ವಾಂಗ್ಚೂಕ್ ಇಂದು ಮನೆಗೆ
ನವದೆಹಲಿ: ಹೋರಾಟಗಾರ ಸೊನಮ್ ವಾಂಗ್ಚೂಕ್ ಅವರು ಸೋಮವಾರ ಮೇಂದಾಂತ ಆಸ್ಪತ್ರೆಯಿಂದ ಮನೆಗೆ ತೆರಳಲಿದ್ದಾರೆ.ಲಡಾಖ್ಗೆ ಮರಳುವ ಮುನ್ನ ಅವರು ರಾಜ್ಘಾಟ್ಗೆ ಭೇಟಿ ನೀಡಿ ಮಹಾತ್ಮ ಗಾಂಧಿ ಅವರಿಗೆ ಗೌರವ ಸಲ್ಲಿಸಲಿದ್ದಾರೆ.ಪ್ರಸ್ತುತ ವಾಂಗ್ಚೂಕ್ ಅವರು ಗುರುಗ್ರಾಮದಲ್ಲಿರುವ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು, ಶುಕ್ರವಾರ ರಾತ್ರಿ ತಮ್ಮ 26 ದಿನಗಳ ಉಪವಾಸ ಸತ್ಯಾಗ್ರಹವ

ನವದೆಹಲಿ: ಹೋರಾಟಗಾರ ಸೊನಮ್ ವಾಂಗ್ಚೂಕ್ ಅವರು ಸೋಮವಾರ ಮೇಂದಾಂತ ಆಸ್ಪತ್ರೆಯಿಂದ ಮನೆಗೆ ತೆರಳಲಿದ್ದಾರೆ.ಲಡಾಖ್ಗೆ ಮರಳುವ ಮುನ್ನ ಅವರು ರಾಜ್ಘಾಟ್ಗೆ ಭೇಟಿ ನೀಡಿ ಮಹಾತ್ಮ ಗಾಂಧಿ ಅವರಿಗೆ ಗೌರವ ಸಲ್ಲಿಸಲಿದ್ದಾರೆ.ಪ್ರಸ್ತುತ ವಾಂಗ್ಚೂಕ್ ಅವರು ಗುರುಗ್ರಾಮದಲ್ಲಿರುವ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು, ಶುಕ್ರವಾರ ರಾತ್ರಿ ತಮ್ಮ 26 ದಿನಗಳ ಉಪವಾಸ ಸತ್ಯಾಗ್ರಹವನ್ನು ನಿಲ್ಲಿಸಿದ್ದರು.ಸೋಮವಾರ ಬೆಳಿಗ್ಗೆ 11.30ಕ್ಕೆ ಆಸ್ಪತ್ರೆಯಿಂದ ಅವರು ಹೊರಡುವ ನಿರೀಕ್ಷೆಯಿದ್ದು, ನಂತರ ರಾಜ್ಘಾಟ್ಗೆ ಭೇಟಿ ನೀಡಲಿದ್ದಾರೆ. ಸತ್ಯಾಗ್ರಹ ಆರಂಭಕ್ಕೂ ಮುನ್ನ ಕೂಡಾ ಅವರು ರಾಜ್ಘಾಟ್ಗೆ ತೆರಳಿ ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದ್ದರು.ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ವಿರೋಧಿಸಿ ಇಲ್ಲಿನ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಬೆಂಬಲಿಸಿ ಅವರು ಜೂನ್ 28ರಂದು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.
Read the complete story at Prajavani