ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ: ಅಮಿತ್ ಶಾ ರಾಜೀನಾಮೆಗೆ ಆಗ್ರಹ
ಬೀದರ್: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಿದ ಘಟನೆ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮಶಕ್ತಿ) ಆಗ್ರಹಿಸಿದೆ.ಸಂಘಟನೆಯ ಬೀದರ್ ಜಿಲ್ಲಾ ಅಧ್ಯಕ್ಷ ಮುಕೇಶ್ ರಾಯ್ ಭಾನುವಾರ ಪ್ರಕಟಣೆ ಹೊರಡಿಸಿ, ‘ನೀಟ್ ಪ್ರಶ್ನೆಪತ್ರಿಕೆ ಸೋ

ಬೀದರ್: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಿದ ಘಟನೆ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮಶಕ್ತಿ) ಆಗ್ರಹಿಸಿದೆ.ಸಂಘಟನೆಯ ಬೀದರ್ ಜಿಲ್ಲಾ ಅಧ್ಯಕ್ಷ ಮುಕೇಶ್ ರಾಯ್ ಭಾನುವಾರ ಪ್ರಕಟಣೆ ಹೊರಡಿಸಿ, ‘ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ 22 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ವಿದ್ಯಾರ್ಥಿಗಳು ಇದರ ವಿರುದ್ಧ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾಗ ಅವರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ. ಇದರ ನೈತಿಕ ಹೊಣೆ ಹೊತ್ತು ಸಚಿವ ಅಮಿತ್ ಶಾ ತಮ್ಮ ಹುದ್ದೆಗೆ ರಾಜೀನಾಮೆ ಕೊಡಬೇಕು. ಅವರು ರಾಜೀನಾಮೆ ನೀಡದಿದ್ದರೆ ಪ್ರಧಾನಿ ಹಾಗೂ ರಾಷ್ಟ್ರಪತಿ ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.22 ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ ₹1 ಕೋಟಿ ಪರಿಹಾರ ನೀಡಬೇಕು. ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ಕಲ್ಪಿಸಬೇಕು. ಪ್ರತಿಭಟನೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿರುವ ಎಲ್ಲಾ ಪ್ರಕರಣಗಳನ್ನು ಕೇಂದ್ರ ಸರ್ಕಾರ ತಕ್ಷಣವೇ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260728-33-1515831968