ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ರೈತರಿಂದ ಅರೆಬೆತ್ತಲೆ ಪ್ರತಿಭಟನೆ
ಮಂಡ್ಯ: ತಮಿಳುನಾಡಿಗೆ ಮುಂದಿನ 15 ದಿನ, ನಿತ್ಯ 3,500 ಕ್ಯುಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣಾ ಸಮಿತಿ (ಸಿ.ಡಬ್ಲ್ಯು.ಆರ್.ಸಿ) ಮಾಡಿರುವ ಶಿಫಾರಸು ವಿರೋಧಿಸಿ ರೈತಸಂಘ ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಮಂಗಳವಾರ ಅರೆಬೆತ್ತಲೆ ಪ್ರತಿಭಟನೆ ಹಾಗೂ ಉರುಳುಸೇವೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.ರಾಜ್ಯದಲ

ಮಂಡ್ಯ: ತಮಿಳುನಾಡಿಗೆ ಮುಂದಿನ 15 ದಿನ, ನಿತ್ಯ 3,500 ಕ್ಯುಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣಾ ಸಮಿತಿ (ಸಿ.ಡಬ್ಲ್ಯು.ಆರ್.ಸಿ) ಮಾಡಿರುವ ಶಿಫಾರಸು ವಿರೋಧಿಸಿ ರೈತಸಂಘ ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಮಂಗಳವಾರ ಅರೆಬೆತ್ತಲೆ ಪ್ರತಿಭಟನೆ ಹಾಗೂ ಉರುಳುಸೇವೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.ರಾಜ್ಯದಲ್ಲಿ ಮುಂಗಾರು ಮಳೆ ಕೈ ಕೊಟ್ಟಿದ್ದು, ರಾಜ್ಯದಲ್ಲಿ ಬರದ ಭೀತಿ ಆವರಿಸಿದೆ. ಇಂತಹ ಪರಿಸ್ಥಿತಿಯಲ್ಲೂ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಶಿಫಾರಸು ಮಾಡಿರುವುದು ಖಂಡನೀಯ ಎಂದು ಕಿಡಿಕಾರಿದರು. ಜೀವನಾಡಿ ಕೆ.ಆರ್.ಎಸ್. ಸೇರಿದಂತೆ ರಾಜ್ಯದ ಎಲ್ಲ ಜಲಾಶಯಗಳು ಬತ್ತಿ ಹೋಗಿ, ಬರದ ಛಾಯೆ ಆವರಿಸಿದೆ. ಮಂಡ್ಯ ಜಿಲ್ಲೆಯ ಕೃಷಿ ಬೆಳೆಗಳಿಗೆ ಸರಿಯಾಗಿ ನೀರು ಸಿಗುತ್ತಿಲ್ಲ. ಕುಡಿಯುವ ನೀರಿಗೂ ತತ್ವಾರ ಎದುರಾಗಿದೆ. ರಾಜ್ಯದ ರೈತರಿಗೆ ಘೋರ ಅನ್ಯಾಯ ಮಾಡುವುದನ್ನು ಸಹಿಸುವುದಿಲ್ಲ ಎಂದು ಘೋಷಣೆ ಮೊಳಗಿಸಿದರು. ಶ್ರೀರಂಗಪಟ್ಟಣದಲ್ಲಿ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಕುವೆಂಪು ವೃತ್ತದ ಬಳಿ, ಬೆಂಗಳೂರು– ಮೈಸೂರು ಹೆದ್ದಾರಿಯಲ್ಲಿ ಖಾಲಿ ತಟ್ಟೆಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದರು. ಕಾವೇರಿ ನೀರು ನಿಯಂತ್ರಣಾ ಸಮಿತಿ ಹಾಗೂ ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ಸಿ.ಟಿ. ಮಂಜುನಾಥ್, ಎಚ್.ಎನ್. ಮಂಜುನಾಥ್, ಕೆ.ಎಸ್.ಸುಧೀರ್, ಜೈಕರ್ನಾಟಕ ಪರಿಷತ್ನ ಎಸ್.ನಾರಾಯಣ, ಶಿವಕುಮಾರ ಆರಾಧ್ಯ, ಹೊಸಹಳ್ಳಿ ಶಿವು ಇತರರು ಭಾಗವಹಿಸಿದ್ದರು.