ಪರೀಕ್ಷಾ ಸುಧಾರಣೆಗೆ ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ:ಮೋದಿ
ನವದೆಹಲಿ: ದೇಶದಲ್ಲಿ ಪರೀಕ್ಷಾ ವ್ಯವಸ್ಥೆಯಲ್ಲಿನ ಲೋಪಗಳನ್ನು ಸರಿಪಡಿಸುವ ಮತ್ತು ಸುಧಾರಣೆ ಮಾಡುವ ಉದ್ದೇಶದಿಂದ ಉದ್ಯಮಿ ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆಯೊಂದನ್ನು ರಚಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸೆಲ್ಪಿ ವಿಡಿಯೊ ಹಂಚಿಕೊಳ್ಳುವ ಮೂಲಕ ಈ ಮಾಹಿತಿ ನೀಡಿದ್ದಾರೆ. ಪರೀಕ್ಷೆಗಳನ್ನು ಸುಸ್ಥ
ನವದೆಹಲಿ: ದೇಶದಲ್ಲಿ ಪರೀಕ್ಷಾ ವ್ಯವಸ್ಥೆಯಲ್ಲಿನ ಲೋಪಗಳನ್ನು ಸರಿಪಡಿಸುವ ಮತ್ತು ಸುಧಾರಣೆ ಮಾಡುವ ಉದ್ದೇಶದಿಂದ ಉದ್ಯಮಿ ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆಯೊಂದನ್ನು ರಚಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸೆಲ್ಪಿ ವಿಡಿಯೊ ಹಂಚಿಕೊಳ್ಳುವ ಮೂಲಕ ಈ ಮಾಹಿತಿ ನೀಡಿದ್ದಾರೆ. ಪರೀಕ್ಷೆಗಳನ್ನು ಸುಸ್ಥಿತ ಹಾಗೂ ಪಾರದರ್ಶಕವಾಗಿಸಲು ತಂತ್ರಜ್ಞಾನದ ಗರಿಷ್ಠ ಬಳಕೆಯ ಕುರಿತು ನಿಲೇಕಣಿ ನೇತೃತ್ವದ ಕಾರ್ಯಪಡೆಯು ಸಲಹೆಗಳನ್ನು ನೀಡಲಿದೆ. ಅದರ ಆಧಾರದಲ್ಲಿ ಸರ್ಕಾರವು ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.HIGH POWERED TASK FORCE on examination reforms under the leadership of Shri Nandan Nilekani constituted.@NandanNilekani pic.twitter.com/mMpmPdIEL5— Narendra Modi (@narendramodi) July 26, 2026 ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ ಮತ್ತು ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬಳಿಕ ಇದೀಗ ಉನ್ನತ ಮಟ್ಟದ ಕಾರ್ಯಪಡೆಯೊಂದನ್ನು ರಚಿಸಲಾಗಿದೆ.