ವಿದ್ಯುತ್ ತೆಗೆದುಕೊಳ್ಳುವ ವಿಚಾರಕ್ಕೆ ಗಲಾಟೆ – ಮಂಡ್ಯದಲ್ಲಿ ಹರಿಯಿತು ನೆತ್ತರು
ಮಂಡ್ಯ: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ (Mandya) ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಗುಳಘಟ್ಟ ಗ್ರಾಮದಲ್ಲಿ ನಡೆದಿದೆ. ರುದ್ರೇಗೌಡ ಕೊಲೆಯಾದ ವ್ಯಕ್ತಿ. ಕಳೆದ ರಾತ್ರಿ ಕೃತ್ಯ ನಡೆದಿದ್ದು, ಹತ್ಯೆ ಮಾಡಿದ ಬಳಿಕ ದುಷ್ಕರ್ಮಿ ಮೃತದೇಹದ ಮೇಲೆ ಸ್ಕೂಟಿ ಎತ್ತಿಹಾಕಿದ್ದಾನೆ ಎಂದು ತಿಳಿದುಬಂದಿದೆ. ಕಾರಣ ಏನು? ಟಾನ್ಸ್ಫ

ಮಂಡ್ಯ: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ (Mandya) ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಗುಳಘಟ್ಟ ಗ್ರಾಮದಲ್ಲಿ ನಡೆದಿದೆ. ರುದ್ರೇಗೌಡ ಕೊಲೆಯಾದ ವ್ಯಕ್ತಿ. ಕಳೆದ ರಾತ್ರಿ ಕೃತ್ಯ ನಡೆದಿದ್ದು, ಹತ್ಯೆ ಮಾಡಿದ ಬಳಿಕ ದುಷ್ಕರ್ಮಿ ಮೃತದೇಹದ ಮೇಲೆ ಸ್ಕೂಟಿ ಎತ್ತಿಹಾಕಿದ್ದಾನೆ ಎಂದು ತಿಳಿದುಬಂದಿದೆ. ಕಾರಣ ಏನು? ಟಾನ್ಸ್ಫಾರ್ಮರ್ನಿಂದ ವಿದ್ಯುತ್ ತೆಗೆದುಕೊಳ್ಳುತ್ತಿದ್ದ ವಿಚಾರಕ್ಕೆ ರುದ್ರೇಗೌಡನ ಮತ್ತು ಪಕ್ಕದ ಜಮೀನಿನ ಮಾಲೀಕನ ಜೊತೆ ಗಲಾಟೆ ಶುರುವಾಗಿದೆ. ಇದೇ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Read the complete story at Public TV Kannada