ಚುನಾವಣೆಗೆ ಸ್ಪರ್ಧೆ: ವಯೋಮಿತಿ ಇಳಿಕೆಗೆ ಆಗ್ರಹ
ಹೈದರಾಬಾದ್: ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸಲು ಕನಿಷ್ಠ ವಯಸ್ಸನ್ನು 21ವರ್ಷಕ್ಕೆ ಇಳಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸುವ ನಿರ್ಣಯವನ್ನು ಅಂಗೀಕರಿಸಲು ತೆಲಂಗಾಣ ಸರ್ಕಾರ ಶೀಘ್ರವೇ ವಿಧಾನಸಭೆ ವಿಶೇಷ ಅಧಿವೇಶನ ನಡೆಸಲಿದೆ. ಆಗಸ್ಟ್ ಮೊದಲ ವಾರದಲ್ಲಿ ಈ ವಿಶೇಷ ಅಧಿವೇಶನ ನಡೆಯಲಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಹ

ಹೈದರಾಬಾದ್: ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸಲು ಕನಿಷ್ಠ ವಯಸ್ಸನ್ನು 21ವರ್ಷಕ್ಕೆ ಇಳಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸುವ ನಿರ್ಣಯವನ್ನು ಅಂಗೀಕರಿಸಲು ತೆಲಂಗಾಣ ಸರ್ಕಾರ ಶೀಘ್ರವೇ ವಿಧಾನಸಭೆ ವಿಶೇಷ ಅಧಿವೇಶನ ನಡೆಸಲಿದೆ. ಆಗಸ್ಟ್ ಮೊದಲ ವಾರದಲ್ಲಿ ಈ ವಿಶೇಷ ಅಧಿವೇಶನ ನಡೆಯಲಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಹೇಳಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಆಯೋಜಿಸಿದ್ದ ಪಂಜಿನ ಮೆರವಣಿಗೆಯಲ್ಲಿ ರೆಡ್ಡಿ ಈ ಹೇಳಿಕೆ ನೀಡಿದ್ದಾರೆ.ಪ್ರಸಕ್ತ ಲೋಕಸಭಾ ಅಥವಾ ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸುವವರ ಕನಿಷ್ಠ ವಯಸ್ಸಿನ ಮಿತಿ 25 ಆಗಿದೆ.56 ಇಂಚಿನ ಎದೆಯವರನ್ನು (ಪ್ರಧಾನಿ ಮೋದಿ ಅವರನ್ನು ಉಲ್ಲೇಖಿಸಿ) ಜೆನ್–ಝೀಗಳು ಸೋಲಿಸಿದ್ದಾರೆ ಎಂದು ಪ್ರಶಂಸಿಸಿರುವ ರೇವಂತ್, ಇದೇ ವೇಳೆ ಲೋಕಸಭೆಯಲ್ಲಿ ಜೆನ್–ಝೀಗಳ ಪ್ರಾತಿನಿಧ್ಯವು ಶೇ1ಕ್ಕಿಂತಲೂ ಕಡಿಮೆ ಇದೆ ಎಂಬುದನ್ನು ಪ್ರಸ್ತಾಪಿಸಿದ್ದಾರೆ.ಜತೆಗೆ 21 ವರ್ಷಕ್ಕಿಂತ ಮೇಲ್ಪಟ್ಟ ಯುವಜನರು ಸಚಿವರಾದರೆ ದೇಶದ ಭವಿಷ್ಯ ಬದಲಾಗುತ್ತದೆ. ಇದಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ತಂದು, ಶಾಸಕ ಮತ್ತು ಸಂಸದ ಸ್ಥಾನಗಳಿಗೆ 21 ವರ್ಷ ಮೇಲ್ಪಟ್ಟವರು ಸ್ಪರ್ಧಿಸಲು ಅವಕಾಶ ನೀಡಬೇಕು ಎಂದಿದ್ದಾರೆ.ಜರ್ಮನಿ, ಬ್ರಿಟನ್ಗಳಲ್ಲಿ 18 ವರ್ಷದ ಯುವಕರು ಪ್ರಧಾನಿ–ರಾಷ್ಟ್ರಪತಿಗಳಾಗುವ ಅವಕಾಶ ಇದೆ. ಸಿಂಗಾಪುರದಲ್ಲಿ 21 ವರ್ಷದವರು ಪ್ರಧಾನಿ ಆಗಬಹುದು ಎಂದೂ ರೇವಂತ್ ಉದಾಹರಣೆ ನೀಡಿದ್ದಾರೆ.Cut-off box - null