ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ನೇಮಕ
– ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ ಜೋಶಿಗೆ ಹೆಚ್ಚುವರಿ ಜವಾಬ್ದಾರಿ ನವದೆಹಲಿ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಉಂಟಾದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ (Dharmendra Pradhan) ರಾಜೀನಾಮೆ ನೀಡಿದ ನಂತರ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ. ಪ್

– ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ ಜೋಶಿಗೆ ಹೆಚ್ಚುವರಿ ಜವಾಬ್ದಾರಿ ನವದೆಹಲಿ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಉಂಟಾದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ (Dharmendra Pradhan) ರಾಜೀನಾಮೆ ನೀಡಿದ ನಂತರ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ. ಪ್ರಧಾನ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ ನಂತರ, ರಾಷ್ಟ್ರಪತಿಗಳ ಕಚೇರಿ ಇಂದು ಸಂಜೆ ಪ್ರಕಟಣೆಯಲ್ಲಿ ಜೋಶಿ ಅವರ ನೇಮಕಾತಿಯನ್ನು ದೃಢಪಡಿಸಿದೆ. ಇದನ್ನೂ ಓದಿ: ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – ಯುವಸಮೂಹಕ್ಕೆ ಅತಿದೊಡ್ಡ ಗೆಲುವು, ಮಂಡಿಯೂರಿದ ಕೇಂದ್ರ ಪ್ರಧಾನಿಗಳ ಶಿಫಾರಸಿನ ಮೇರೆಗೆ ಸಚಿವ ಪ್ರಲ್ಹಾದ್ ಜೋಷಿಯವರಿಗೆ ಶಿಕ್ಷಣ ಇಲಾಖೆಯ ಹೆಚ್ಚುವರಿ ಹೊಣೆ ನೀಡಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ. ಸದ್ಯ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಹಾಗೂ ನವೀಕರಿಸಬಹುದಾದ ಇಂಧನ ಖಾತೆಯನ್ನು ಜೋಶಿ ನಿರ್ವಹಣೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಸಿಜೆಪಿಯ 3 ಬೇಡಿಕೆಗಳಿಗೆ ಒಪ್ಪಿದ ಕೇಂದ್ರ – ದೆಹಲಿಯಲ್ಲಿ ನಡೆಯುತ್ತಿದ್ದ GenZ ಪ್ರತಿಭಟನೆ ಅಂತ್ಯ