ಸಂಶಯಾಸ್ಪದ ರೀತಿಯಲ್ಲಿ ಕಾಡಾನೆ ಸಾವು – ಅಮ್ಮನ ಬಳಿ ನಿಂತು ಮರಿ ಆನೆ ರೋಧನೆ
– ಕರುಳು ಹಿಂಡುವ ದೃಶ್ಯ ಕ್ಯಾಮೆರಾದಲ್ಲಿ ಸೆರೆ ಮಡಿಕೇರಿ: ಕೊಡಗು ಜಿಲ್ಲೆಯ (Kodagu District) ವಿರಾಜಪೇಟೆ ತಾಲೂಕಿನ ಆನಂದಪುರ ಸಮೀಪದ ಕೌರಿಕಾಡು ಎಸ್ಟೇಟ್ ಕಾಫಿ ತೋಟದ ಮಧ್ಯೆ ಸಂಶಯಾಸ್ಪದ ರೀತಿಯಲ್ಲಿ ಹೆಣ್ಣು ಕಾಡಾನೆ ಮೃತಪಟ್ಟಿರುವ ಘಟನೆ ನಡೆದಿದೆ. ಸಂಶಯಾಸ್ಪದ ರೀತಿಯಲ್ಲಿ ಕಾಡಾನೆ ಸಾವು – ಅಮ್ಮನ ಬಳಿ ನಿಂತು ಮರಿ ಆನೆ ರೋಧನೆ | ಕರುಳು ಹಿಂಡುವ ದೃಶ್ಯ ಕ್ಯಾಮೆರಾದ

– ಕರುಳು ಹಿಂಡುವ ದೃಶ್ಯ ಕ್ಯಾಮೆರಾದಲ್ಲಿ ಸೆರೆ ಮಡಿಕೇರಿ: ಕೊಡಗು ಜಿಲ್ಲೆಯ (Kodagu District) ವಿರಾಜಪೇಟೆ ತಾಲೂಕಿನ ಆನಂದಪುರ ಸಮೀಪದ ಕೌರಿಕಾಡು ಎಸ್ಟೇಟ್ ಕಾಫಿ ತೋಟದ ಮಧ್ಯೆ ಸಂಶಯಾಸ್ಪದ ರೀತಿಯಲ್ಲಿ ಹೆಣ್ಣು ಕಾಡಾನೆ ಮೃತಪಟ್ಟಿರುವ ಘಟನೆ ನಡೆದಿದೆ. ಸಂಶಯಾಸ್ಪದ ರೀತಿಯಲ್ಲಿ ಕಾಡಾನೆ ಸಾವು – ಅಮ್ಮನ ಬಳಿ ನಿಂತು ಮರಿ ಆನೆ ರೋಧನೆ | ಕರುಳು ಹಿಂಡುವ ದೃಶ್ಯ ಕ್ಯಾಮೆರಾದಲ್ಲಿ ಸೆರೆ https://t.co/RHNPzZoOkT#ForestDepartment #Kodagu #WildElephant #Madikeri pic.twitter.com/z4tiam9VDt — PublicTV (@publictvnews) July 26, 2026 ಮತ್ತೊಂದು ಕಡೆ ಮೃತಪಟ್ಟ ತಾಯಿ ಆನೆಯ ಬಳಿಯೇ ಮರಿ ಆನೆ ನಿಂತು ಚೀರಾಡುತ್ತಿರುವ ದೃಶ್ಯ ಕರುಳು ಹಿಂಡುವಂತಿದೆ. ಇದನ್ನೂ ಓದಿ: ಏಷ್ಯಾದ ಮೊದಲ ಜಲವಿದ್ಯುತ್ ಸ್ಥಾವರ ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತ ತಾಯಿಯನ್ನು ಕಳೆದುಕೊಂಡ ದುಃಖದಲ್ಲಿ ಮರಿ ಆನೆ ಮೂಕರೋಧನೆ ಅನುಭವಿಸಿದೆ. ಆನೆ ಮರಿಯ ಚೀರಾಟದ ಶದ್ಧ ಕೇಳಿ ಸ್ಥಳೀಯರು ಸ್ಥಳಕ್ಕೆ ಬಂದು ನೋಡಿದಾಗ ಹೆಣ್ಣಾನೆ ಸತ್ತು ಬಿದ್ದಿರುವುದು ಕಂಡುಬಂದಿದೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲೂ (Social Media) ಹರಿದಾಡುತ್ತಿದೆ. ಇದನ್ನೂ ಓದಿ: ಕೊಡಗಿನಲ್ಲಿ ಕಾರ್ಗಿಲ್ ವಿಜಯೋತ್ಸವ – ಅಮರ ಯೋಧರಿಗೆ ಪುಷ್ಪನಮನ ಸಲ್ಲಿಸಿದ ಮಾಜಿ ಸೈನಿಕರು ತಕ್ಷಣವೇ ಸ್ಥಳೀಯರು ಅರಣ್ಯ ಇಲಾಖೆಗೆ (Forest Department) ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆನೆಗೆ ಗುಂಡು ತಗುಲಿದೆಯೇ ಅಥವಾ ಅನಾರೋಗ್ಯದಿಂದ ಸಾವನ್ನಪ್ಪಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ಮರಣೋತ್ತರ ಪರೀಕ್ಷೆಯ ಬಳಿಕವಷ್ಟೇ ಆನೆಯ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.