‘ನೀಟ್’ ಹೋರಾಟಕ್ಕೆ ಧಾರ್ಮಿಕ ಬಣ್ಣ: ಆರೋಪಿ ಬಂಧನ
ಮಂಗಳೂರು: ನೀಟ್ ಅವ್ಯಹಾರಕ್ಕೆ ಸಂಬಂಧಿಸಿ ದೇಶದಾದ್ಯಂತ ನಡೆಯುತ್ತಿರುವ ಹೋರಾಟಕ್ಕೆ ಧಾರ್ಮಿಕ ಬಣ್ಣ ಕೊಟ್ಟು ಅವಹೇಳನಕಾರಿ ಬರಹವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಆರೋಪಿನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ಕೆಎಫ್ಸಿ ಖಂಡಿಗ ಎಂಬ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ಹಂಚಲಾಗಿದೆ ಎಂದು ವ್ಯಕ್ತಿಯೊಬ್ಬರು ದೂರಿದ್ದರು. ಇದರ

ಮಂಗಳೂರು: ನೀಟ್ ಅವ್ಯಹಾರಕ್ಕೆ ಸಂಬಂಧಿಸಿ ದೇಶದಾದ್ಯಂತ ನಡೆಯುತ್ತಿರುವ ಹೋರಾಟಕ್ಕೆ ಧಾರ್ಮಿಕ ಬಣ್ಣ ಕೊಟ್ಟು ಅವಹೇಳನಕಾರಿ ಬರಹವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಆರೋಪಿನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ಕೆಎಫ್ಸಿ ಖಂಡಿಗ ಎಂಬ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ಹಂಚಲಾಗಿದೆ ಎಂದು ವ್ಯಕ್ತಿಯೊಬ್ಬರು ದೂರಿದ್ದರು. ಇದರ ಆಧಾರದಲ್ಲಿ ಸ್ಕ್ರೀನ್ ಶಾಟ್ ಪರಿಶೀಲಿಸಿ ಗ್ರೂಪ್ನ ಸದಸ್ಯ ಬಂಟ್ವಾಳ ತಾಲ್ಲೂಕಿನ ಕೇಪು ಗ್ರಾಮದ ಭರತ್ (36)ಎಂಬಾತನನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಜುಲೈ 23ರಂದು ಗ್ರೂಪ್ನಲ್ಲಿ ಹಂಚಿಕೊಂಡಿರುವ ಪೋಸ್ಟ್ನಲ್ಲಿ ಸಮುದಾಯಗಳ ನಡುವೆ ವೈಮನಸ್ಯ ಮೂಡಿಸುವ ಹಾಗೂ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟು ಮಾಡುವ ಬರಹವಿತ್ತು. ಆ ಬರಹವನ್ನು ಭರತ್ ತನ್ನ ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಹಾಕಿದ್ದ. ಇದರ ಆಧಾರದಲ್ಲಿ ವಿಟ್ಲ ಪೊಲೀಸರು ಭಾರತೀಯ ನ್ಯಾಯಸಂಹಿತೆಯ ಕಲಂ 197(1)(ಎ, 197(1)(ಸಿ)ಹಾಗೂ 353(2)ರಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ ಎದು ಎಸ್ಪಿ ತಿಳಿಸಿದ್ದಾರೆ.