ತಮ್ಮ 26 ದಿನಗಳ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿರುವುದು ನಮಗೆ ನೆಮ್ಮದಿ ತಂದಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಶುಕ್ರವಾರ ತಿಳಿಸಿದೆ.ಆದರೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡುವವರೆಗೂ ದೆಹಲಿಯ ಜಂತರ್ ಮಂತರ್ನಲ್ಲಿ ಶಾಂತಿಯುತ ಪ್ರತಿಭಟನೆ ಮುಂದುವರಿಯಲಿದೆ ಎಂದು ಅದು ಘೋಷಿಸಿದೆ.ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ, ಅಸಾಧಾರಣ ಧೈರ್ಯ ಮತ್ತು ತ್ಯಾಗಕ್ಕಾಗಿ ವಾಂಗ್ಚೂಕ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.‘ವಾಂಗ್ಚೂಕ್ ಅವರು ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿರುವುದು ನಮಗೆ ನೆಮ್ಮದಿ ಮತ್ತು ಕೃತಜ್ಞತಾ ಭಾವ ಮೂಡಿಸಿದೆ. ನಿಮ್ಮ(ವಾಂಗ್ಚೂಕ್) ಅಸಾಧಾರಣ ಧೈರ್ಯ ಮತ್ತು ತ್ಯಾಗಕ್ಕಾಗಿ ಧನ್ಯವಾದಗಳು. ಪ್ರಾಣ ಪಣಕ್ಕಿಟ್ಟು ಇಡೀ ದೇಶದ ಆತ್ಮಸಾಕ್ಷಿಯನ್ನು ನೀವು ಜಾಗೃತಗೊಳಿಸಿದ್ದೀರಿ. ಈ ದೇಶಕ್ಕೆ ನಿಮ್ಮ ಅಗತ್ಯವಿದೆ’ ಎಂದು ದೀಪ್ಕೆ ಹೇಳಿದ್ದಾರೆ.'ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕು. ಅಕ್ರಮ ನಡೆದ ಕಾರಣ ಪರೀಕ್ಷೆ ರದ್ದಾಗಿದ್ದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡ ಅಭ್ಯರ್ಥಿಗಳ ಕುಟುಂಬಕ್ಕೆ ತಲಾ ₹1 ಕೋಟಿ ಪರಿಹಾರ ನೀಡಬೇಕು. ಪ್ರತಿಭಟನಕಾರರ ವಿರುದ್ಧದ ಎಫ್ಐಆರ್ಗಳನ್ನು ರದ್ದುಗೊಳಿಸುವವರೆಗೆ ಹೋರಾಟ ನಿಲ್ಲುವುದಿಲ್ಲ' ಎಂದು ಅವರು ಸ್ಪಷ್ಟಪಡಿಸಿದ್ದಾರೆ.We are relieved and grateful that Sonam sir has ended his hunger strike after 26 days.Thank you, sir, for your extraordinary courage and sacrifice. By putting your own life on the line, you awakened the conscience of an entire nation. Your life is far too precious to this… pic.twitter.com/XXaubgkEbW— Cockroach is Back (@Cockroachisback) July 23, 2026 ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಮತ್ತು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದಿಂದ ತೊಂದರೆಗೊಳಗಾದ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ಹಾಗೂ ಪರೀಕ್ಷಾ ಸುಧಾರಣೆಗಳಿಗೆ ಸಂಬಂಧಿಸಿದ ಅವರ ಪ್ರಮುಖ ಬೇಡಿಕೆಗಳನ್ನು ಪರಿಗಣಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದ ನಂತರ, ವಾಂಗ್ಚೂಕ್ ಅವರು ಗುರುವಾರ ತಡರಾತ್ರಿ ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದರು.