ಕಾಲುವೆ ನೀರು ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಬೆಳೆ ಹಾನಿ – ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ
ರಾಯಚೂರು: ಜಿಲ್ಲೆಯ ದೇವದುರ್ಗ (Devadurga) ತಾಲೂಕಿನ ಇಂಗಳದಾಳದಲ್ಲಿ ನಾರಾಯಣಪುರ ಬಲದಂಡೆ ಕಾಲುವೆ ನೀರು ಜಮೀನಿಗೆ ನುಗ್ಗಿ ಲಕ್ಷಾಂತರ ರೂಪಾಯಿ ಬೆಳೆಹಾನಿಯಾಗಿದೆ. ಕಾಲುವೆಯಲ್ಲಿ ಹೂಳು ತುಂಬಿ, ಗಿಡಗಂಟೆ ಬೆಳೆದ ಹಿನ್ನೆಲೆ ಜಮೀನುಗಳಿಗೆ ನೀರು ನುಗ್ಗಿದೆ. ಅಲ್ಲದೇ ಕಾಲುವೆಗೆ ನೀರು ಹರಿಸುವ ಮುನ್ನ ಜಂಗಲ್ ಕಟ್ ಮಾಡದ ಹಿನ್ನೆಲೆ ಅನಾಹುತ ನಡೆದಿದೆ. ಇದನ್ನೂ ಓದಿ: ಪತ್ನಿಗ

ರಾಯಚೂರು: ಜಿಲ್ಲೆಯ ದೇವದುರ್ಗ (Devadurga) ತಾಲೂಕಿನ ಇಂಗಳದಾಳದಲ್ಲಿ ನಾರಾಯಣಪುರ ಬಲದಂಡೆ ಕಾಲುವೆ ನೀರು ಜಮೀನಿಗೆ ನುಗ್ಗಿ ಲಕ್ಷಾಂತರ ರೂಪಾಯಿ ಬೆಳೆಹಾನಿಯಾಗಿದೆ. ಕಾಲುವೆಯಲ್ಲಿ ಹೂಳು ತುಂಬಿ, ಗಿಡಗಂಟೆ ಬೆಳೆದ ಹಿನ್ನೆಲೆ ಜಮೀನುಗಳಿಗೆ ನೀರು ನುಗ್ಗಿದೆ. ಅಲ್ಲದೇ ಕಾಲುವೆಗೆ ನೀರು ಹರಿಸುವ ಮುನ್ನ ಜಂಗಲ್ ಕಟ್ ಮಾಡದ ಹಿನ್ನೆಲೆ ಅನಾಹುತ ನಡೆದಿದೆ. ಇದನ್ನೂ ಓದಿ: ಪತ್ನಿಗೆ ನೇಣು ಹಾಕಿ ಒದ್ದಾಡುವುದನ್ನು ಅತ್ತೆ – ಮಾವನಿಗೆ ವಿಡಿಯೋ ಕಾಲ್ ಮಾಡಿ ತೋರಿಸಿದ ಸೈಕೋ ಪತಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ಹತ್ತಿ ಬೆಳೆ ಹಾನಿಯಾಗಿದ್ದು, ರೈತರು ಕಂಗಾಲಾಗಿದ್ದಾರೆ. ನಾರಾಯಣಪುರ ಬಲದಂಡೆ ಕಾಲುವೆಯ 17ನೇ ಉಪಕಾಲುವೆಯಲ್ಲಿ ಗಿಡ ಗಂಟೆಗಳು ಬೆಳೆದಿದ್ದು, ಇಂಗಳದಾಳ, ಬೂದಿನಾಳ ಜಮೀನುಗಳಿಗೆ ನೀರು ನುಗ್ಗಿದೆ. ಬೇರೆ ದಾರಿಯಿಲ್ಲದೇ ಜೆಸಿಬಿಯಿಂದ ಸ್ವತಃ ರೈತರೇ ಕಾಲುವೆ ಸ್ವಚ್ಛ ಮಾಡಿಕೊಂಡಿದ್ದಾರೆ. ಕೆಬಿಜೆಎನ್ಎಲ್ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ರೈತರು ಆಕ್ರೋಶ ಹೊರಹಾಕಿದ್ದಾರೆ.ಇದನ್ನೂ ಓದಿ: ಅಮರನಾಥ ಯಾತ್ರಿಕರ ಬಸ್ ಅಪಘಾತ – ಸಿಂಧ್ ನದಿಗೆ ಬೀಳುತ್ತಿದ್ದ ವಾಹನ ಅದೃಷ್ಟವಶಾತ್ ಪಾರು, 39 ಜನರಿಗೆ ಗಾಯ