ತಮಿಳುನಾಡಿಗೆ ನೀರು ಹರಿಸಲು ಶಿಫಾರಸು: ಭೂಮಿತಾಯಿ ಹೋರಾಟ ಸಮಿತಿಯಿಂದ ಪ್ರತಿಭಟನೆ
ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ): ತಮಿಳುನಾಡಿಗೆ ಮುಂದಿನ 15 ದಿನಗಳವರೆಗೆ, ಪ್ರತಿ ದಿನ 3,500 ಕ್ಯುಸೆಕ್ ನೀರು ಹರಿಸಬೇಕು ಎಂಬ ಕಾವೇರಿ ನೀರು ನಿಯಂತ್ರಣಾ ಸಮಿತಿಯ ಶಿಫಾರಸು ವಿರೋಧಿಸಿ ಭೂಮಿತಾಯಿ ಹೋರಾಟ ಸಮಿತಿಯ ರೈತರು ಪಟ್ಟಣದಲ್ಲಿ ಮಂಗಳವಾರ ಪಂಜು ಹಿಡಿದು ಪ್ರತಿಭಟನೆ ನಡೆಸಿದರು.ರೈತ ನಾಯಕ ಕೆ.ಎಸ್. ನಂಜುಂಡೇಗೌಡ ಅವರ ನೇತೃತ್ವದಲ್ಲಿ ಪಟ್ಟಣದ ಮೈಸೂರು-ಬೆಂಗಳೂರು

ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ): ತಮಿಳುನಾಡಿಗೆ ಮುಂದಿನ 15 ದಿನಗಳವರೆಗೆ, ಪ್ರತಿ ದಿನ 3,500 ಕ್ಯುಸೆಕ್ ನೀರು ಹರಿಸಬೇಕು ಎಂಬ ಕಾವೇರಿ ನೀರು ನಿಯಂತ್ರಣಾ ಸಮಿತಿಯ ಶಿಫಾರಸು ವಿರೋಧಿಸಿ ಭೂಮಿತಾಯಿ ಹೋರಾಟ ಸಮಿತಿಯ ರೈತರು ಪಟ್ಟಣದಲ್ಲಿ ಮಂಗಳವಾರ ಪಂಜು ಹಿಡಿದು ಪ್ರತಿಭಟನೆ ನಡೆಸಿದರು.ರೈತ ನಾಯಕ ಕೆ.ಎಸ್. ನಂಜುಂಡೇಗೌಡ ಅವರ ನೇತೃತ್ವದಲ್ಲಿ ಪಟ್ಟಣದ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ, ಕುವೆಂಪು ವೃತ್ತದ ಬಳಿ ಅರ್ಧ ತಾಸು ಪ್ರತಿಭಟಿಸಿದರು. ಕಾವೇರಿ ನೀರು ನಿಯಂತ್ರಣಾ ಸಮಿತಿ, ರಾಜ್ಯ ಸರ್ಕಾರ, ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಹೆದ್ದಾರಿಯ ಮಧ್ಯೆ ನಿಂತು ಪಂಜುಗಳನ್ನು ಪ್ರದರ್ಶಿಸಿದರು.ಭೂಮಿತಾಯಿ ಹೋರಾಟ ಸಮಿತಿ ಅಧ್ಯಕ್ಷ ಬಿ.ಸಿ. ಕೃಷ್ಣೇಗೌಡ ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದ್ದರು.
Read the complete story at Prajavani