ತುಮಕೂರು: ಮಾಜಿ ಸಚಿವ ಸಿ.ವೀರಣ್ಣ ನಿಧನ
ತುಮಕೂರು: ವಾಲ್ಮೀಕಿ ಸಮಾಜದ ಪ್ರಭಾವಿ ನಾಯಕ, ಮಾಜಿ ಸಚಿವ ಸಿ.ವೀರಣ್ಣ (86) ಅವರು ಕೊರಟಗೆರೆ ತಾಲ್ಲೂಕಿನ ಬುಕ್ಕಾಪಟ್ಟಣದಲ್ಲಿರುವ ತೋಟದ ಮನೆಯಲ್ಲಿ ಶುಕ್ರವಾರ ರಾತ್ರಿ ನಿಧನರಾದರು. ಅನಾರೋಗ್ಯದ ಕಾರಣ ಕಳೆದ ತಿಂಗಳು ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದರು. ಜನತಾ ಪಕ್ಷದಿಂದ ವ

ತುಮಕೂರು: ವಾಲ್ಮೀಕಿ ಸಮಾಜದ ಪ್ರಭಾವಿ ನಾಯಕ, ಮಾಜಿ ಸಚಿವ ಸಿ.ವೀರಣ್ಣ (86) ಅವರು ಕೊರಟಗೆರೆ ತಾಲ್ಲೂಕಿನ ಬುಕ್ಕಾಪಟ್ಟಣದಲ್ಲಿರುವ ತೋಟದ ಮನೆಯಲ್ಲಿ ಶುಕ್ರವಾರ ರಾತ್ರಿ ನಿಧನರಾದರು. ಅನಾರೋಗ್ಯದ ಕಾರಣ ಕಳೆದ ತಿಂಗಳು ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದರು. ಜನತಾ ಪಕ್ಷದಿಂದ ವಿಧಾನಸಭೆ ಪ್ರವೇಶಿಸಿದ್ದ ಸಿ.ವೀರಣ್ಣ ಅವರು 1983ರಲ್ಲಿ ಡೆಪ್ಯುಟಿ ಸ್ಪೀಕರ್ ಆಗಿದ್ದರು. ರಾಮಕೃಷ್ಣ ಹೆಗಡೆ, ಎಸ್.ಆರ್.ಬೊಮ್ಮಾಯಿ ಅವರ ಸಂಪುಟದಲ್ಲಿ ಸಚಿವರಾಗಿದ್ದರು. ಸಾರಿಗೆ, ಸಣ್ಣ ಉಳಿತಾಯ, ಕೈಗಾರಿಕೆ ಹಾಗೂ ವಾಣಿಜ್ಯ ಸೇರಿ ವಿವಿಧ ಖಾತೆಗಳನ್ನು ನಿರ್ವಹಿಸಿದ್ದರು. ಸಣ್ಣ ಉಳಿತಾಯ ಖಾತೆ ಸಚಿವರಾಗಿದ್ದ ಸಂದರ್ಭದಲ್ಲಿ ಇಲಾಖೆಗೆ ಹೊಸ ಸ್ಪರ್ಶ ನೀಡಿ, ರಾಷ್ಟ್ರಮಟ್ಟದಲ್ಲಿ ಛಾಪು ಮೂಡಿಸಿದ್ದರು. ಜನರಿಗೆ ಉಳಿತಾಯದ ಬಗ್ಗೆ ಜಾಗೃತಿ ಮೂಡಿಸುವ ಹಲವು ಕಾರ್ಯಕ್ರಮಗಳನ್ನು ರೂಪಿಸಿದ್ದರು. ಇದರಿಂದಾಗಿ, ಅವರ ಅವಧಿಯಲ್ಲಿ ರಾಜ್ಯವು ಸಣ್ಣ ಉಳಿತಾಯ ಸಂಗ್ರಹಣೆಯಲ್ಲಿ ದೇಶದಲ್ಲೇ ಮೊದಲ ಸ್ಥಾನಗಳಿಸಿತ್ತು. ಕೊರಟಗೆರೆ ಅಭಿವೃದ್ಧಿಗಾಗಿ ಶಾಶ್ವತ ಕಾಮಗಾರಿಗಳನ್ನು ಮಾಡಿದ್ದರು. ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಇವರ ಅಳಿಯ. ಸಿ.ವೀರಣ್ಣ ಅವರಿಗೆ ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ಶನಿವಾರ ಸಂಜೆ 4 ಗಂಟೆಗೆ ಬುಕ್ಕಾಪಟ್ಟಣದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.