ಪ್ರತಿಪಕ್ಷಗಳ ಪ್ರತಿಭಟನೆ ತೀವ್ರ: ರಾಜ್ಯಸಭಾ ಕಲಾಪ ಸೋಮವಾರಕ್ಕೆ ಮುಂದೂಡಿಕೆ
ನವದೆಹಲಿ: ವಿವಿಧ ವಿಷಯಗಳ ಕುರಿತಂತೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಪ್ರತಿಪಕ್ಷಗಳು ನಿರಂತರವಾಗಿ ಪ್ರತಿಭಟನೆ ನಡೆಸಿದ್ದರಿಂದ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.ರಾಜ್ಯಸಭೆಯ ಜೊತೆಗೆ ಲೋಕಸಭಾ ಕಲಾಪದಲ್ಲೂ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟನೆ ನಡೆಸಿದ್ದರಿಂದ ಲೋಕಸಭಾ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.ನೀಟ್ ಪ

ನವದೆಹಲಿ: ವಿವಿಧ ವಿಷಯಗಳ ಕುರಿತಂತೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಪ್ರತಿಪಕ್ಷಗಳು ನಿರಂತರವಾಗಿ ಪ್ರತಿಭಟನೆ ನಡೆಸಿದ್ದರಿಂದ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.ರಾಜ್ಯಸಭೆಯ ಜೊತೆಗೆ ಲೋಕಸಭಾ ಕಲಾಪದಲ್ಲೂ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟನೆ ನಡೆಸಿದ್ದರಿಂದ ಲೋಕಸಭಾ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಷಯದ ಕುರಿತಂತೆ ಚರ್ಚೆ ನಡೆಯಬೇಕು. ಒಂದುವೇಳೆ, ಈ ಗಂಭೀರ ವಿಷಯದ ಕುರಿತು ಚರ್ಚೆ ನಡೆಯದೆ ಸದನ ಕೇವಲ ಗಲಭೆಯಲ್ಲೇ ಮುಗಿದರೆ, ದೇಶದ ಜನರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ಸರ್ಕಾರ ಹೇಳಿದೆ.ಶುಕ್ರವಾರ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷದ ನಾಯಕರು ಶಿಕ್ಷಣ ಸಚಿನ ಧರ್ಮೇಂದ್ರ ಪ್ರದಾನ್ ಅವರ ರಾಜೀನಾಮೆಗೆ ಬಿಗಿಪಟ್ಟು ಹಿಡಿದಿದ್ದರು. ಪರಿಣಾಮ ಕಲಾಪವನ್ನು ಮುಂದೂಡಲಾಗಿತ್ತು. ಬಳಿಕ ಮಧ್ಯಾಹ್ನ 12 ಗಂಟೆಗೆ ಕಲಾಪ ಪುನಃ ಆರಂಭವಾದಾಗ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಪ್ರಶ್ನೆ ಪತ್ರಿಕೆ ಸೋರಿಕೆಯ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಯುವಂತೆ ಸರ್ಕಾರ ಪದೇ ಪದೇ ವಿರೋಧ ಪಕ್ಷಗಳನ್ನು ಸಂಪರ್ಕಿಸಿದೆ ಎಂದು ಹೇಳಿದ್ದಾರೆ.ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಚರ್ಚೆ ನಡೆಯಬೇಕು ಎಂದು ವಿಪಕ್ಷದ ಅನೇಕ ಸಂಸದರು ಅಭಿಪ್ರಾಯಪಟ್ಟಿದ್ದಾರೆ. ಆದರೆ, ರಾಹುಲ್ ಗಾಂಧಿ ಮತ್ತು ಅವರ ಪಕ್ಷದ ಸದಸ್ಯರು ಇದರ ಮಹತ್ವವನ್ನು ಅರ್ಥಮಾಡಿಕೊಂಡು ಚರ್ಚೆಗೆ ಅವಕಾಶ ನೀಡಬೇಕು ಎಂದಿದ್ದಾರೆ.ಚರ್ಚೆ ಆಗುವುದಕ್ಕೂ ಮೊದಲು ನೆಪ ಹೇಳುವುದು, ಪೂರ್ವ ಷರತ್ತುಗಳನ್ನು ವಿಧಿಸುವುದರಿಂದ ದೇಶದ ಜನರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ರಿಜಿಜು ತಿಳಿಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಠಿಣ ಕಾನೂನು ಜಾರಿಗೆ ತರುವ ಮತ್ತು ಆರೋಪಿಗಳ ವಿಚಾರಣೆಯನ್ನು ತ್ವರಿತ ನ್ಯಾಯಾಲಯಗಳಲ್ಲಿ ನಡೆಸುವ ಭರವಸೆ ನೀಡಿದ್ದಾರೆ. ಜೊತೆಗೆ ಸೋನಮ್ ವಾಂಗ್ಚುಕ್ ಅವರು ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ ಎಂದು ಸದನದಲ್ಲಿ ಗಮನಸೆಳೆದರು. ರಿಜಿಜು ಮಾತುಕತೆಯ ನಂತರವೂ ಕಾಂಗ್ರೆಸ್ ಮತ್ತು ಇತರೆ ವಿರೋಧ ಪಕ್ಷದ ಸದಸ್ಯರು ಪ್ರಧಾನ್ ರಾಜೀನಾಮೆಗೆ ಒತ್ತಾಯಿಸುತ್ತಲೇ ಇದ್ದರು. ಅಂತಿಮವಾಗಿ ರಾಹುಲ್ ಗಾಂಧಿ ಮಾತನಾಡಲು ಬಯಸಿದಾಗ, ಸದನದ ಅಧ್ಯಕ್ಷತೆ ವಹಿಸಿದ್ದ ಜಗದಾಂಬಿಕಾ ಪಾಲ್, ಸಚಿವರು ಸಂಸದೀಯ ದಾಖಲೆಗಳನ್ನು ಮಂಡಿಸಿದ ನಂತರ ರಾಹುಲ್ ಗಾಂಧಿ ಅವರಿಗೆ ಮಾತನಾಡಲು ಅವಕಾಶ ನೀಡುವುದಾಗಿ ಹೇಳಿ, ಸದನವನ್ನು ಸೋಮವಾರದವರೆಗೆ ಮುಂದೂಡಿದರು.