ಗಿಗ್ ಕಾರ್ಮಿಕರ ಕಲ್ಯಾಣ ಕಾಯ್ದೆ ಸಿಂಧುತ್ವ: ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶ
ಬೆಂಗಳೂರು: ಗಿಗ್ ಕಾರ್ಮಿಕರ ಕ್ಷೇಮಾಭಿವೃದ್ಧಿಗೆ ಪ್ಲ್ಯಾಟ್ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಕಾಯ್ದೆ–2025 ಹಾಗೂ ಇದರಡಿ ರೂಪಿಸಿರುವ ನಿಯಮಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.ಈ ಸಂಬಂಧ ‘ಊಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇ

ಬೆಂಗಳೂರು: ಗಿಗ್ ಕಾರ್ಮಿಕರ ಕ್ಷೇಮಾಭಿವೃದ್ಧಿಗೆ ಪ್ಲ್ಯಾಟ್ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಕಾಯ್ದೆ–2025 ಹಾಗೂ ಇದರಡಿ ರೂಪಿಸಿರುವ ನಿಯಮಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.ಈ ಸಂಬಂಧ ‘ಊಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ’ಯ ಅಧಿಕೃತ ಪ್ರತಿನಿಧಿ ಅಕ್ಷಯ ಮುರಳಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿ, ಕೇಂದ್ರ ಸರ್ಕಾರದ ಕಾರ್ಮಿಕ ಸಚಿವಾಲಯ, ಕರ್ನಾಟಕ ಪ್ಲ್ಯಾಟ್ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಲಾಗಿದೆ.ಇದೇ ವೇಳೆ ನ್ಯಾಯಪೀಠವು, ‘ಗಿಗ್ ಕಾರ್ಮಿಕರ ಕ್ಷೇಮಾಭಿವೃದ್ಧಿಗೆ ಸಂಬಂಧಿಸಿದ ಎರಡನೇ ಕಂತಿನ ಕಲ್ಯಾಣ ಶುಲ್ಕವನ್ನು ಮೂರು ಜುಲೈ 23ರೊಳೆಗೆ ಹೈಕೋರ್ಟ್ನಲ್ಲಿ ಠೇವಣಿ ಇಡಬೇಕು ಎಂದು ಮತ್ತೊಂದು ನ್ಯಾಯಪೀಠ ಜುಲೈ 3ರಂದು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಜುಲೈ 28ರಿಂದ ಮುಂದಿನ ಮೂರು ವಾರಗಳೆಂದು ಪರಿಗಣಿಸಬೇಕು’ ಎಂದು ನಿರ್ದೇಶನ ನೀಡಿತು.ಅಂತೆಯೇ, ‘ಇದೇ ವಿಷಯಕ್ಕೆ ಸಂಬಂಧಿಸಿದಂತೆ ಇಂಟರ್ನೆಟ್ ಆ್ಯಂಡ್ ಮೊಬೈಲ್ ಅಸೋಸಿಯೇಷನ್ ಆಫ್ ಇಂಡಿಯಾ ಸಲ್ಲಿಸಿರುವ ಅರ್ಜಿಯನ್ನೂ ಇದೇ ಅರ್ಜಿಯ ಜೊತೆಯಲ್ಲಿ ವಿಚಾರಣೆಗೆ ನಿಗದಿಪಡಿಸಿ’ ಎಂದು ರಿಜಿಸ್ಟ್ರಿಗೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಆಗಸ್ಟ್ 24ಕ್ಕೆ ಮುಂದೂಡಿತು.