ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಕಠಿಣ ಕಾನೂನು: ಮಿಡ್ನೈಟ್ ಮೋದಿ ಸಂದೇಶ
ನವದೆಹಲಿ: ದೇಶಾದ್ಯಂತ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಾಗುತ್ತಿರುವ ಪ್ರಕರಣಗಳ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಈ ಕುರಿತು ಗುರುವಾರ ತಡರಾತ್ರಿ ವಿಡಿಯೋ ಸಂದೇಶ ರವಾನಿಸಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕಠಿಣ ಕಾನೂನು ಮತ್ತು ಶಿಕ್ಷೆ ಒದಗಿಸುವ ಹೊಸ ಮಸೂದೆ ಮಂಡಿಸಲು ಸರ್ಕಾರ ಸಿದ್ಧತೆ ನಡ

ನವದೆಹಲಿ: ದೇಶಾದ್ಯಂತ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಾಗುತ್ತಿರುವ ಪ್ರಕರಣಗಳ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಈ ಕುರಿತು ಗುರುವಾರ ತಡರಾತ್ರಿ ವಿಡಿಯೋ ಸಂದೇಶ ರವಾನಿಸಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕಠಿಣ ಕಾನೂನು ಮತ್ತು ಶಿಕ್ಷೆ ಒದಗಿಸುವ ಹೊಸ ಮಸೂದೆ ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಪ್ರಕಟಿಸಿದ್ದಾರೆ. ರಾತ್ರಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಮೋದಿ ಈ ಹೊಸ ನಿಯಮಗಳು ಮತ್ತು ಕಠಿಣ ಕ್ರಮಗಳ ಕುರಿತು ಶುಕ್ರವಾರ ನಡೆಯಲಿರುವ ಕೇಂದ್ರ ಸಚಿವರ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಲಿದೆ ಎಂದು ತಿಳಿಸಿದರು. More strict actions against paper leaks to come in tomorrow’s Cabinet! pic.twitter.com/NRysBukk5U — Narendra Modi (@narendramodi) July 23, 2026 ಸೋಮವಾರದಿಂದ ಸಂಸತ್ತಿನ ದ್ವಿತೀಯ ವಾರದ ಕಲಾಪಗಳು ಪ್ರಾರಂಭವಾಗುತ್ತಿದ್ದು, ಆದಷ್ಟು ಬೇಗ ಈ ಮಸೂದೆಯನ್ನು (Bill) ಮಂಡಿಸಿ ಅಂಗೀಕರಿಸಲು ಪ್ರಯತ್ನಿಸಲಾಗುವುದು. ಈ ಪ್ರಕರಣಗಳ ತನಿಖೆ ಮತ್ತು ವಿಚಾರಣೆಯನ್ನು ಶೀಘ್ರವಾಗಿ ಮುಗಿಸಲು ಫಾಸ್ಟ್ ಟ್ರ್ಯಾಕ್ ಕೋರ್ಟ್ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ನಿಬಂಧನೆಗಳಿರಲಿವೆ. ಪ್ರಶ್ನೆಪತ್ರಿಕೆ ಸೋರಿಕೆ ಎಂಬುದು ಸಾಮಾನ್ಯ ವಿಷಯವಲ್ಲ. ಇದು ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ತೀವ್ರ ನೋವುಂಟು ಮಾಡುತ್ತದೆ ಎಂಬುದು ನನಗೂ ತಿಳಿದಿದೆ. ವಿದ್ಯಾರ್ಥಿಗಳ ಒಂದು ವರ್ಷ ವ್ಯರ್ಥವಾಗಬಾರದು ಎಂಬುದೇ ನಮ್ಮ ಮೊದಲ ಆದ್ಯತೆ ಎಂದು ತಿಳಿಸಿದರು.