ಗದಗ | ದೇವಸ್ಥಾನ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಆರೋಪಿ ಅರೆಸ್ಟ್
– 1.25 ಲಕ್ಷ ಮೌಲ್ಯದ ಕಳುವಾದ ವಸ್ತುಗಳ ವಶ ಗದಗ: ಕಳೆದ ತಿಂಗಳು ಗದಗ (Gadag) ನಗರದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆದಿದ್ದ ಕಳ್ಳತನ (Temple Theft) ಪ್ರಕರಣವನ್ನು ಬೆಟಗೇರಿ ಬಡಾವಣೆ ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧ ಪೃಥ್ವಿರಾಜ್ ಬಿ.ಎ. ಎಂಬ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ತಿಂಗಳ 19ರಂದು ಮಹಾಲಕ್ಷ್ಮೀ ದೇವಸ್ಥಾನದಲ್ಲ

– 1.25 ಲಕ್ಷ ಮೌಲ್ಯದ ಕಳುವಾದ ವಸ್ತುಗಳ ವಶ ಗದಗ: ಕಳೆದ ತಿಂಗಳು ಗದಗ (Gadag) ನಗರದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆದಿದ್ದ ಕಳ್ಳತನ (Temple Theft) ಪ್ರಕರಣವನ್ನು ಬೆಟಗೇರಿ ಬಡಾವಣೆ ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧ ಪೃಥ್ವಿರಾಜ್ ಬಿ.ಎ. ಎಂಬ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ತಿಂಗಳ 19ರಂದು ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕಳ್ಳತನ ನಡೆದಿತ್ತು. ಆರೋಪಿ ದೇವಿಯ 5 ಗ್ರಾಂ ಬಂಗಾರದ ತಾಳಿ, 100 ಗ್ರಾಂ ಬೆಳ್ಳಿ ಕಿರೀಟ, 40 ಗ್ರಾಂ ತೂಕದ ಬೆಳ್ಳಿ ಹಸ್ತ ಸೇರಿದಂತೆ ಹಲವು ಪೂಜಾ ಸಾಮಗ್ರಿಗಳನ್ನು ಕಳವು ಮಾಡಿದ್ದ. ಘಟನೆ ಸಂಬಂಧ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ನೇತೃತ್ವದಲ್ಲಿ ಎರಡು ವಿಶೇಷ ತಂಡಗಳನ್ನು ರಚಿಸಿ ತನಿಖೆ ಆರಂಭಿಸಲಾಗಿತ್ತು.ಇದನ್ನೂ ಓದಿ: ಬೆಳಗಾವಿಯಲ್ಲಿ SIR ಕೆಲಸದ ಒತ್ತಡಕ್ಕೆ ಶಿಕ್ಷಕ ಸಾವು ತನಿಖೆ ವೇಳೆ ಚನ್ನಪಟ್ಟಣದ ಬಳಿ ಆರೋಪಿ ಪೃಥ್ವಿರಾಜ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತನಿಂದ ಬೆಳ್ಳಿ ಕಿರೀಟ, ಬೆಳ್ಳಿ ಹಸ್ತ, ಬಂಗಾರದ ತಾಳಿ ಸೇರಿದಂತೆ ಒಟ್ಟು 1.25 ರೂ. ಲಕ್ಷ ಮೌಲ್ಯದ ಕಳುವಾದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಚಾರಣೆ ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಎಸ್ಪಿ ರೋಹನ್ ಜಗದೀಶ್ ಅವರು ಅಭಿನಂದಿಸಿ, ಸೂಕ್ತ ಬಹುಮಾನ ನೀಡಿ ಗೌರವಿಸಿದ್ದಾರೆ.ಇದನ್ನೂ ಓದಿ: ಕೊಡಗಿನಲ್ಲಿ ಕೋವಿಡ್ ಎಚ್ಚರಿಕೆ: ಜಿಲ್ಲಾ ಆಸ್ಪತ್ರೆಯಲ್ಲಿ 40 ಹಾಸಿಗೆ ಮೀಸಲು