ರಿಷಬ್ ಶೆಟ್ಟಿಯ ಛತ್ರಪತಿ ಶಿವಾಜಿ ಮಹಾರಾಜ್ ಸಿನಿಮಾಗೆ ನಟಿ ಭೂಮಿ ಪೆಡ್ನೇಕರ್ ಎಂಟ್ರಿ
`ಕಾಂತಾರ’ ಖ್ಯಾತಿಯ ರಿಷಬ್ ಶೆಟ್ಟಿ (Rishab Shetty) ನಟಿಸುತ್ತಿರುವ ಬಹುನಿರೀಕ್ಷಿತ ಐತಿಹಾಸಿಕ ಚಿತ್ರ `ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್’ ಚಿತ್ರತಂಡಕ್ಕೆ ಬಾಲಿವುಡ್ ನಟಿ ಭೂಮಿ ಪೆಡ್ನೇಕರ್ (Bhumi Pednekkar) ಅಧಿಕೃತವಾಗಿ ಸೇರಿಕೊಂಡಿದ್ದಾರೆ. ಸಂದೀಪ್ ಸಿಂಗ್ ನಿರ್ದೇಶಿಸಿ, ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಛತ್ರಪತಿ ಶಿವಾಜ

`ಕಾಂತಾರ’ ಖ್ಯಾತಿಯ ರಿಷಬ್ ಶೆಟ್ಟಿ (Rishab Shetty) ನಟಿಸುತ್ತಿರುವ ಬಹುನಿರೀಕ್ಷಿತ ಐತಿಹಾಸಿಕ ಚಿತ್ರ `ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್’ ಚಿತ್ರತಂಡಕ್ಕೆ ಬಾಲಿವುಡ್ ನಟಿ ಭೂಮಿ ಪೆಡ್ನೇಕರ್ (Bhumi Pednekkar) ಅಧಿಕೃತವಾಗಿ ಸೇರಿಕೊಂಡಿದ್ದಾರೆ. ಸಂದೀಪ್ ಸಿಂಗ್ ನಿರ್ದೇಶಿಸಿ, ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಛತ್ರಪತಿ ಶಿವಾಜಿ ಮಹಾರಾಜ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದರೆ, ಭೂಮಿ ಪೆಡ್ನೇಕರ್ ರಾಣಿ `ಬೆಳವಡಿ ಮಲ್ಲಮ್ಮ’ನ ಪಾತ್ರದಲ್ಲಿ ತೆರೆಮೇಲೆ ಬರಲಿದ್ದಾರೆ. ಈ ಮೂಲಕ ಇಬ್ಬರು ಮೊದಲು ಬಾರಿಗೆ ತೆರೆ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಕರೂರು ಕಾಲ್ತುಳಿತ ಸಂತ್ರಸ್ತರಿಗೆ ಉದ್ಯೋಗ ನೀಡಿದ ವಿಜಯ್ಗೆ ಶಾಕ್ – ಆದೇಶವೇ ರದ್ದು ಚಿತ್ರದ ಬಗ್ಗೆ ಮಾತನಾಡಿರುವ ನಟಿ ಭೂಮಿ, `ಮಹಾನ್ ಮರಾಠ ಯೋಧ-ರಾಜ ಛತ್ರಪತಿ ಶಿವಾಜಿ ಮಹಾರಾಜರ ಜೀವನಚರಿತ್ರೆ ಆಧರಿಸಿದ ಈ ಚಿತ್ರದ ಭಾಗವಾಗುತ್ತಿರುವುದು ನನಗೆ ಸಿಕ್ಕ ದೊಡ್ಡ ಗೌರವ. ಕರ್ನಾಟಕದ ಧೀರ ಯೋಧ ರಾಣಿ ಬೆಳವಡಿ ಮಲ್ಲಮ್ಮ ಅವರ ಪಾತ್ರವನ್ನು ದೊಡ್ಡ ಪರದೆಯ ಮೇಲೆ ಜೀವಂತಗೊಳಿಸುತ್ತಿರುವುದು ನನಗೆ ಅತ್ಯಂತ ಖುಷಿ ತಂದಿದೆ. ನಾನು `ಕಾಂತಾರ’ ಚಿತ್ರದ ದೊಡ್ಡ ಅಭಿಮಾನಿ, ರಿಷಬ್ ಶೆಟ್ಟಿ ಅವರ ಅದ್ಭುತ ನಟನೆ ನನ್ನನ್ನು ಮೂಕವಿಸ್ಮಿತಳನ್ನಾಗಿಸಿದೆ ಎಂದು ಅನಿಸಿಕೆ ಹಂಚಿಕೊಂಡಿದ್ದಾರೆ. ಮಹಾರಾಜ ಛತ್ರಪತಿ ಶಿವಾಜಿ ಮಹಾರಾಜರ ಸಾಹಸಗಾಥೆಯನ್ನು ಬಿಂಬಿಸುವ ಈ ಚಿತ್ರವು ಎರಡು ಭಾಗಗಳಲ್ಲಿ ಮೂಡಿಬರಲಿದ್ದು, ಮೊದಲ ಭಾಗವು 2027ರ ಜನವರಿ 21ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.ಇದನ್ನೂ ಓದಿ: ಮೆಟ್ರೋ ಹಳಿಗೆ ಬಿದ್ದು ವ್ಯಕ್ತಿ ಆತ್ಮಹತ್ಯೆ – ಯೆಲ್ಲೋ ಲೈನ್ ಸೇವೆ ತಾತ್ಕಾಲಿಕ ಸ್ಥಗಿತ