ಎಫ್ಐಆರ್ ಹಿಂಪಡೆಯದಿದ್ದರೆ ಮತ್ತೆ ಪ್ರತಿಭಟನೆ: ಸಿಜೆಪಿ ಎಚ್ಚರಿಕೆ
ನವದೆಹಲಿ: ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಎಫ್ಐಆರ್ಗಳನ್ನು ಹಿಂಪಡೆಯದಿದ್ದರೆ ಮತ್ತೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸೋಮವಾರ ಎಚ್ಚರಿಸಿದೆ.ಇದರ ಬೆನ್ನಲ್ಲೇ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ನವದೆಹಲಿ ಹಾಗೂ ಮಧ್ಯ ದೆಹಲಿ ಜಿಲ್ಲೆಗಳಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿದೆ. ಈ ಕು

ನವದೆಹಲಿ: ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಎಫ್ಐಆರ್ಗಳನ್ನು ಹಿಂಪಡೆಯದಿದ್ದರೆ ಮತ್ತೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸೋಮವಾರ ಎಚ್ಚರಿಸಿದೆ.ಇದರ ಬೆನ್ನಲ್ಲೇ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ನವದೆಹಲಿ ಹಾಗೂ ಮಧ್ಯ ದೆಹಲಿ ಜಿಲ್ಲೆಗಳಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಸಿಜೆಪಿ ರಾಷ್ಟ್ರೀಯ ವಕ್ತಾರ ಆಶುತೋಷ್ ರಂಕಾ 'ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೊಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಭರವಸೆಯನ್ನು ಉಲ್ಲಂಘಿಸಲಾಗಿದೆ. ಬಿಹಾರ ಮತ್ತು ಬಂಗಾಳದಲ್ಲಿ ನೂರಾರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದ್ದು, ದೆಹಲಿ ಸೇರಿದಂತೆ ಇತರ ರಾಜ್ಯಗಳಲ್ಲಿ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಲಾಗುತ್ತಿದೆ. ಪ್ರತಿಭಟನಾಕಾರರಿಗೆ ಅಗತ್ಯ ನೆರವು ನೀಡುತ್ತಿದ್ದ ಸ್ವಯಂಸೇವಕರನ್ನೂ ದೆಹಲಿಯಲ್ಲಿ ವಶಕ್ಕೆ ಪಡೆಯಲಾಗುತ್ತಿದೆ' ಎಂದು ಆರೋಪಿಸಿದ್ದಾರೆ. 'ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್ಐಆರ್ಗಳನ್ನು ತಕ್ಷಣವೇ ಹಿಂಪಡೆಯಬೇಕು. ಬಂಧಿತ ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಬೇಕು. ತಪ್ಪಿದ್ದಲ್ಲಿ, ನಾವು ಮತ್ತೆ ಪ್ರತಿಭಟನೆಗೆ ಕುಳಿತುಕೊಳ್ಳಬೇಕಾಗುತ್ತದೆ' ಎಂದು ರಾಂಕಾ ಎಚ್ಚರಿಸಿದ್ದಾರೆ.ಇದೇ ವೇಳೆ ಸರ್ಕಾರದ ಲಿಖಿತ ಭರವಸೆಗಾಗಿ ಕಾಯುತ್ತಿರುವುದಾಗಿ ಸಿಜೆಪಿ ತಿಳಿಸಿದೆ. 'ಮಂಗಳವಾರದ ಒಳಗಾಗಿ ಲಿಖಿತ ಭರವಸೆ ನೀಡದೇ ಇದ್ದಲ್ಲಿ ಪ್ರತಿಭಟನೆಯನ್ನು ಪುನಃ ಆರಂಭಿಸಬೇಕಾಗುತ್ತದೆ’ ಎಂದು ಅವರು ಹೇಳಿದ್ದಾರೆ.VIDEO | New Delhi: Addressing a press conference, Cockroach Janta Party (CJP) spokesperson Ashutosh Ranka says, "During our third round of talks with JP Nadda ji and Jitendra Singh ji on July 25, it was agreed that all FIRs filed against protesters and organisers in connection… pic.twitter.com/StAq3PzGqz— Press Trust of India (@PTI_News) July 27, 2026 Dear @JPNadda @DrJitendraSingh ji,We are observing a complete breach of the agreement regarding no police action against the protestors. Hundreds of students have been arrested in Bihar and Bengal, and hundreds are being surveilled/harrassed in Delhi and other states. Multiple…— Ashutosh Ranka (@AshutoshRanka) July 27, 2026 ಸಂತೋಷ ಕೂಟದ ಬಗ್ಗೆ ಬಿಜೆಪಿ ಟೀಕೆ: ಆಂಟಿ, ಅಂಕಲ್ಗಳು ಹೀಗೇ ಎಂದ ಸಿಜೆಪಿಸಿಜೆಪಿ ಬೆನ್ನಲ್ಲೇ ಇ20 ಪೆಟ್ರೋಲ್ ವಿರೋಧಿ ಅಭಿಯಾನ: ಗಡ್ಕರಿ ರಾಜೀನಾಮೆಗೆ ಆಗ್ರಹ