ನೀಟ್ ಹಗರಣ ವಿರೋಧಿಸಿ ತುರುವೇಕೆರೆಯಲ್ಲಿ ಮಾನವ ಸರಪಳಿ ನಿರ್ಮಾಣ
ತುರುವೇಕೆರೆ: ಸಿಜೆಪಿ ನೇತೃತ್ವದಲ್ಲಿ ನೀಟ್ ಹಗರಣ ಸಂಬಂಧ ನಡೆಯುತ್ತಿರುವ ವಿದ್ಯಾರ್ಥಿಗಳ ಹೋರಾಟಕ್ಕೆ ತಾಲ್ಲೂಕಿನ ವಿವಿಧ ಪ್ರಗತಿಪರ ಸಂಘಟನೆಗಳ ವತಿಯಿಂದ ಜುಲೈ 27ರಂದು ಪಟ್ಟಣದಲ್ಲಿ ಮಾನವ ಸರಪಳಿ ನಿರ್ಮಿಸಿ ನೈತಿಕ ಬೆಂಬಲ ನೀಡಲಾಗುವುದು ಎಂದು ಸಿಐಟಿಯು ಮುಖಂಡ ಸತೀಶ್, ಜಿಲ್ಲಾ ದಲಿತ ಸಂಘರ್ಷ ಸಮಿತಿಯ ಸಂಘಟನಾ ಸಂಚಾಲಕ ದಂಡಿನಶಿವರ ಕುಮಾರ್ ಶನಿವಾರ ತಿಳಿಸಿದರು.ಜಂತರ

ತುರುವೇಕೆರೆ: ಸಿಜೆಪಿ ನೇತೃತ್ವದಲ್ಲಿ ನೀಟ್ ಹಗರಣ ಸಂಬಂಧ ನಡೆಯುತ್ತಿರುವ ವಿದ್ಯಾರ್ಥಿಗಳ ಹೋರಾಟಕ್ಕೆ ತಾಲ್ಲೂಕಿನ ವಿವಿಧ ಪ್ರಗತಿಪರ ಸಂಘಟನೆಗಳ ವತಿಯಿಂದ ಜುಲೈ 27ರಂದು ಪಟ್ಟಣದಲ್ಲಿ ಮಾನವ ಸರಪಳಿ ನಿರ್ಮಿಸಿ ನೈತಿಕ ಬೆಂಬಲ ನೀಡಲಾಗುವುದು ಎಂದು ಸಿಐಟಿಯು ಮುಖಂಡ ಸತೀಶ್, ಜಿಲ್ಲಾ ದಲಿತ ಸಂಘರ್ಷ ಸಮಿತಿಯ ಸಂಘಟನಾ ಸಂಚಾಲಕ ದಂಡಿನಶಿವರ ಕುಮಾರ್ ಶನಿವಾರ ತಿಳಿಸಿದರು.ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ. ಶಿಕ್ಷಣ ಸಚಿವ ಧರ್ಮೇದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ. ಸಮಸ್ಯೆ ಉಲ್ಬಣವಾಗುವ ಮುನ್ನವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರೆ ಗೌರವ ಇರುತ್ತಿತ್ತು. ಸಮಸ್ಯೆಯ ಆರಂಭದಲ್ಲೇ ಪ್ರಧಾನಿ ಮೋದಿಯವರು ಶಿಕ್ಷಣ ಸಚಿವರ ರಾಜೀನಾಮೆ ಪಡೆದುಕೊಂಡಿದ್ದರೆ ಅವರ ಬಗ್ಗೆ ಗೌರವ ಹೆಚ್ಚುತ್ತಿತ್ತು ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.ರೈತಸಂಘದ ಅಧ್ಯಕ್ಷ ಶ್ರೀನಿವಾಸ್ಗೌಡ, ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಮಾರುತಿ, ಮುಖಂಡರಾದ ವಸಂತ್ ಕುಮಾರ್, ಗೋವಿಂದರಾಜು, ಫೋಟೋ ರವಿಕುಮಾರ್, ತಮ್ಮಯ್ಯ, ಕಿಟ್ಟಿ, ಪುಟ್ಟರಾಜು, ಗವಿರಂಗ ಹಾಜರಿದ್ದರು.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260726-17-1541040314