ಪ್ರವಾಹ: ಅಸ್ಸಾಂ ಮುಖ್ಯಮಂತ್ರಿ ಜೊತೆ ಪ್ರಧಾನಿ ಚರ್ಚೆ
ಗುವಾಹಟಿ: ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಶನಿವಾರ ದೂರವಾಣಿ ಕರೆ ಮಾಡಿ, ಪ್ರವಾಹ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.‘ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯವಿರುವ ಎಲ್ಲ ಸಹಕಾರವನ್ನು ಅಸ್ಸಾಂ ಸರ್ಕಾರಕ್ಕೆ ಕೇಂದ್ರವು ನೀಡಲಿದೆ ಎಂಬ ಭರವಸೆಯನ್ನು ಪ್ರಧಾನಿ ನೀಡಿದ್ದಾರೆ’ ಎಂದು ಹಿಮಂತ್ ಬಿಸ್ವ

ಗುವಾಹಟಿ: ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಶನಿವಾರ ದೂರವಾಣಿ ಕರೆ ಮಾಡಿ, ಪ್ರವಾಹ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.‘ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯವಿರುವ ಎಲ್ಲ ಸಹಕಾರವನ್ನು ಅಸ್ಸಾಂ ಸರ್ಕಾರಕ್ಕೆ ಕೇಂದ್ರವು ನೀಡಲಿದೆ ಎಂಬ ಭರವಸೆಯನ್ನು ಪ್ರಧಾನಿ ನೀಡಿದ್ದಾರೆ’ ಎಂದು ಹಿಮಂತ್ ಬಿಸ್ವಾ ಶರ್ಮಾ ಅವರು ತಮ್ಮ ‘ಎಕ್ಸ್’ ಪೋಸ್ಟ್ನಲ್ಲಿ ತಿಳಿಸಿದ್ದಾರೆ.‘ಪ್ರವಾಹದಿಂದ ಆದ ಜೀವಹಾನಿ ಮತ್ತು ಆಸ್ತಿಪಾಸ್ತಿ ಹಾನಿ ಬಗ್ಗೆ ಕಳವಳ ವ್ಯಕ್ತಪಡಿಸಿದ ಪ್ರಧಾನಿ, ಪರಿಹಾರ ಕಾರ್ಯಗಳ ಬಗ್ಗೆ ವಿಚಾರಿಸಿದರು. ಸಂಕಷ್ಟಕ್ಕೆ ಸಿಲುಕಿರುವ ಪ್ರತಿಯೊಂದು ಕುಟುಂಬದ ನೆರವಿಗೆ ನಮ್ಮ ಸರ್ಕಾರ ಧಾವಿಸಿದೆ ಎಂದು ತಿಳಿಸಿದ್ದೇನೆ’ ಎಂದು ಹೇಳಿದ್ದಾರೆ.‘ಸಂಕಷ್ಟದ ಸಂದರ್ಭದಲ್ಲಿ ಅಸ್ಸಾಂ ಜನರ ಜೊತೆ ಕೇಂದ್ರ ಸರ್ಕಾರ ಇದೆ ಎಂದು ಪ್ರಧಾನಿ ಭರವಸೆ ನೀಡಿದ್ದಾರೆ’ ಎಂದು ಶರ್ಮಾ ತಿಳಿಸಿದ್ದಾರೆ.60ಕ್ಕೂ ಹೆಚ್ಚು ಸಾವು: ಅಸ್ಸಾಂನಲ್ಲಿ ಹಲವೆಡೆ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಶನಿವಾರ ಕೆಲ ಪ್ರದೇಶಗಳಲ್ಲಿ ನೀರಿನ ಪ್ರಮಾಣ ತಗ್ಗಿದೆ. ಶುಕ್ರವಾರದವರೆಗೆ 60ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 9 ಜಿಲ್ಲೆಗಳಲ್ಲಿ 7 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.