ಶಿವಮೊಗ್ಗ | ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ ನಿಧನ
ಶಿವಮೊಗ್ಗ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ (78) ನಿಧನರಾಗಿದ್ದಾರೆ. ಕಳೆದ ಎರಡು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಚಂದ್ರಶೇಖರಪ್ಪ (H.M.Chandrashekarappa) ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ SIR

ಶಿವಮೊಗ್ಗ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ (78) ನಿಧನರಾಗಿದ್ದಾರೆ. ಕಳೆದ ಎರಡು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಚಂದ್ರಶೇಖರಪ್ಪ (H.M.Chandrashekarappa) ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ SIR ಕೆಲಸದ ಒತ್ತಡಕ್ಕೆ ಶಿಕ್ಷಕ ಸಾವು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಇಂದು ಸಂಜೆ ನಿಧನರಾಗಿದ್ದಾರೆ. ಮಾಜಿ ಶಾಸಕ ಪಾರ್ಥಿವ ಶರೀರ ಸದ್ಯ ಆಸ್ಪತ್ರೆಯಲ್ಲಿದ್ದು, ರಾತ್ರಿ ವೇಳೆಗೆ ಶಿವಮೊಗ್ಗಕ್ಕೆ ಕುಟುಂಬಸ್ಥರು ತರಲಿದ್ದಾರೆ. ನಾಳೆ ಸಂಜೆ ವೇಳೆಗೆ ಅಂತ್ಯಸಂಸ್ಕಾರ ನಡೆಯುವ ಸಾಧ್ಯತೆ ಇದೆ. ಚಂದ್ರಶೇಖರಪ್ಪ ಅವರು 1999-2004 ರ ಅವಧಿಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾಗಿದ್ದರು. ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವಿರುದ್ಧ ಚುನಾವಣೆಯಲ್ಲಿ ಗೆದ್ದಿದ್ದರು. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಮುಖಂಡರಾಗಿದ್ದರು. ಇದನ್ನೂ ಓದಿ: ಗದಗ | ದೇವಸ್ಥಾನ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಆರೋಪಿ ಅರೆಸ್ಟ್ ಮಾಜಿ ಶಾಸಕರ ವೇದಿಕೆಯ ರಾಜ್ಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ವೀರಶೈವ-ಲಿಂಗಾಯತ ಮಹಾಸಭಾದ ಮಾಜಿ ರಾಜ್ಯ ಉಪಾಧ್ಯಕ್ಷರೂ ಆಗಿದ್ದರು. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ, ನಗರಸಭೆ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. ಚಂದ್ರಶೇಖರಪ್ಪ ಅವರ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ಸಂತಾಪ ಸೂಚಿಸಿದೆ.