ಪ್ರಧಾನಿ ಮೋದಿ ಭೂತಕಾಲ, ವಿದ್ಯಾರ್ಥಿಗಳು ಭಾರತದ ಭವಿಷ್ಯ: ರಾಹುಲ್ ಗಾಂಧಿ
ನವದೆಹಲಿ: ವಿದ್ಯಾರ್ಥಿಗಳು ಭಾರತದ ಭವಿಷ್ಯವಾಗಿದ್ದಾರೆ. ಪ್ರಧಾನಿ ಮೋದಿ ಅವರು ಭೂತಕಾಲವಾಗಿದ್ದು, ಅವರು ಎಂದಿಗೂ ಭವಿಷ್ಯತ್ತಿನೊಂದಿಗೆ ಹೋರಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶನಿವಾರ(ಜುಲೈ 25) ಹೇಳಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದ ವಿದ್ಯಾರ್ಥಿಗಳ ಗುಂಪನ್ನು ತಮ್ಮ ನಿವಾಸದ ಬಳಿ ಭೇಟಿ ಮಾ
ನವದೆಹಲಿ: ವಿದ್ಯಾರ್ಥಿಗಳು ಭಾರತದ ಭವಿಷ್ಯವಾಗಿದ್ದಾರೆ. ಪ್ರಧಾನಿ ಮೋದಿ ಅವರು ಭೂತಕಾಲವಾಗಿದ್ದು, ಅವರು ಎಂದಿಗೂ ಭವಿಷ್ಯತ್ತಿನೊಂದಿಗೆ ಹೋರಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶನಿವಾರ(ಜುಲೈ 25) ಹೇಳಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದ ವಿದ್ಯಾರ್ಥಿಗಳ ಗುಂಪನ್ನು ತಮ್ಮ ನಿವಾಸದ ಬಳಿ ಭೇಟಿ ಮಾಡಿದ ನಂತರ, ರಾಹುಲ್ ಗಾಂಧಿ ಅವರು ಪತ್ರಕರ್ತರೊಂದಿಗೆ ಮಾತನಾಡಿದ್ದಾರೆ. Narendra Modi is India’s past. The past can never fight the future. pic.twitter.com/DfDyiAZcBf— Rahul Gandhi (@RahulGandhi) July 25, 2026 ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸುತ್ತಿದ್ದಾರೆ. ಅದರೊಂದಿಗೆ ಯಾವುದೇ ರಾಜಿ ಇಲ್ಲ. ಬೇರೆ ಯಾವುದೇ ಆಮಿಷಗಳನ್ನು ಕೂಡ ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರಿಗೆ ಬೇರೆ ಖಾತೆಯನ್ನು ಕೊಡುವ ಬಗ್ಗೆ ಕೇಂದ್ರ ಸಂಪುಟದಲ್ಲಿ ಮಾತುಕತೆ ನಡೆಯುತ್ತಿರುವ ಕುರಿತು ಮಾಹಿತಿ ಬಂದಿದೆ. ಆದರೆ, ಇದರಿಂದ ಯಾವುದೇ ಉಪಯೋಗವಿಲ್ಲ ಎಂದು ಹೇಳಿದ್ದಾರೆ.