ಕೃಷಿಯಲ್ಲಿ 2 ವರ್ಷದ ಡಿಪ್ಲೊಮಾ ಕೋರ್ಸ್ ಮಾಡುವ ಆಸಕ್ತಿಯಿದೆಯಾ, ಇಲ್ಲಿದೆ ಅವಕಾಶ
ಬೆಂಗಳೂರು: ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧೀನದಲ್ಲಿರುವ ಬ್ರಹ್ಮಾವರ ಕೃಷಿ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ 2 ವರ್ಷಗಳ ಡಿಪ್ಲೊಮಾ ಕೃಷಿ ಕೋರ್ಸ್ ನಲ್ಲಿ ಖಾಲಿ ಉಳಿದಿರುವ 31 ಸೀಟುಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಡಿಪ್ಲೊಮಾ (ಕೃಷಿ) ಯನ್ನು ಕನ್ನಡ ಮಾಧ್ಯಮದಲ್ಲಿ ಸೆಮಿಸ್ಟರ

ಬೆಂಗಳೂರು: ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧೀನದಲ್ಲಿರುವ ಬ್ರಹ್ಮಾವರ ಕೃಷಿ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ 2 ವರ್ಷಗಳ ಡಿಪ್ಲೊಮಾ ಕೃಷಿ ಕೋರ್ಸ್ ನಲ್ಲಿ ಖಾಲಿ ಉಳಿದಿರುವ 31 ಸೀಟುಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಡಿಪ್ಲೊಮಾ (ಕೃಷಿ) ಯನ್ನು ಕನ್ನಡ ಮಾಧ್ಯಮದಲ್ಲಿ ಸೆಮಿಸ್ಟರ್ (4 ಸೆಮಿಸ್ಟರ್) ಪದ್ಧತಿಯಲ್ಲಿ ಬೋಧಿಸಲಾಗುತ್ತದೆ.ಡಿಪ್ಲೊಮಾ (ಕೃಷಿ) ಕೋರ್ಸ್ ಗೆ ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆಯಾಗಿ ಅಭ್ಯಸಿಸಿ ಕನಿಷ್ಟ ಶೇ 45 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. (ಪ.ಜಾ./ಪ.ಪಂ./ಪ್ರವರ್ಗ-1ರವರುಗಳಿಗೆ ಕನಿಷ್ಠ ಶೇ 40 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು).2026ರ ಆಗಸ್ಟ್ 6 ರಂದು ಅಭ್ಯರ್ಥಿಗಳ ವಯಸ್ಸು 19 ವರ್ಷಗಳನ್ನು ಮೀರಿರಬಾರದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ 50 ರಷ್ಟು ಸೀಟುಗಳನ್ನು ಡಿಪ್ಲೊಮಾ (ಕೃಷಿ) ಪ್ರವೇಶಕ್ಕೆ ಮೀಸಲಿಡಲಾಗಿದೆ. ಅಧಿಸೂಚನೆ, ಅರ್ಜಿ ಹಾಗೂ ಮಾಹಿತಿ ಪುಸ್ತಕವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ವೆಬ್ ಸೈಟ್ : www.uahs.edu.in ನಲ್ಲಿ 2026ರ ಆಗಸ್ಟ್ 6 ರೊಳಗೆ ಡೌನ್ ಲೋಡ್ ಮಾಡಿಕೊಂಡು ಭರ್ತಿಮಾಡಿದ ಅರ್ಜಿಗಳನ್ನು ಮತ್ತು ಅರ್ಜಿಯ ನಿಗದಿತ ಶುಲ್ಕವನ್ನು ಡಿ.ಡಿ. ರೂಪದಲ್ಲಿ ಲಗತ್ತಿಸಿ, ಇದೇ ದಿನಾಂಕದೊಳಗೆ ಕಳುಹಿಸಿಕೊಡಬೇಕು. 2026ರ ಆಗಸ್ಟ್ 6ರಂದು ನಂತರ ಡಿಡಿಯನ್ನು ಪಡೆದು ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಸಾಮಾನ್ಯ ವರ್ಗದವರಿಗೆ ₹ 500, ಪ.ಜಾ./ಪ.ಪಂ./ಪ್ರವರ್ಗ-1ರವರಿಗೆ ₹ 250 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ರಾಷ್ಟ್ರೀಕೃತ ಬ್ಯಾಂಕ್ಗಳ ಡಿ.ಡಿ. ಯನ್ನು Comptroller, KSNUAHS, Shivamogga –577 412 ಇವರ ಹೆಸರಿನಲ್ಲಿ ಪಡೆದು ಎಲ್ಲಾ ಅಗತ್ಯ ಅಡಕಗಳೊಂದಿಗೆ ಭರ್ತಿಮಾಡಿದ ಅರ್ಜಿಗಳನ್ನು ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಇರುವಕ್ಕಿ ಆವರಣ- 577 412 ಇಲ್ಲಿಗೆ 2026 ಆಗಸ್ಟ್ 6 ರೊಳಗೆ ತಲುಪುವಂತೆ ಖುದ್ದಾಗಿ ಅಥವಾ ಅಂಚೆ ಮೂಲಕ ಕಳುಹಿಸಬಹುದು.ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕುಲಸಚಿವರು ತಿಳಿಸಿದ್ದಾರೆ.ಪ್ರವೇಶ ಮತ್ತು ಆಯ್ಕೆ ವಿಧಾನ: ಸರ್ಕಾರದ ಆದೇಶಗಳ ಅನ್ವಯ ಸೀಟುಗಳನ್ನು ಭರ್ತಿ ಮಾಡಲಾಗುವುದು. ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ರೋಸ್ಟರ್ ಪದ್ದತಿ ಅಳವಡಿಸಿ, ಪ್ರವೇಶಕ್ಕೆ ಆಯ್ಕೆ ಮಾಡಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪತ್ರ ಹಾಗೂ ವೆಬ್ಸೈಟ್ ಮುಖಾಂತರ ತಿಳಿಸಲಾಗುವುದು ಎಂದು ಕುಲಸಚಿವರುತಿಳಿಸಿದ್ದಾರೆ.