ಮಲೆ ಮಹದೇಶ್ವರ ವನ್ಯಧಾಮದಲ್ಲಿ ಬೇಟೆಗಾರನಿಗೆ ಗುಂಡೇಟು
ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ (Male Mahadeshwara Wildlife Sanctuary) ಕಾಡುಹಂದಿಗಳನ್ನು ಬೇಟೆಯಾಡಿ ಕೊಂಡೊಯ್ಯತ್ತಿದ್ದ ಆರೋಪಿಗೆ ಅರಣ್ಯ ಇಲಾಖೆ (Forest Department) ಸಿಬ್ಬಂದಿ ಗುಂಡೇಟು ನೀಡಿ ಬಂಧಿಸಿದ್ದಾರೆ. ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆಯ ಕಾಥೇರಿ ಗ್ರಾಮದ ಅನ್ವಿತ್ ಬಂಧಿತ ಆರೋಪಿ. ಈತನ ಜೊತೆಗೆ ಬಂದಿದ್ದ ಮೂವರು ದುಷ್ಕರ್ಮಿಗಳು

ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ (Male Mahadeshwara Wildlife Sanctuary) ಕಾಡುಹಂದಿಗಳನ್ನು ಬೇಟೆಯಾಡಿ ಕೊಂಡೊಯ್ಯತ್ತಿದ್ದ ಆರೋಪಿಗೆ ಅರಣ್ಯ ಇಲಾಖೆ (Forest Department) ಸಿಬ್ಬಂದಿ ಗುಂಡೇಟು ನೀಡಿ ಬಂಧಿಸಿದ್ದಾರೆ. ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆಯ ಕಾಥೇರಿ ಗ್ರಾಮದ ಅನ್ವಿತ್ ಬಂಧಿತ ಆರೋಪಿ. ಈತನ ಜೊತೆಗೆ ಬಂದಿದ್ದ ಮೂವರು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ದರ್ಶನ್, ಮಂಜು ಮತ್ತು ಕಿರಣ್ ಪರಾರಿಯಾದ ಆರೋಪಿಗಳು. ಇದನ್ನೂ ಓದಿ: ಜೀವಂತ ಉಡ ಅಕ್ರಮ ಸಾಗಾಟ; ಇಬ್ಬರ ಬಂಧನ ಅರಣ್ಯ ಸಿಬ್ಬಂದಿ ಕಾರು ಅಡ್ಡಗಟ್ಟಿ ತಪಾಸಣೆ ನಡೆಸುವ ವೇಳೆ ಪ್ರಕರಣ ಬಯಲಿಗೆ ಬಂದಿದೆ. ಕಾರು ಅಡ್ಡಗಟ್ಟುತ್ತಿದ್ದಂತೆ ಆರೋಪಿಗಳು ಪರಾರಿಗೆ ಯತ್ನಿಸಿದ್ದಾರೆ. ಈ ವೇಳೆ ಓರ್ವನಿಗೆ ಗುಂಡೇಟು ನೀಡಿ ಬಂಧಿಸಲಾಗಿದೆ. ಪರಾರಿಯಾದವರಿಗಾಗಿ ಶೋಧ ನಡೆಯುತ್ತಿದೆ. ದಾಳಿ ವೇಳೆ ಎರಡು ಕಾಡುಹಂದಿ, ಒಂದು ಮಚ್ಚು, ಎರಡು ಟಾರ್ಚ್, ಒಂದು ಟಾರ್ಪಲ್, ಒಂದು ಮೊಬೈಲ್ ಹಾಗೂ ಆಲ್ಟೋ ಕಾರನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಅಕ್ರಮವಾಗಿ ಚಿಪ್ಪುಹಂದಿಯ ಚಿಪ್ಪು ಮಾರಾಟಕ್ಕೆ ಯತ್ನಿಸಿದ ವ್ಯಕ್ತಿ ಬಂಧನ
Read the complete story at Public TV Kannada