ನನಗೆ ಒಂದು ವಾರ ಕಾಲಾವಕಾಶ ಬೇಕು – ನೋಟಿಸ್ಗೆ ಉತ್ತರಿಸಲು ಸಮಯ ಕೇಳಿದ ಸಿ.ಟಿ ರವಿ
ಚಿಕ್ಕಮಗಳೂರು: ನೀಟ್ ಪರೀಕ್ಷೆಗೂ (NEET 2026) ಮುಲ್ಲಾಗಳಿಗೂ ಏನು ಸಂಬಂಧ? ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಎಂಎಲ್ಸಿ ಸಿ.ಟಿ ರವಿಯವರು (C.T Ravi) ಪೊಲೀಸರ ನೋಟಿಸ್ಗೆ ಉತ್ತರಿಸಲು ಒಂದು ವಾರ ಕಾಲಾವಕಾಶ ಕೇಳಿದ್ದಾರೆ. ಈ ಬಗ್ಗೆ ಪೊಲೀಸ್ ಇಲಾಖೆಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ 7 ವರ್ಷಕ್ಕಿಂತ ಕಡಿಮೆ ಶಿಕ್ಷೆಯ ಪ್ರಕರಣದಲ್ಲಿ ನೋಟಿಸ್ ಕಡ್ಡಾಯ. ಪೊಲೀಸರ ನೋ

ಚಿಕ್ಕಮಗಳೂರು: ನೀಟ್ ಪರೀಕ್ಷೆಗೂ (NEET 2026) ಮುಲ್ಲಾಗಳಿಗೂ ಏನು ಸಂಬಂಧ? ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಎಂಎಲ್ಸಿ ಸಿ.ಟಿ ರವಿಯವರು (C.T Ravi) ಪೊಲೀಸರ ನೋಟಿಸ್ಗೆ ಉತ್ತರಿಸಲು ಒಂದು ವಾರ ಕಾಲಾವಕಾಶ ಕೇಳಿದ್ದಾರೆ. ಈ ಬಗ್ಗೆ ಪೊಲೀಸ್ ಇಲಾಖೆಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ 7 ವರ್ಷಕ್ಕಿಂತ ಕಡಿಮೆ ಶಿಕ್ಷೆಯ ಪ್ರಕರಣದಲ್ಲಿ ನೋಟಿಸ್ ಕಡ್ಡಾಯ. ಪೊಲೀಸರ ನೋಟಿಸ್ಗೆ ಸಮಾಜಾಯಿಷಿ ನೀಡಲು 7 ದಿನಗಳ ಕಾಲಾವಕಾಶ ಇರುತ್ತಿತ್ತು. ಈಗ ಪೊಲೀಸರು ನೀಡಿರುವ ಸಮಯ ನಿಸ್ಸಂದೇಹವಾಗಿ ರಾಜಕೀಯ ಪ್ರೇರಿತವಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸಿ.ಟಿ ರವಿ ಮನೆ ಮುಂದೆ ಭಾರೀ ಹೈಡ್ರಾಮಾ – ಇನ್ಸ್ಪೆಕ್ಟರ್ ಅಂಟಿಸಿದ ನೋಟಿಸ್ ಕಿತ್ತೆಸೆದ ಬೆಂಬಲಿಗರು ನಾನು ಹಾಲಿ ಪರಿಷತ್ ಸದಸ್ಯ ಆಗಿರುವುದರಿಂದ ಪಕ್ಷದ ಬೇರೆ ಜವಾಬ್ದಾರಿಗಳಿವೆ. ರಾಯಚೂರು-ಕೊಪ್ಪಳ ಜಿಲ್ಲೆಗೆ ಬರ ಪರೀಶಿಲನೆಗೆ ತೆರಳಬೇಕಿದೆ. ಜು.29 ಹಾಗೂ 30ರಂದು ಪಕ್ಷದ ತುರ್ತು ಕೆಲಸಗಳಿಗೆ ತೆರಳಬೇಕಿದೆ. ಆನಂತರ ಕಾನೂನು ಸಲಹೆಗಾರರ ಸಲಹೆ ಪಡೆದು ಸಮಾಜಾಯಿಷಿ ನೀಡುತ್ತೇನೆ. ನನಗೆ ಸಮಾಜಾಯಿಷಿ ನೀಡಲು 7 ದಿನಗಳ ಕಾಲಾವಕಾಶಬೇಕು ಎಂದು ಪೊಲೀಸರ ಬಳಿ ಕೇಳಿದ್ದಾರೆ. ಜು.25 ರಂದು ಚಿಕ್ಕಮಗಳೂರಿನಲ್ಲಿ ನಡೆದ ಯೂತ್ ಫಾರ್ ನೇಷನ್ ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ್ದ ಆರೋಪದ ಮೇಲೆ ಅವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಸಂಬಂಧ ಜು.26 ರಂದು ಪೊಲೀಸರು ನೋಟಿಸ್ ಸಹ ನೀಡಲು ಅವರ ಮನೆಗೆ ತೆರಳಿದ್ದರು. ಈ ವೇಳೆ ನೋಟಿಸ್ ಸ್ವೀಕರಿಸದೇ ಪೊಲೀಸರನ್ನು ವಾಪಸ್ ಕಳಿಸಿದ್ದರು. ಇದನ್ನೂ ಓದಿ: ʻನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನ್ ಸಂಬಂಧ?ʼ ಎಂದಿದ್ದ ಸಿ.ಟಿ.ರವಿ ವಿರುದ್ಧ FIR