ಮೋದಿ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಹಂಚಿಕೊಂಡವರ ವಿರುದ್ಧ ದೆಹಲಿ ಪೊಲೀಸರಿಂದ ಕ್ರಮ!
ನವದೆಹಲಿ: ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ನಾಯಕರನ್ನು ಗುರಿಯಾಗಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪಾರ್ಹ ಮತ್ತು ಅವಹೇಳನಕಾರಿ ಪೋಸ್ಟ್ಗಳನ್ನು ಹಂಚಿಕೊಂಡವರ ವಿರುದ್ಧ ದೆಹಲಿ ಪೊಲೀಸರು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಈ ಬಗ್ಗೆ ಮೂಲಗಳು ಭಾನುವಾರ ಮಾಹಿತಿ ನೀಡಿವೆ.ಸಾಮಾಜಿಕ ಮಾಧ್ಯಮ ಖ
ನವದೆಹಲಿ: ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ನಾಯಕರನ್ನು ಗುರಿಯಾಗಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪಾರ್ಹ ಮತ್ತು ಅವಹೇಳನಕಾರಿ ಪೋಸ್ಟ್ಗಳನ್ನು ಹಂಚಿಕೊಂಡವರ ವಿರುದ್ಧ ದೆಹಲಿ ಪೊಲೀಸರು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಈ ಬಗ್ಗೆ ಮೂಲಗಳು ಭಾನುವಾರ ಮಾಹಿತಿ ನೀಡಿವೆ.ಸಾಮಾಜಿಕ ಮಾಧ್ಯಮ ಖಾತೆ, ಪುಟಗಳಿಂದ ಅಂತಹ ಪೋಸ್ಟ್ಗಳು, ವಿಡಿಯೊ, ಕಾಮೆಂಟ್ಗಳನ್ನು ತೆಗೆದುಹಾಕುವಂತೆ ನೋಟಿಸ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.‘ಪ್ರತಿಭಟನೆ ವೇಳೆ ಹಾಗೂ ಆ ನಂತರ ಅಪ್ಲೋಡ್ ಆಗಿರುವ ಕಂಟೆಂಟ್ಗಳನ್ನು ಪರಿಶೀಲಿಸಿದ ನಂತರ, ಅವಹೇಳನಕಾರಿ ಪೋಸ್ಟ್ಗಳನ್ನು ತೆಗೆದುಹಾಕುವಂತೆ ಪೊಲೀಸರು ನೋಟಿಸ್ ನೀಡಲಿದ್ದಾರೆ’ ಎಂದು ಹೇಳಿದ್ದಾರೆ.‘ಸಾಮಾಜಿಕ ಮಾಧ್ಯಮದ ವಿವಿಧ ವೇದಿಕೆಗಳಲ್ಲಿರುವ ಅಂತಹ ಕಂಟೆಂಟ್ಗಳನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ. ಹಾಗೆಯೇ, ಅಂತಹ ಕಂಟೆಂಟ್ಗಳ ಹಿಂದೆ ಕಾನೂನು ಉಲ್ಲಂಘಿಸುವ ಅಥವಾ ಸಾರ್ವಜನಿಕ ಶಾಂತಿ ಕದಡುವ ಉದ್ದೇಶವೇನಾದರೂ ಇದೆಯೇ ಎಂಬುದನ್ನೂ ಪರಿಶೀಲಿಸಲಾಗುತ್ತಿದೆ’ ಎಂದು ಅವರು ತಿಳಿಸಿದ್ದಾರೆ.ಪ್ರತಿಭಟನೆಗೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಆಕ್ಷೇಪಾರ್ಹ ಕಂಟೆಂಟ್ಗಳನ್ನು ಗುರುತಿಸಲು ದೆಹಲಿ ಪೊಲೀಸರ ತಂಡ ದಿನವಿಡೀ ಕಾರ್ಯಪ್ರವೃತ್ತವಾಗಿದೆ ಎನ್ನಲಾಗಿದೆ.ವಿದ್ಯಾರ್ಥಿ ಹೋರಾಟಕ್ಕೆ ಮಣಿದು ಕೊನೆಗೂ ರಾಜೀನಾಮೆ ನೀಡಿದ ಪ್ರಧಾನ್ಜೆನ್–ಝೀಗಳನ್ನು ಬೆದರಿಸಲು ಭದ್ರತಾ ಸಿಬ್ಬಂದಿ ಬಳಸಿದ ಅಸ್ತ್ರಗಳಿವು..