ಲಾಲ್ಬಾಗ್: ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಹಿಂಬಾಲಿಸಿ ಮಚ್ಚಿನಿಂದ ಹಲ್ಲೆ
ಮಂಗಳೂರು: ನಗರದ ಲಾಲ್ಬಾಗ್ ಸಿಗ್ನಲ್ ಬಳಿ ಬೈಕಿನಲ್ಲಿ ಸಾಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಇನ್ನೊಂದು ಬೈಕಿನಲ್ಲಿ ಹಿಂಬಾಲಿಸಿದ ವ್ಯಕ್ತಿ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.ಹಲ್ಲೆಗೊಳಗಾದ ವ್ಯಕ್ತಿಯನ್ನು ವಿಕ್ಕಿ ಬಪ್ಪಾಲ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸಂತ್ರಸ್ತ ವ್ಯಕ್ತಿ ಮಧ್ಯಾಹ್ನ ಸುಮಾರು 1.45 ಕ್ಕೆ ಬೈಕ್ನಲ್ಲಿ ಹೋಗುತ್ತಿದ್

ಮಂಗಳೂರು: ನಗರದ ಲಾಲ್ಬಾಗ್ ಸಿಗ್ನಲ್ ಬಳಿ ಬೈಕಿನಲ್ಲಿ ಸಾಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಇನ್ನೊಂದು ಬೈಕಿನಲ್ಲಿ ಹಿಂಬಾಲಿಸಿದ ವ್ಯಕ್ತಿ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.ಹಲ್ಲೆಗೊಳಗಾದ ವ್ಯಕ್ತಿಯನ್ನು ವಿಕ್ಕಿ ಬಪ್ಪಾಲ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸಂತ್ರಸ್ತ ವ್ಯಕ್ತಿ ಮಧ್ಯಾಹ್ನ ಸುಮಾರು 1.45 ಕ್ಕೆ ಬೈಕ್ನಲ್ಲಿ ಹೋಗುತ್ತಿದ್ದರು. ಅವರನ್ನು ಬೈಕಿನಲ್ಲಿ ಹಿಂಬಾಲಿಸಿದ್ದ ವ್ಯಕ್ತಿ ಮಚ್ಚಿನಿಂದ ದಾಳಿ ನಡೆಸಿ ಪರಾರಿಯಾಗಿದ್ದಾನೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಕುತ್ತಿಗೆಯ ಬಳಿ ಆಳವಾದ ಗಾಯವಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.ಅರೋಪಿಯ ಪತ್ತೆಗೆ ಕ್ರಮ ವಹಿಸಲಾಗಿದೆ. ಚೆಕ್ಪೋಸ್ಟ್ಗಳ ಸಿಬ್ಬಂದಿಯನ್ನು ಜಾಗೃತಗೊಳಿಸಲಾಗಿದೆ. ಆರೋಪಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹಲ್ಲೆಗೊಳಗಾದ ವ್ಯಕ್ತಿಯು ರೌಡಿ ಶೀಟರ್ ಆಗಿದ್ದು, ಮಾದಕ ಪದಾರ್ಥಗಳ ಮಾರಾಟ ಪ್ರಕರಣದಲ್ಲೂ ಆರೋಪಿಯಾಗಿದ್ದ. ಆತನ ಚಲನವಲನಗಳ ಮೇಲೂ ನಿಗಾ ಇಡಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.