ದೆಹಲಿ: ಪ್ರತಿಭಟನೆಯಲ್ಲಿ ಭಾಗಿಯಾಗದಂತೆ ಜೆಎನ್ಯು ಸಲಹೆ
ನವದೆಹಲಿ: ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗದಂತೆ ಮತ್ತು ಪ್ರತಿಭಟನಾ ಸ್ಥಳಗಳಿಗೆ ಭೇಟಿ ನೀಡದಂತೆ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯವು (ಜೆಎನ್ಯು) ತನ್ನ ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಮತ್ತು ಸಿಬ್ಬಂದಿಗೆ ಶುಕ್ರವಾರ ಸಲಹೆ ನೀಡಿದೆ.ವೈಯಕ್ತಿಕ ಸುರಕ್ಷತೆಯ ಬಗ್ಗೆ ಗಮನಹರಿಸಿ ಮತ್ತು ಸಾಮಾಜಿಕ ಜಾಲತಾಣವನ್ನು ಜವಾಬ್ದಾರಿಯು

ನವದೆಹಲಿ: ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗದಂತೆ ಮತ್ತು ಪ್ರತಿಭಟನಾ ಸ್ಥಳಗಳಿಗೆ ಭೇಟಿ ನೀಡದಂತೆ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯವು (ಜೆಎನ್ಯು) ತನ್ನ ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಮತ್ತು ಸಿಬ್ಬಂದಿಗೆ ಶುಕ್ರವಾರ ಸಲಹೆ ನೀಡಿದೆ.ವೈಯಕ್ತಿಕ ಸುರಕ್ಷತೆಯ ಬಗ್ಗೆ ಗಮನಹರಿಸಿ ಮತ್ತು ಸಾಮಾಜಿಕ ಜಾಲತಾಣವನ್ನು ಜವಾಬ್ದಾರಿಯುತವಾಗಿ ಬಳಸಿ ಎಂದು ವಿ.ವಿಯ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ.ಜೆಎನ್ಯುಗೆ ಸಂಬಂಧಿಸಿದ ಎಲ್ಲ ‘ಜ್ಞಾನವಂತ ಸಮುದಾಯ’ವು ಜವಾಬ್ದಾರಿಯುತರಾಗಿ ವರ್ತಿಸಬೇಕು ಮತ್ತು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಪ್ರತಿಭಟನಾ ಸ್ಥಳಗಳಿಗೆ ತೆರಳಬಾರದು ಎಂದು ಸೂಚನೆ ನೀಡಲಾಗಿದೆ.ಸಾಮಾಜಿಕ ಜಾಲತಾಣದ ಬಳಕೆಯ ವೇಳೆ ನಿಯಮಗಳ ಉಲ್ಲಂಘನೆ ಮಾಡಿದರೆ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಮತ್ತು ವಿ.ವಿಯ ನೀತಿ ಸಂಹಿತೆಯ ಅಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
Read the complete story at Prajavani